ಬೆಂಗಳೂರು: ‘ಹೆಚ್ಚು ಲೋಕಸಭಾ ಸ್ಥಾನ ಗೆದ್ದರೆ ಸಿದ್ದರಾಮಯ್ಯ 5 ವರ್ಷ ಸಿಎಂ ಆಗಿರುತ್ತಾರೆ ಎಂದು ಹಾಸನದಲ್ಲಿ ಸಿಎಂ ಸಿದ್ದರಾಮಯ್ಯ ಪುತ್ರ ಡಾ.ಯತೀಂದ್ರ ಹೇಳಿಕೆ ಭಾರೀ ಚರ್ಚೆಗೆ ಕಾರಣವಾಗಿದೆ. ಇದೀಗ ಸಚಿವ ಡಾ.ಪರಮೇಶ್ವರ್ ಈ ಬಗ್ಗೆ ಪ್ರತಿಕ್ರಿಯೆ ನೀಡಿದ್ದು ಸಿಎಂ ಮುಂದುವರಿಸುವುದು ಬಿಡುವುದು ನಮ್ಮ ಹೈಕಮಾಂಡ್ ನಿರ್ಧಾರ ಮಾಡ್ತಾರೆ. ಸಿಎಂ ಬಗ್ಗೆ ನಿರ್ಧಾರ ಮಾಡುವುದು ನಾವಲ್ಲ ಎಂದು ಹೇಳಿದರು.
ಬೆಂಗಳೂರಿನಲ್ಲಿ ಮಾತನಾಡಿದ ಪರಮೇಶ್ವರ್, ಲೋಕಸಭೆ ಚುನಾವಣೆಯಲ್ಲಿ ಕೇವಲ ಸಿಎಂ ಸಿದ್ದರಾಮಯ್ಯ ಮಾತ್ರವಲ್ಲ. ಕೆಪಿಸಿಸಿ ಅಧ್ಯಕ್ಷರು ಸೇರಿದಂತೆ ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡುತ್ತೇವೆ. ಲೋಕಸಭೆ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಸಂಕಲ್ಪ ಮಾಡಿದ್ದೇವೆ ಎಂದರು.
ನಾವು ಗ್ಯಾರಂಟಿ ಗಳನ್ನೆಲ್ಲ ಅನುಷ್ಠಾನ ಮಾಡಿದ್ದೇವೆ. ನಾವು ಹೆಚ್ಚು ಸ್ಥಾನ ಗೆಲ್ಲಲೇಬೇಕು ಅಂತ ಸಂಕಲ್ಪ ಮಾಡಿದ್ದೇವೆ. ಸಿಎಂ ಮುಂದುವರಿಸುವುದು ಬಿಡುವುದು ಹೈಕಮಾಂಡ್ ನಿರ್ಧಾರ. ಅದನ್ನು ನಿರ್ಧಾರ ಮಾಡುವುದು ನಾವಲ್ಲ. ಲೋಕ ಸಭೆಗೆ 28 ಸಚಿವರನ್ನು ಕರೆಸಿಕೊಂಡು ಜವಾಬ್ದಾರಿ ಕೊಟ್ಟಿದ್ದಾರೆ. ನಮಗೆ ಒಂದೊಂದು ಕ್ಷೇತ್ರದ ಜವಾಬ್ದಾರಿ ಕೊಟ್ಟಿದ್ದಾರೆ. ನಮಗೆ ಸಚಿವರಿಗೆಲ್ಲ ಹೈಕಮಾಂಡ್ ಜವಾಬ್ದಾರಿ ಕೊಟ್ಟಿರುವುದು ಸತ್ಯ. ಯತೀಂದ್ರ ಹೇಳಿಕೆ ಗಮನಿಸಿಲ್ಲ, ಆದರೆ ಸಚಿವರಿಗೆಲ್ಲ ಜವಾಬ್ದಾರಿ ಕೊಡಲಾಗಿದೆ ಎಂದು ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು.