ನನ್ನನ್ನು ಸಿಎಂ ಮಾಡಲು ಆಗದಿದ್ದರೆ ನೀವೇ ಮುಖ್ಯಮಂತ್ರಿ ಆಗಿ: ಖರ್ಗೆಗೆ ಆಫರ್‌ ನೀಡಿದ ಶಿವಕುಮಾರ್‌

ಬೆಂಗಳೂರು: ಕಾಂಗ್ರೆಸ್‌ ಬಹುಮತ ಪಡೆದಿದ್ದರೂ ಸಿಎಂ ವಿಚಾರದ ಗೊಂದಲ ಮುಂದುವರಿದಿದೆ. ದೆಹಲಿ ತಲುಪಿರುವ ಡಿ.ಕೆ ಶಿವಕುಮಾರ್‌ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಒನ್‌ ಟು ಒನ್‌ ಚರ್ಚೆ ನಡೆಸಿದ್ದಾರೆ. ಈ ವೇಳೆ ಸಿಎಂ ಸ್ಥಾನಕ್ಕೆ ಪಟ್ಟು ಹಿಡಿದ ಡಿ.ಕೆ. ಶಿವಕುಮಾರ್‌ ಇಷ್ಟು ವರ್ಷ ಕಷ್ಟ ಪಟ್ಟು ಪಕ್ಷ ಬೆಳೆಸಿದ್ದೇನೆ. ಹೀಗಾಗಿ ನನಗೆ ಸಿಎಂ ಸ್ಥಾನ ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ರಾಹುಲ್‌ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ಇಬ್ಬರೂ ಕೂಡ ಸಿದ್ದರಾಮಯ್ಯ ಪರ ಇದ್ದಾರೆ ಎನ್ನಲಾಗಿದ್ದು, ಸಿಎಂ ಸ್ಥಾನ ನೀಡುವುದಾದರೆ ನೀಡಿ ಇಲ್ಲದಿದ್ದಲ್ಲಿ ಸಾಮಾನ್ಯ ಶಾಸಕನಾಗಿ ಇದ್ದು ಬಿಡುತ್ತೇನೆ ಎಂದಿದ್ದಾರೆ. ಡಿ.ಕೆ. ಶಿವಕುಮಾರ್‌ ಅವರನ್ನು ಸಮಾಧಾನಪಡಿಸಲು ಸಾಕಷ್ಟು ಹೊತ್ತು ಖರ್ಗೆ ಕಸರತ್ತು ನಡೆಸಿದರು. ಈ ವೇಳೆ ನನ್ನನ್ನು ಸಿಎಂ ಮಾಡಲು ಆಗದಿದ್ದರೆ ಬಿಡಿ ನೀವೆ ಸಿಎಂ ಆಗಿ ಎಂದು ಡಿ.ಕೆ. ಶಿವಕುಮಾರ್‌ ಖರ್ಗೆ ಅವರಿಗೆ ಆಫರ್‌ ನೀಡಿದ್ದಾರೆ ಎನ್ನಲಾಗಿದೆ.

Umesha HS

Recent Posts

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

6 mins ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

1 hour ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

2 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

2 hours ago

ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ ದಾಳಿ

ಮನೆಯ ಹೊರಗೆ ಆಟಾವಾಡುತ್ತಿದ್ದ ನಾಲ್ಕು ವರ್ಷದ  ಮಕ್ಕಳ ಮೇಲೆ ಬೀದಿ ನಾಯಿಗಳ  ಗ್ಯಾಂಗ್  ಏಕಾಏಕಿ ದಾಳಿ ಮಾಡಿದ ಘಟನೆ ಪಟ್ಟಣದ…

2 hours ago

ಜಿಲ್ಲಾಡಳಿತ ಬೀದರ್ ವತಿಯಿಂದ ಬಸವಣ್ಣ, ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ಬಸವಣ್ಣನವರ ವಿಚಾರಗಳು ಕೇವಲ ನಮ್ಮ ರಾಜ್ಯಕ್ಕೆ ಮಾತ್ರವಲ್ಲ ಅವು ಇಡೀ ನಮ್ಮ ರಾಷ್ಟ್ರದಾದ್ಯಂತ ಇಂದು ಪ್ರಸ್ತುತ ಇವೆ ಎಂದು ಜಿಲ್ಲಾ…

3 hours ago