ಬೆಂಗಳೂರು: ಜೆಡಿಎಸ್ ಬಿಜೆಪಿ ಮೈತ್ರಿ ಆಗಿ ಒಂದು ತಿಂಗಳು ಕಳೆದರೂ ಜೆಡಿಎಸ್ ಮನೆಯಲ್ಲಿ ಅಸಮಾಧಾನದ ಹೊಗೆ ಇನ್ನೂ ಕಡಿಮೆಯಾಗಿಲ್ಲ. ಬಿಜೆಪಿ ಜೊತೆಗಿನ ದೋಸ್ತಿ ವಿರುದ್ಧ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ ಇಬ್ರಾಹಿಂ ಸಿಡಿದೆದ್ದಿದ್ದಾರೆ. ಇದರ ಬೆನ್ನಲ್ಲೇ ಇದೀಗ ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಇಬ್ರಾಹಿಂ ಅವರನ್ನು ವಜಾಗೊಳಿಸಿ ಹೆಚ್ಡಿ ದೇವೇಗೌಡ ಅವರ ಪ್ರಕಟಣೆ ಪತ್ರವೊಂದು ವೈರಲ್ ಆಗಿದೆ.
ಮೇಲ್ನೋಟಕ್ಕೆ ಇದೊಂದು ನಕಲಿ ಪತ್ರ ಎನ್ನಲಾಗ್ತಿದೆ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ ಉಚ್ಛಾಟನೆ ಪತ್ರ ವೈರಲ್ ಮಾಡಿದ್ದಕ್ಕೆ ಇದೀಗ ಜೆಡಿಎಸ್ ಕಾರ್ಯಕರ್ತರು ಇಬ್ರಾಹಿಂ ಅವರನ್ನು ಅಧ್ಯಕ್ಷ ಹುದ್ದೆಯಿಂದ ವಜಾಗೊಳಿಸಲಾಗಿದೆ ಎನ್ನುವ ನಕಲಿ ಪತ್ರವನ್ನು ಸೃಷ್ಟಿಸಿ ವೈರಲ್ ಮಾಡಿದ್ದಾರೆ ಎನ್ನಲಾಗ್ತಿದೆ. ಇದರ ಕುರಿತು ಸ್ಪಷ್ಟನೆ ಇನ್ನಷ್ಟೇ ತಿಳಿದು ಬರಬೇಕಿದೆ.