ಬೆಂಗಳೂರು: ನಿಮಗೆ ತಾಕತ್‌ ಇದ್ರೆ ಬಜರಂಗದಳ ನಿಷೇಧ ಮಾಡಿ- ಶೋಭಾ ಕರಂದ್ಲಾಜೆ

ಬೆಂಗಳೂರು: ಈಗಾಗಲೇ ಐದು ಗ್ಯಾರಂಟಿ ಯೋಜನೆಗಳನ್ನು ಘೋಷಿಸಿರುವ ಕಾಂಗ್ರೆಸ್‌ ಇನ್ನೂ ಹತ್ತು ಹಲವು ಭರವಸೆಗಳನ್ನು ಒಳಗೊಂಡ ಚುನಾವಣಾ ಪ್ರಣಾಳಿಕೆಯನ್ನು ಮಂಗಳವಾರ ಅಧಿಕೃತವಾಗಿ ಬಿಡುಗಡೆ ಮಾಡಿದೆ. ಇದೀಗ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಬಜರಂಗದಳ ನಿಷೇಧ ಎಂದಿರುವುದು ವ್ಯಾಪಕ ಚರ್ಚೆಗೂ ಕಾರಣವಾಗಿದೆ. ಈ ಮಧ್ಯೆ ಕಾಂಗ್ರೆಸ್ ವಿರುದ್ಧ ಸವಾಲು ಹಾಕಿದ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನಿಮಗೆ ತಾಕತ್‌ ಇದ್ರೆ ಭಜರಂಗದಳ ನಿಷೇಧ ಮಾಡಿ ನೋಡಿ ಎಂದು ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ವಿರುದ್ಧ ಕೆಂಡಾಮಂಡಲರಾಗಿ  ಕಾಂಗ್ರೆಸ್‌ನ ವಿನಾಶ ಕಾಲ‌ ಸಮೀಪಿಸಿದೆ. ಈಗಾಗಲೇ ಕೇಂದ್ರ ಸರ್ಕಾರ ಪಿಎಫ್ಐ ನಿಷೇಧ ಮಾಡಿದೆ. ಇವತ್ತು ಕಾಂಗ್ರೆಸ್‌ನವರು ಪಿಎಫ್ಐ ನಿಷೇಧ ಮಾಡ್ತೀವಿ. ಜತೆಗೆ ಭಜರಂಗದಳ ನಿಷೇಧ ಮಾಡ್ತೀವಿ ಎಂದಿದ್ದಾರೆ. ಕಾಂಗ್ರೆಸ್‌ನವರ ಟಾರ್ಗೆಟ್ ಇರೋದು ಪಿಎಫ್ಐ ಅಲ್ಲ, ಅವರ ಟಾರ್ಗೆಟ್ ಭಜರಂಗದಳ ಎಂದು ವಾಗ್ದಾಳಿ ನಡೆಸಿದ್ದಾರೆ.

Gayathri SG

Recent Posts

ಹಳ್ಳಕ್ಕೆ ತಡೆಗೋಡೆ ನಿರ್ಮಾಣ: ತೆರವಿಗೆ ಆಗ್ರಹಿಸಿ ಮನವಿ

ಕೊಪ್ಪಾ ತಾಲೂಕಿನ ಕಾಡ್ಕೆರೆಯಲ್ಲಿ ಕುಡಿಯುವ ನೀರಿನ ಹಳ್ಳಕ್ಕೆ ಪ್ರಭಾವಿಗಳು ನಿರ್ಮಿಸಿರುವ ತಡೆಗೋಡೆಯನ್ನು ತೆರವುಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿ ಜಿಲ್ಲಾಡಳಿತವನ್ನು…

8 mins ago

ಆನೆ ಸೆರೆ ಕಾರ್ಯಾಚರಣೆಗೆ ಸಿದ್ಧತೆ: ಪುಂಡಾನೆ ಪತ್ತೆಗೆ ಟ್ರ್ಯಾಪ್ ಕ್ಯಾಮೆರಾ

ಕಾಡಾನೆ ಹಾವಳಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಒಂದು ವರ್ಷದ ಅವಧಿಯಲ್ಲಿ ಐದು ಜನ ಪ್ರಾಣ ಕಳೆದುಕೊಂಡಿದ್ದಾರೆ.

24 mins ago

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಇಬ್ಬರ ಕೊಲೆ

ಮಾರಕಾಸ್ತ್ರಗಳಿಂದ ಕೊಚ್ಚಿ, ತಲೆ ಮೇಲೆ ಕಲ್ಲು ಎತ್ತಿಹಾಕಿ ಜೋಡಿ ಕೊಲೆ ಮಾಡಲಾದ ಘಟನೆ ಶಿವಮೊಗ್ಗದ ಲಷ್ಕರ್ ಮೊಹಲ್ಲಾದಲ್ಲಿ ನಡೆದಿದೆ.

36 mins ago

ರೈತರ ಕಷ್ಟ ಕೇಳುವವರಿಲ್ಲ: ವಿನಯ್ ಗುರೂಜಿ ವಿಷಾದ

ದೊಡ್ಡ ದೊಡ್ಡವರ ಕಷ್ಟ ಕೇಳಲು ದೊಡ್ಡ ದೊಡ್ಡವರಿದ್ದಾರೆ. ಆದರೆ ಜಗತ್ತಿಗೆ ಅನ್ನ ನೀಡುವ ರೈತನ ಕಷ್ಟ ಕೇಳುವ ಮನಸ್ಸು ದೊಡ್ಡವರಿಗಿಲ್ಲ…

49 mins ago

ಕೈಕೊಟ್ಟ ಶೀತಲಯಂತ್ರಗಳಿಂದ ಶವಾಗಾರದಲ್ಲಿ ದುರ್ವಾಸನೆ

ಎಲ್ಲರೂ ಮೂಗುಮುಚ್ಚಿಕೊಂಡು ಓಡಾಡುವ ಪರಿಸ್ಥಿತಿ ಮೈಸೂರಿನ ಸರ್ಕಾರಿ ಮೆಡಿಕಲ್ ಕಾಲೇಜು  ಬಳಿಯ ಶವಾಗಾರದ ಬಳಿ ಎದುರಾಗಿದೆ. ಇದಕ್ಕೆ ಶವಾಗಾರದ ಶೀತಲ…

55 mins ago

ಸಾಗರೋತ್ತರ ಕಾಂಗ್ರೆಸ್‌  ಅಧ್ಯಕ್ಷ ಸ್ಥಾನಕ್ಕೆ ಸ್ಯಾಮ್‌ ಪಿತ್ರೋಡಾ ರಾಜೀನಾಮೆ

“ದಕ್ಷಿಣ ಭಾರತೀಯರು ಆಫ್ರಿಕನ್ನರಂತೆ ಇದ್ದಾರೆ” ಎಂಬುದಾಗಿ ಹೇಳುವ ಮೂಲಕ ಮನುಷ್ಯರ ಚರ್ಮದ ಬಣ್ಣದ ಕುರಿತು ಕೀಳು ಹೇಳಿಕೆ ನೀಡಿ ವಿವಾದ…

1 hour ago