News Karnataka Kannada
Wednesday, May 08 2024
ಬೆಂಗಳೂರು ನಗರ

ಇಂದಿನಿಂದ 5 ದಿನ ಮಳೆ ಸಾಧ್ಯತೆ: ಹವಾಮಾನ ಇಲಾಖೆ ಮುನ್ಸೂಚನೆ

Heavy rain warning in next 5 days
Photo Credit :

ಬೆಂಗಳೂರು: ರಾಜ್ಯಾದ್ಯಂತ ಜೂ. 20ರಿಂದ 24ರ ವರೆಗೆ ಕರಾವಳಿ ಜಿಲ್ಲೆಗಳು, ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡು ಪ್ರದೇಶದಲ್ಲಿ ಉತ್ತಮ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಯೆಲ್ಲೋ ಅಲರ್ಟ್‌ ಘೋಷಿಸಿದೆ.

ನೈಋತ್ಯ ಮುಂಗಾರು ಉತ್ತರ ಒಳನಾಡಿನಲ್ಲಿ ಚುರುಕಾಗಿದ್ದು, ಕರಾವಳಿ ಪ್ರದೇಶದಲ್ಲಿ ದುರ್ಬಲವಾಗಿದೆ. ಸೋಮವಾರದಿಂದ 5 ದಿನಗಳ ಕಾಲ ನಿರಂತರವಾಗಿ ಮಳೆ ಸುರಿಯುವ ಸಾಧ್ಯತೆಗಳಿವೆ ಎಂದು ಮಾಹಿತಿ ನೀಡಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮೂರು ದಿನ ಮಳೆ ಬೀಳುವ ಸಾಧ್ಯತೆಗಳಿವೆ.

ಉತ್ತರ ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಬೆಳಗಾವಿ, ಬೀದರ್‌, ವಿಜಯಪುರ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಾದ ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ 5 ದಿನ ಮಳೆಯ ಬೀಳುವ ಸಾಧ್ಯತೆಗಳಿವೆ ಎಂದು ತಿಳಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು