News Karnataka Kannada
Sunday, April 28 2024
ಬೆಂಗಳೂರು ನಗರ

ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ ವೇಳಾಪಟ್ಟಿ ಪ್ರಕಟ

ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಆರಂಭವಾಗಲಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ.ಮಾರ್ಚ್ 1ರಂದು ಆರಂಭ ಆಗುವ ಈ ಪರೀಕ್ಷೆ ಮಾ.22 ರ ವರೆಗೆ ನಡೆಯಲಿದೆ. ಬೆಳಗ್ಗೆ 10:15 ರಿಂದ ಮಧ್ಯಾಹ್ನ 1:30 ರ ವರೆಗೆ ಪರೀಕ್ಷೆಗಳು ನಡೆಯಲಿವೆ.
Photo Credit : Freepik

ಬೆಂಗಳೂರು: ದ್ವಿತೀಯ ಪಿಯುಸಿ ಪ್ರಿಪರೇಟರಿ ಮತ್ತು ಪ್ರಥಮ ಪಿಯುಸಿಯ ಅಂತಿಮ ಪರೀಕ್ಷೆಯ ವೇಳಾಪಟ್ಟಿ ಪ್ರಕಟವಾಗಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಪ್ರಥಮ ಪಿಯುಸಿ ವಾರ್ಷಿಕ ಪರೀಕ್ಷೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, 2024ರ ಫೆ.13ರಿಂದ 28ರ ವರೆಗೆ ನಡೆಯಲಿವೆ. ಇನ್ನು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಪೂರ್ವಭಾವಿಯಾಗಿ ಜಿಲ್ಲಾ ಹಂತದಲ್ಲಿ ಪೂರ್ವ ಸಿದ್ಧತಾ ಪರೀಕ್ಷೆ ಜನವರಿ 16ರಿಂದ 30ರ ನಡುವೆ ಜಿಲ್ಲಾಮಟ್ಟದಲ್ಲಿ ನಡೆಸಲು ಸೂಚನೆ ನೀಡಲಾಗಿದೆ.

ಫೆಬ್ರುವರಿ.13- ಕನ್ನಡ, ಅರೇಬಿಕ್, ಫೆ.14- ಹಿಂದಿ, ಫೆ.15- ರಾಜ್ಯಶಾಸ, ಸಂಖ್ಯಾಶಾಸ, ಫೆ.16- ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋಮೊಬೈಲ್, ಹೆಲ್ತ್‌ಕೇರ್, ಬ್ಯೂಟಿ ಆೃಂಡ್ ವೆಲ್‌ವೆಸ್, ಫೆ.17- ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭಶಾಸ್ತ್ರ ಗೃಹ ವಿಜ್ಞಾನ, ಫೆ.19- ಇತಿಹಾಸ, ಭೌತಶಾಸ್ತ್ರ ಫೆ.20- ತಮಿಳು, ತೆಲುಗು, ಮಲಯಾಳಂ, ಮರಾಠಿ, ಉರ್ದು, ಸಂಸ್ಕೃತ, ಫ್ರೆಂಚ್, ಫೆ.21- ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನಶಾಸ, ಮೂಲ ಗಣಿತ, ಫೆ.22- ತರ್ಕಶಾಸ್ತ್ರ, ವ್ಯವಹಾರ ಅಧ್ಯಯನ, ಫೆ 23- ಗಣಿತ, ಶಿಕ್ಷಣ ಶಾಸ್ತ್ರ, ಫೆ.24- ಅರ್ಥಶಾಸ್ತ್ರ, ಫೆ.26- ಸಮಾಜಶಾಸ್ತ್ರ, ವಿದ್ಯುನ್ಮಾನಶಾಸ್ತ್ರ, ಗಣಕ ವಿಜ್ಞಾನ, ಫೆ.27- ಇಂಗ್ಲಿಷ್, ಫೆ.28- ಭೂಗೋಳಶಾಸ್ತ್ರ ಮತ್ತು ಜೀವಶಾಸ್ತ್ರ ಪರೀಕ್ಷೆಗಳು ನಡೆಯಲಿವೆ.

ಇನ್ನು ಎಲ್ಲ ಪರೀಕ್ಷೆಗಳು ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರ ವರೆಗೆ ನಡೆಯಲಿವೆ. 80 ಅಂಕಗಳಿಗೆ ಪರೀಕ್ಷೆ ನಡೆಯಲಿದ್ದು, 20 ಅಂಕಗಳಿಗೆ ಆಂತರಿಕ ಮೌಲ್ಯಮಾಪನವಿರಲಿದೆ. ಆಯಾ ಜಿಲ್ಲೆಗಳ ಉಪನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, (ಪದವಿ ಪೂರ್ವ) ರವರು ಜಿಲ್ಲಾ ಮಟ್ಟದಲ್ಲಿ ವೇಳಾ ಪಟ್ಟಿ ಸಿದ್ಧಪಡಿಸಿ ಪ್ರಿಪರೇಟರಿ ಪರೀಕ್ಷೆ ನಡೆಸಲು ಸೂಚಿಸಲಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು