ಬೆಂಗಳೂರು ನಗರ

ಶೋಕಾಸ್‌ ನೋಟಿಸ್‌ ಸಿಕ್ಕಿಲ್ಲ, ನನ್ನ ಕೈಗೆ ನೋಟಿಸ್ ಬಂದಾಗ ಉತ್ತರಿಸುತ್ತೇನೆ: ಬಿ.ಕೆ ಹರಿಪ್ರಸಾದ್‌

ಬೆಂಗಳೂರು: “ಹಿಂದಿನ ಯಾವ ಸಿಎಂಗಳೂ ಕೂಡ ಜಾತಿ ರಾಜಕಾರಣ ಮಾಡಲಿಲ್ಲ. ಕಾಗೋಡು ತಿಮ್ಮಪ್ಪ, ಬಂಗಾರಪ್ಪ ಜಾತಿ ರಾಜಕಾರಣ ಮಾಡಲಿಲ್ಲ. ಈಗ ಪಂಚೆ ಹಾಕಿಕೊಂಡು ದುಬಾರಿ ವಾಚ್ ಕಟ್ಟಿಕೊಂಡು, ಖಾಕಿ ಚಡ್ಡಿ ಹಾಕಿ ಸಮಾಜವಾದಿ ಎಂದರೆ ಆಗಲ್ಲ” ಎಂದು ಪರೋಕ್ಷವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದ ಪರಿಷತ್‌ ಸದಸ್ಯ ಬಿ.ಕೆ ಹರಿಪ್ರಸಾದ್‌ಗೆ ಎಐಸಿಸಿ ಶೋಕಾಸ್‌ ನೋಟಿಸ್‌ ಜಾರಿ ಮಾಡಿತ್ತು. ಈ ಬಗ್ಗೆ ಬಿ.ಕೆ. ಹರಿಪ್ರಸಾದ್‌ ಪ್ರತಿಕ್ರಿಯೆ ನೀಡಿದ್ದಾರೆ.

ಬುಧವಾರ ಸುದ್ದಿಗಾರರೊಂದಿಗೆ ಮಾತಾನಾಡಿದ ಅವರು, ಎಐಸಿಸಿಯಿಂದ ಶೋಕಾಸ್ ನೋಟಿಸ್ ನೀಡಿರುವ ವಿಚಾರವನ್ನು ವಾಟ್ಸಾಪ್ ನಲ್ಲಿ ನೋಡಿದ್ದೇನೆ. ನಾನು ಇಂದು ಪ್ರತಿಯನ್ನು ಪಡೆಯಬಹುದು. ನೋಟಿಸ್ ನನ್ನ ಮತ್ತು ಪಕ್ಷದ ನಡುವೆ ಇದೆ. ನನ್ನ ಕೈಗೆ ನೋಟಿಸ್ ಬಂದಾಗ ಉತ್ತರಿಸುತ್ತೇನೆ. ಅವರು ಉತ್ತರಿಸಲು 10 ದಿನಗಳ ಕಾಲಾವಕಾಶ ನೀಡಿದ್ದಾರೆ ಎಂದು ನನಗೆ ಗೊತ್ತಾಯಿತು. ಎಐಸಿಸಿಗೆ ವಿವರಿಸುತ್ತೇನೆ ಎಂದು ತಿಳಿಸಿದ್ದಾರೆ. ಸಂಪುಟದಲ್ಲಿ ಸಚಿವ ಸ್ಥಾನ ನೀಡಿಲ್ಲ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶಗೊಂಡಿರುವ ಹರಿಪ್ರಸಾದ್‌ ತಮ್ಮ ಸಮುದಾಯದ ಸಮಾವೇಶ ನಡೆಸುವ ಮೂಲಕ ಶಕ್ತಿ ಪ್ರದರ್ಶನ ನಡೆಸಿದ್ದರು.

Gayathri SG

Recent Posts

ನಂಜನಗೂಡು ಶ್ರೀ ನಂಜುಂಡೇಶ್ವರನ ದರ್ಶನ ಪಡೆದ ಹೆಚ್. ಡಿ ರೇವಣ್ಣ

ಮಹಿಳೆ ಕಿಡ್ನಾಪ್ ಕೇಸ್ ನಲ್ಲಿ ಜಾಮೀನಿನ ಮೇಲೆ ಜೈಲಿನಿಂದ ಬಿಡುಗಡೆಯಾದ ನಂತರ ದೇವಾಲಯಗಳಿಗೆ ಭೇಟಿ ನೀಡುತ್ತಿರುವ ಮಾಜಿ ಸಚಿವ ಹೆಚ್.…

15 mins ago

ʼನನ್ನನ್ನು ನೋಡಬೇಡಿ, ಅಟಲ್‌ ಸೇತುವೆ ನೋಡಿʼ ಎಂದ ರಶ್ಮಿಕಾಗೆ ಪಿಎಂ ಮೋದಿ ಮೆಚ್ಚುಗೆ

ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…

43 mins ago

ಗಮನ ಸೆಳೆದ ಮಾವು ಮೇಳ; ವಿವಿಧ ತಳಿಯ ಮಾವಿನ ಹಣ್ಣುಗಳ ಪ್ರದರ್ಶನ

ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…

1 hour ago

ಇಂದು ರೀ ರಿಲೀಸ್ ಆದ ಉಪ್ಪಿಯ ‘‘A’’ ಸಿನಿಮಾ; ಸ್ವಾಗತಿಸಿದ ಫ್ಯಾನ್ಸ್

ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್​ ಆಗಿದೆ. ಬೆಂಗಳೂರಿನ…

2 hours ago

ಚಾರ್ ಧಾಮ್​ ಯಾತ್ರೆ, ದೇವಸ್ಥಾನಗಳ ಬಳಿ ರೀಲ್ಸ್​ಗೆ ನಿಷೇಧ

ಚಾರ್​ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…

2 hours ago

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

3 hours ago