ಇಂದಿನಿಂದ ರಾಜ್ಯಾದ್ಯಂತ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭ

ಬೆಂಗಳೂರು: ಇಂದಿನಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1 ಆರಂಭವಾಗಲಿದೆ. ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಮಾರ್ಚ್ 1ರಂದು ಆರಂಭ ಆಗುವ ಈ ಪರೀಕ್ಷೆ ಮಾ.22 ರ ವರೆಗೆ ನಡೆಯಲಿದೆ. ಬೆಳಗ್ಗೆ 10:15 ರಿಂದ ಮಧ್ಯಾಹ್ನ 1:30 ರ ವರೆಗೆ ಪರೀಕ್ಷೆಗಳು ನಡೆಯಲಿವೆ. ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಲಾಗಿದೆ.

ಪ್ರಶ್ನೆ ಪತ್ರಿಕೆ ಸೋರಿಕೆ ಸೇರಿದಂತೆ ಯಾವುದೇ ಪರೀಕ್ಷಾ ಅಕ್ರಮಗಳು ನಡೆಯದಂತೆ ನೋಡಿಕೊಳ್ಳಲು ಕ್ರಮ ವಹಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿ ಬೆಳಗ್ಗೆ 9:30 ರಿಂದ ಮಧ್ಯಾಹ್ನ 2 ರ ವರೆಗೆ ಜೆರಾಕ್ಸ್ ಅಂಗಡಿಗಳು ಬಂದ್ ಆಗಲಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದ್ವಿತೀಯ ಪಿಯುಸಿ ಪರೀಕ್ಷೆ ಬರೆಯಲಿರುವ ವಿದ್ಯಾರ್ಥಿಗಳಿಗೆ ಕೆಎಸ್‌ಆರ್‌ಟಿಸಿ ಪರೀಕ್ಷಾ ಕೇಂದ್ರಕ್ಕೆ ತೆರಳಲು ಹಾಗೂ ಮನೆಗೆ ಹಿಂದಿರುಗಲು ವಿದ್ಯಾರ್ಥಿಗಳಿಗೆ ಉಚಿತ ಬಸ್‌ ವ್ಯವಸ್ಥೆ ಕಲ್ಪಿಸಿದೆ. ವಿದ್ಯಾರ್ಥಿಗಳು ತಮ್ಮ ಹಾಲ್‌ ಟಿಕೆಟ್‌ ತೋರಿಸಿ ಬಸ್‌ನಲ್ಲಿ ಉಚಿತವಾಗಿ ಪ್ರಯಾಣಿಸಬಹುದು.

Gayathri SG

Recent Posts

ಕಾಂಗ್ರೆಸ್ ಪರ ಮತ ಹಾಕಿಸಿದ್ದಕ್ಕೆ ಯುವಕನ ಕೊಲೆ

ಚುನಾವಣೆ ಮುಗಿದರೂ ಹಗೆತನ ಮುಗಿಯಲಿಲ್ಲ. ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದಕ್ಕೆ ಯುವಕನೊಬ್ಬ ಕೊಲೆಯಾಗಿದ್ದಾನೆ. ಜಾವೀದ್ ಚಿನ್ನಮಳ್ಳಿ (25)ಹತ್ಯೆಯಾದವನು. ಕಲಬುರಗಿಯ ಅಫಜಲಪುರ…

10 mins ago

ಆನ್‌ಲೈನ್ ಟ್ರೇಡಿಂಗ್: 17.35 ಲಕ್ಷ ರೂ. ವಂಚನೆ

ಆನ್‌ಲೈನ್ ಪಾರ್ಟ್‌ಟೈಮ್ ಕೆಲಸ ಹಾಗೂ ಆನ್‌ಲೈನ್ ಟ್ರೇಡಿಂಗ್ ಮೇಸೆಜ್ ನ‌ ಬಲೆಗೆ ಬಿದ್ದ ವ್ಯಕ್ತಿಯೊಬ್ಬರು ಬರೋಬ್ಬರಿ 17.35 ಲಕ್ಷ ರೂ.…

30 mins ago

ಬಿಸಿಲಿನ ತಾಪ, ಮೇವಿನ ಕೊರತೆಯಿಂದ ಸಾವಿಗೀಡಾಗುತ್ತಿವೆ ಸಾಕುಪ್ರಾಣಿಗಳು

ಹೆಚ್ಚುತ್ತಿರುವ ಬಿಸಿಲಿನ ತಾಪ ಹಾಗೂ ಸಮರ್ಪಕ ಮೇವು ದೊರಕದೆ ಕಾಡಂಚಿನ ಗ್ರಾಮಗಳ ಜಾನುವಾರು, ಸಾಕುಪ್ರಾಣಿಗಳು ಸಾವಿಗೀಡಾಗುತ್ತಿವೆ.

51 mins ago

ದೊಡ್ಡಬಳ್ಳಾಪುರ: ಹಳೇ ದ್ವೇಷಕ್ಕೆ ಯುವಕನ ಕತ್ತು ಕುಯ್ದು ಕೊಲೆ

ಹಳೇ ದ್ವೇಷಕ್ಕೆ ನಡುರಸ್ತೆಯಲ್ಲಿ ಯುವಕನ ಕತ್ತು ಕುಯ್ದು ಕೊಲೆ ಮಾಡಿದ ಘಟನೆ ದೊಡ್ಡಬಳ್ಳಾಪುರ ಹೊರವಲಯ ನವೋದಯ ಶಾಲೆಯ ಮುಂಭಾಗದಲ್ಲಿ ನಡೆದಿದೆ.

1 hour ago

ಕೇಂದ್ರ ಸೂಚನೆ ನೀಡಿದ ಕೂಡಲೇ ರಾಜ್ಯದಲ್ಲಿ ಸಿಎಎ ಅನುಷ್ಠಾನ: ಮೋಹನ್‌ ಯಾದವ್‌

ದೇಶಾದ್ಯಂತ ಚುನಾವಣೆಗ ಅಂತ್ಯಗೊಳುವುದಕ್ಕೂ ಮುನ್ನ ವಿವಿಧ ರಾಜ್ಯಗಳಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ಪ್ರಕ್ರಿಯೆ ಆರಂಭಿಸಬೇಕೆಂದು ಕೇಂದ್ರ ನಿರ್ಧರಿಸಿದೆ.

1 hour ago

ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಮಾನಸಿಕ ಅಸ್ವಸ್ಥ

ವ್ಯಕ್ತಿಯೊಬ್ಬ ತನ್ನ ತಾಯಿ, ಹೆಂಡತಿ ಮತ್ತು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಉತ್ತರ ಪ್ರದೇಶದ  ಸೀತಾಪುರದಲ್ಲಿ ನಡೆದಿದೆ.

2 hours ago