News Karnataka Kannada
Friday, May 03 2024
ಬೆಂಗಳೂರು ನಗರ

ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ 1736 ಮಂದಿಗೆ ಕೊರೋನಾ ಸೋಂಕು ದೃಢ

ದೇಶದಲ್ಲಿ ಕಳೆದ 24 ಗಂಟೆಗಳಲ್ಲಿ 774 ಹೊಸ ಕೊರೋನ ಪ್ರಕರಣಗಳು ಮತ್ತು 2 ಸಾವು ದಾಖಲಾಗಿದೆ. ಈ ಮೂಲಕ ಒಟ್ಟು ಕೋವಿಡ್ ಪ್ರಕರಣಗಳ ಸಂಖ್ಯೆ 4,50,17,378 ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ 4,187ಕ್ಕೆ ಏರಿಕೆಯಾಗಿದೆ.
Photo Credit : Freepik

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ವಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 1736 ಮಂದಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 40,10,386ಕ್ಕೆ ಏರಿಕೆಯಾಗಿದೆ.

ರಾಜ್ಯದಲ್ಲಿ ಕೊರೋನಾದಿಂದ ಇಂದು ಯಾವುದೇ ಸಾವು ವರದಿಯಾಗಿಲ್ಲ. ಹೀಗಾಗಿ ಸಾವಿನ ಸಂಖ್ಯೆ 40106 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರಿನಲ್ಲಿ ಇಂದು 1274 ಮಂದಿಗೆ ಸೋಂಕು ದೃಢಪಟ್ಟಿದೆ. ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 18,38,334ಕ್ಕೆ ಏರಿಕೆಯಾಗಿದೆ. ಇಂದು ರಾಜಧಾನಿಯಲ್ಲೂ ಯಾವುದೇ ಕೊರೋನಾ ಸಾವು ವರದಿಯಾಗಿಲ್ಲ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೇಳಿದೆ.

ರಾಜ್ಯದಲ್ಲಿ ಇಂದು 1699 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 39,59,342ಕ್ಕೆ ಏರಿಕೆಯಾಗಿದೆ. ಇನ್ನು 10896 ಸಕ್ರಿಯ ಪ್ರಕರಣಗಳಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು