ಹೊನಕೆರೆ ನಂಜುಂಡೇ ಗೌಡರಿಗೆ ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ

ಬೆಂಗಳೂರು: ಖಾದ್ರಿ ಶಾಮಣ್ಣ ಪತ್ರಿಕೋದ್ಯಮ ಪ್ರಶಸ್ತಿ ಈ ಬಾರಿ ಹಿರಿಯ ಪತ್ರಕರ್ತರಾದ ಬಳ್ಳಾರಿಯ ವಿಶೇಷ ವರದಿಗಾರರಾದ ಹೊನಕೆರೆ ನಂಜುಂಡೇ ಗೌಡ ಅವರಿಗೆ ಲಭಿಸಿದೆ. ಅವರು ಪ್ರಜಾವಾಣಿ ಪತ್ರಿಕೆಯಲ್ಲಿ ಹಲವು ದಶಕಗಳಿಂದ ವಿವಿಧ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸಿ ಕನ್ನಡ ಪತ್ರಿಕೋದ್ಯಮಕ್ಕೆ ಉತ್ತಮ ಸೇವೆ ಸಲ್ಲಿಸಿರುತ್ತಾರೆ.

ಇದುವರೆಗೆ ಈ ಪ್ರಶಸ್ತಿಯನ್ನು 29 ಹಿರಿಯ ಪತ್ರಕರ್ತರು ಪಡೆದಿದ್ದು, ಇವರು ೩೦ನೇಯವರು. ಪ್ರಶಸ್ತಿ 15ಸಾವಿರ ರೂ ನಗದು ಹಾಗೂ ಫಲಕ ಹೊಂದಿದೆ. ನಂಜುoಡೇಗೌಡರು ನಡೆ-ನುಡಿಯಲ್ಲಿ ಕಟ್ಟುನಿಟ್ಟು. ಮೈಸೂರಿನ ಪತ್ರಕರ್ತರ ಪಡೆಗೆ ಸೇರಿದ ಇವರು ದೆಹಲಿ, ಧಾರವಾಡ, ಶಿವಮೊಗ್ಗ, ದಾವಣಗೆರೆ, ಬೆಂಗಳೂರಿನಲ್ಲಿ ಕೆಲಸ ಮಾಡಿ ಸೈ ಎನಿಸಿಕೊಂಡವರು. ಪತ್ರಕರ್ತನಾದವನಿಗೆ ಹಳ್ಳಿಯಿಂದ ದಿಲ್ಲಿಯವರೆಗೆ ಅನುಭವ ಇರಬೇಕೆಂದು ಹೇಳುವುದುಂಟು. ಅದರಂತೆ ಹೊನಕೆರೆ ನುಂಜುಂಡೇಗೌಡ ಅಪಾರ ಅನುಭವ ಪಡೆದುಕೊಂಡಿದ್ದಾರೆ.

ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಹೊನಕೆರೆ ಇವರ ಗ್ರಾಮ. ಗ್ರಾಮೀಣ ಭಾಷೆಯ ಗಮ್ಮತ್ತು ಅವರ ಮಾತಿನಲ್ಲಿ ಹಾಗೆ ಉಳಿದುಕೊಂಡಿದೆ. ಒಟ್ಟು 35 ವರ್ಷಗಳ ಅನುಭವ. ಜಿ-20 ಸಮ್ಮೇಳನದಿಂದ ಹಿಡಿದು ಧಾರವಾಡ ಜಿಲ್ಲೆಯ ಸತ್ತೂರು ಗ್ರಾಮದ ರೈತನ ಆತ್ಮಹತ್ಯೆವರೆಗೆ ಎಲ್ಲ ಆಗುಹೋಗುಗಳನ್ನು ವಸ್ತುನಿಷ್ಠವಾಗಿ ವರದಿ ಮಾಡಿದವರು. ಮನಮೋಹನಸಿಂಗ್, ಎಸ್.ಎಂ. ಕೃಷ್ಣ ಅವರೊಂದಿಗೆ ಪಾಕಿಸ್ತಾನ, ಸೌದಿ ಅರೇಬಿಯಾ ಕಂಡವರು. ನೇಪಾಳ ಭೂಕಂಪದ ನೋವನ್ನು ಅನುಭವಿಸಿದವರು. ಈಗ ಬಳ್ಳಾರಿಯಲ್ಲಿ ಸದ್ದಿಲ್ಲದೆ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಎಚ್ಚರದ ಹದ್ದಿನ ಕಣ್ಣು ಹಾಗೆ ಇದೆ. ಅವರಿಗೆ ಈ ಪ್ರಶಸ್ತಿ ಜೀವಮಾನದ ಸೇವೆಗೆ ಸಂದ ಸಮ್ಮಾನ. ಕಳೆದ ವರ್ಷ ಈ ಪ್ರಶಸ್ತಿಯನ್ನು ಹುಬ್ಬಳ್ಳಿಯ ಹಿರಿಯ ಪತ್ರಕರ್ತ ಗೋಪಾಲ ಹೆಗಡೆ ಅವರಿಗೆ ನೀಡಲಾಗಿತ್ತು.

 

Sneha Gowda

Recent Posts

ಪ್ರಜ್ವಲ್‌ ವಿಡಿಯೋ ಪ್ರಕರಣ: ಸಂತ್ರಸ್ತೆಯರ ನೆರವಿಗೆ ನಿಲ್ಲುವಂತೆ ಸಿದ್ದರಾಮಯ್ಯಗೆ ರಾಹುಲ್‌ ಪತ್ರ

ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರಿಂದ ಅತ್ಯಾಚಾರಕ್ಕೊಳಗಾಗಿರುವ ಸಂತ್ರಸ್ತೆಯರ ನೆರವಿಗೆ ನಿಲ್ಲಿ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು…

3 mins ago

ಪ್ರವಾಸಕ್ಕೆ ಬಂದಿದ್ದ ಬಾಲಕಿ ಭದ್ರಾ ನದಿಯಲ್ಲಿ ಮುಳುಗಿ ದಾರುಣ ಸಾವು

ಪೋಷಕರೊಂದಿಗೆ ಪ್ರವಾಸಕ್ಕೆ ಬಂದಿದ್ದ ಬಾಲಕಿಯೊಬ್ಬಳು ಸ್ನಾನ ಮಾಡಲೆಂದು ನದಿಗೆ ಇಳಿದಿದ್ದಾಗ ನೀರಿನಲ್ಲಿ ಮುಳುಗಿ ಸಾವನಪ್ಪಿರುವ ದಾರುಣ ಘಟನೆ ಕಳಸ ತಾಲೂಕಿನ…

7 mins ago

ರೋಹಿತ್‌ ವೇಮುಲ ದಲಿತನಲ್ಲ : ಮರು ತನಿಖೆಗೆ ತೆಲಂಗಾಣ ಸಿಎಂ ಭರವಸೆ

2016 ರಲ್ಲಿ ನಡೆದ ರೋಹಿತ್‌ ವೇಮುಲ್‌ ಆತ್ಮಹತ್ಯೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿರುವ ಅಂತಿಮ ವರದಿಗೆ ವೇಮುಲ ಕುಟುಂಬದವರು ಆಕ್ರೋಶ ವ್ಯಕ್ತಪಡಿಸಿದ್ದು…

23 mins ago

ಗರ್ಭಿಣಿಯ ಮರ್ಯಾದೆ ಗೇಡು ಹತ್ಯೆ: ಇಬ್ಬರು ಆರೋಪಿಗಳಿಗೆ 4.19 ಲಕ್ಷ ರೂ. ದಂಡ, ಗಲ್ಲು ಶಿಕ್ಷೆ

ಗರ್ಭಿಣಿಯನ್ನು ಮರ್ಯಾದೆ ಗೇಡು ಹತ್ಯೆ ಮಾಡಿದ್ದ ಇಬ್ಬರು ಆರೋಪಿಗಳಿಗೆ ವಿಜಯಪುರ ಜಿಲ್ಲೆಯ ಎರಡನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ…

29 mins ago

ಆಯೋಗದ ನಿಯಮ ಉಲ್ಲಂಘಿಸಿದಲ್ಲಿ ಪ್ರಜಾಪ್ರತಿನಿಧಿ ವಿರುದ್ಧ ಕ್ರಮ ಖಚಿತ : ಡಿಸಿ

ಚುನಾವಣಾ ಆಯೋಗವು ಮೇ. 5, 2024 ರ ಸಾಯಂಕಾಲ 6 ಗಂಟೆಯಿಂದ ಮತದಾನ ದಿನವಾದ ಮೇ. 07, 2024ರಂದು ಮತದಾನ…

49 mins ago

ಜೆಡಿಎಸ್‌ ನಾಯಕರ ಕುಟುಂಬದೊಳಗಿನ ಜಗಳದಿಂದ ಪ್ರಜ್ವಲ್‌ ಪ್ರಕರಣ ಹೊರಬಿದ್ದಿದೆ: ಡಿ.ಕೆ. ಶಿವಕುಮಾರ್‌

ಜೆಡಿಎಸ್‌ ನಾಯಕರ ಕುಟುಂಬದೊಳಗಿನ ಜಗಳದಿಂದ ಪ್ರಜ್ವಲ್‌ ಪ್ರಕರಣ ಹೊರಬಿದ್ದಿದೆ: ಡಿ.ಕೆ. ಶಿವಕುಮಾರ್‌

56 mins ago