News Karnataka Kannada
Friday, May 03 2024
ಬೆಂಗಳೂರು ನಗರ

ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆ ಅನುಷ್ಠಾನ

Ramanagara: Farmers reluctant to register crop insurance
Photo Credit :

ಬೆಂಗಳೂರು: ಕೃಷಿ ಇಲಾಖೆಯ ಬೆಳೆ ವಿಮಾ ಯೋಜನೆಗೆ ಸಂಬಂಧಪಟ್ಟಂತೆ 2022ರ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಬಿಮಾ (ವಿಮಾ) ಯೋಜನೆಯಡಿಯಲ್ಲಿ ರಾಜ್ಯದ ಎಲ್ಲಾ ಜಿಲ್ಲೆ ಗಳಲ್ಲಿ ಒಟ್ಟು 36 ಆಹಾರ, ಎಣ್ಣೆಕಾಳು, ವಾರ್ಷಿಕ ವಾಣಿಜ್ಯ ಮತ್ತು ತೋಟ ಗಾರಿಕಾ ಬೆಳೆಗಳನ್ನು ಅಧಿಸೂಚಿಸಲಾಗಿದ್ದು, ತಾಲೂಕಿನ ಮುಖ್ಯ ಬೆಳೆಗಳನ್ನು ಗ್ರಾಮ ಪಂಚಾಯತಿ ಮಟ್ಟಕ್ಕೆ ಹಾಗೂ ಉಳಿದ ಬೆಳೆಗಳನ್ನು ಹೋಬಳಿ ಮಟ್ಟಕ್ಕೆ ಅಧಿಸೂಚಿಸಲಾಗಿದೆ.

ಮುಂಗಾರು ಹಂಗಾಮಿನಲ್ಲಿ, ರೈತರು ಆಹಾರ ಮತ್ತು ಎಣ್ಣೆ ಕಾಳು ಬೆಳೆಗಳಿಗೆ 29 ಪ್ರೀಮಿಯಂ ಮೊತ್ತವನ್ನು ಪಾವತಿಸಬೇಕಾಗಿರುತ್ತದೆ ಹಾಗೂ ವಾರ್ಷಿಕ ವಾಣಿಜ್ಯ ಮತ್ತು ತೋಟಗಾರಿಕಾ ಬೆಳೆಗಳಿಗೆ ಶೇ.೫ರಷ್ಟು ಪ್ರೀಮಿಯಂ ಮೊತ್ತವನ್ನು ಪಾವತಿಸಬೇಕಾಗಿರುತ್ತದೆ

ಈ ಯೋಜನೆಯ ಮಾರ್ಗಸೂಚಿಯನ್ವಯ ಬೆಳೆಸಾಲ ಪಡೆದ ಹಾಗೂ ಬೆಳೆಸಾಲ ಪಡೆಯದ ರೈತರು ಬೆಳೆ ವಿಮೆಯಡಿ ಒಳಪಡುವುದು ಐಚ್ಛಿಕವಾಗಿರುತ್ತದೆ. ಬೆಳೆಸಾಲ ಪಡೆಯದ ರೈತರು ಯೋಜನೆಯಲ್ಲಿ ಪಾಲ್ಗೊಳ್ಳಲು ಹತ್ತಿರದ ಬ್ಯಾಂಕುಗಳು ಅಥವಾ ಸಾಮಾನ್ಯ ಸೇವಾ ಕೇಂದ್ರಗಳನ್ನು ಅಥವಾ ಗ್ರಾಮಾ ಒನ್’ ಕೇಂದ್ರಗಳನ್ನು ಸಂಪರ್ಕಿಸಿ ಆರ್ಜಿಯೊಂದಿಗೆ ಭೂಮಿ ಹೊಂದಿರುವುದಕ್ಕೆ, ದಾಖಲಾತಿಗಳಾದ ಪಹಣಿ, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಆಧಾರ್ ಪ್ರತಿಯನ್ನು ನೀಡಬೇಕು ಹಾಗೂ ಬ್ಯಾಂಕಿನಲ್ಲಿ ಖಾತೆಯನ್ನು ತೆರೆದು ವಿಮಾ ಕಂತನ್ನು ಕಟ್ಟಬೇಕು.

ಬೆಳೆ ವಿಮೆ ಯೋಜನೆಯಡಿ ಪಾಲ್ಗೊಳ್ಳುವ ರೈತರು ಕಡ್ಡಾಯವಾಗಿ ಆಧಾರ್ ಸಂಖ್ಯೆಯನ್ನು ಅರ್ಜಿ ನಮೂನೆಯಲ್ಲಿ ನಮೂದಿಸತಕ್ಕದ್ದು. ಈ ಯೋಜನೆಯಡಿ ಬೆಳೆ ಸಾಲ ಪಡೆಯದ ರೈತರು ಅಂದಾಜು ಬೆಳೆ ಬಿತ್ತನೆ ಆಧಾರದ ಮೇಲೆ ಬಿತ್ತನೆ ಪೂರ್ವದಲ್ಲಿ ಪಾಲ್ಗೊಳ್ಳಬಹುದು.

ಬೆಳೆ ಸಾಲ ಪಡೆದ ರೈತರು ಈ ಯೋಜನೆಯಲ್ಲಿ, ಭಾಗವಹಿಸಲು ಇಚ್ಛೆಪಡದೇ ಇದ್ದಲ್ಲಿ, ಈ ಕುರಿತು ಬ್ಯಾಂಕಿನ ವ್ಯವಸ್ಥಾಪಕರಿಗೆ ಬೆಳೆ ನೋಂದಣಿ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಲಿಖಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದಲ್ಲಿ ಅಂತಹ ರೈತರನ್ನು, ಬೆಳೆವಿಮೆ ಯೋಜನೆಯಿಂದ ಕೈಬಿಡಲಾಗುವುದು.

ಬೆಳೆ ವಿಮೆಗೆ ನೊಂದಾಯಿಸಿದ ನಂತರ ಬೇರೆ ಬೆಳೆ ಬಿತ್ತನೆ ಮಾಡಿದಲ್ಲಿ ಯೋಜನೆಯಲ್ಲಿ ಭಾಗವಹಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕಿಂತ 2 ದಿವಸಗಳು ಮುಂಚಿತವಾಗಿ ನೋಂದಾಯಿಸಿದ ಆರ್ಥಿಕ ಸಂಸ್ಥೆಗಳಲ್ಲಿ ಬಿತ್ತನೆ ದೃಢೀಕರಣ ಪತ್ರ ನೀಡಿ ವಿಮೆ ಮಾಡಿಸಿದ ಬೆಳೆಯನ್ನು ಬದಲಾಯಿಸತಕ್ಕದ್ದು, ಅಂತಹ ಸಂದರ್ಭದಲ್ಲಿ ಹೆಚ್ಚುವರಿ ವಿಮಾ ಕಂತಿನ ವ್ಯತ್ಯಾಸದ ಮೊತ್ತವನ್ನು ರೈತರು ಭರಿಸತಕ್ಕದ್ದು ಅಥವಾ ಹೆಚ್ಚುವರಿ ವಿಮಾ ಕಂತನ್ನು ರೈತರಿಗೆ ಮರುಪಾವತಿಸುವುದು.

2022ರ ಮುಂಗಾರು ಹಂಗಾಮಿನಲ್ಲಿ ಪ್ರಕೃತಿ ವಿಕೋಪ ಅಂದರೆ, ಆಲಿಕಲ್ಲು ಮಳೆ, ಭೂಕುಸಿತ ಮತ್ತು ಬೆಳೆ ಮುಳುಗಡೆ ಇವುಗಳಿಂದ ಬೆಳೆ ನಾಶ  ಸಂಭವಿಸಿದಲ್ಲಿ, ಪ್ರತ್ಯೇಕವಾಗಿ ಬೆಳೆ ನಮ್ಮ ನಿರ್ಧರಿಸಿ ಬೆಳೆ ವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು.

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಟಾವಿನ ನಂತರ ಬೆಳೆಯನ್ನು ಜಮೀನಿನಲ್ಲೆ ಒಣಗಲು ಬಿಟ್ಟಂತಹ ಸಂದರ್ಭದಲ್ಲಿ ಎರಡು ವಾರಗಳೊಳಗೆ (ಹದಿನಾಲ್ಕು ದಿನಗಳು) ಚಂಡಮಾರುತ, ಚಂಡಮಾರುತ ಸಹಿತ ಮಳೆ ಮತ್ತು ಅಕಾಲಿಕ ಮಳೆಯಿಂದಾಗಿ ಬೆಳೆ ನಾಶವಾದರೆ ಪ್ರತ್ಯೇಕವಾಗಿ ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥ ಪಡಿಸಲಾಗುತ್ತದೆ.

ಈ ಯೋಜನೆಯಡಿ ರೈತರು ಪಾಲ್ಗೊಳ್ಳಲು ಕೊನೆಯ ದಿನಾಂಕಗಳು5 ಹಂತಗಳಲ್ಲಿದ್ದು, ಜೂ.15, ಜೂ.30, ಜು.15, ಜು.31ಹಾಗೂ ಆ.16 ಆಗಿದೆ. ಜಿಲ್ಲಾವಾರು ಬೆಳೆವಾರು ಕೊನೆಯ ದಿನಾಂಕದ ವಿವರವನ್ನು ಹತ್ತಿರದ ರೈತ ಸಂಪರ್ಕ ಕೇಂದ್ರದಿಂದ ಪಡೆಯಬಹುದು ಅಥವಾ ಸಂರಕ್ಷಣೆ ತಂತ್ರಾಂಶದ ಮೂಲಕ ಪಡೆಯಬಹುದಾಗಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
177
Lava Kumar

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು