ಕೆ.ಆರ್.ಪೇಟೆ: ಪರಿಹಾರ ತಾರತಮ್ಯ ವಿರೋಧಿಸಿ ಬೈಪಾಸ್ ರಸ್ತೆ ಕಾಮಗಾರಿಗೆ ಅಡ್ಡಿಪಡಿಸಿ ಪ್ರತಿಭಟನೆ

ಕೆ.ಆರ್.ಪೇಟೆ: ತಾಲ್ಲೂಕಿನ ಅಗ್ರಹಾರಬಾಚಹಳ್ಳಿ ಗೇಟ್ ಬಳಿ ಬೆಂಗಳೂರು-ಜಲಸೂರು ರಾಜ್ಯ ಹೆದ್ದಾರಿಯ ಕೆ.ಆರ್.ಪೇಟೆ ಬೈಪಾಸ್ ರಸ್ತೆ ಕಾಮಗಾರಿಗೆ ಸಾರ್ವಜನಿಕರು ಅಡ್ಡಿಪಡಿಸಿ, ಪ್ರತಿಭಟನೆ ನಡೆಸಿದ ಘಟನೆ ನಡೆದಿದೆ.

ಈ ವೇಳೆ ಶಾಸಕ ಮಂಜು ಮಧ್ಯಪ್ರವೇಶಿಸಿದ್ದರೆ ರಸ್ತೆ ಕಾಮಗಾರಿಗೆ ತಾತ್ಕಾಲಿಕವಾಗಿ ತಡೆ ನೀಡಲಾಗಿದ್ದು, ಬಂದ ದಾರಿಗೆ ಸುಂಕವಿಲ್ಲ ಎಂಬಂತೆ ಬರಿಗೈಯಲ್ಲಿ  ಕೆಶಿಫ್ ಅಧಿಕಾರಿಗಳು ಹಾಗೂ ಪೊಲೀಸರು ಹಿಂತಿರುಗಿದ್ದಾರೆ.

ಕೆಶಿಫ್ ಇಲಾಖೆ ಯಿಂದ ರೈತರಿಗೆ ಭಾರಿ ಅನ್ಯಾಯವಾಗಿದೆ ಎಂಬ ದೂರು ಕೇಳಿಬಂದಿದ್ದು ಕೆಶಿಫ್ ನಿರ್ಮಿಸುತ್ತಿರುವ ಜಲಸೂರು-ಬೆಂಗಳೂರು ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಭೂಮಿ ನೀಡಿದ ಆರಂಭದಲ್ಲಿ ರಸ್ತೆ ನಿರ್ಮಾಣಕ್ಕಾಗಿ ತಮ್ಮ ಕೃಷಿ ಹಿಡುವಳಿ ಭೂಮಿಯನ್ನು ನೊಂದಣಿ ಮಾಡಿಕೊಟ್ಟ ರೈತರಿಗೆ ಒಂದು ಗುಂಟೆ ಭೂಮಿಗೆ ಕೇವಲ 15 ರಿಂದ 20ಸಾವಿರ ಪರಿಹಾರ ನೀಡಿದ್ದಾರೆ.

ರಾಜ್ಯ ಸರ್ಕಾರದ ಕೆಶಿಫ್ ಇಲಾಖೆಯು ಭೂಮಿ ಕಳೆದುಕೊಂಡ ರೈತರಿಗೆ ಅವೈಜ್ಞಾನಿಕವಾಗಿ ಪರಿಹಾರ ನೀಡಿದೆ. ರಾಜ್ಯ ಸರ್ಕಾರವು ನೀಡುತ್ತಿರುವ ಪರಿಹಾರವು ಅವೈಜ್ಞಾನಿಕವಾಗಿದೆ ಎಂದು ಆಗ್ರಹಿಸಿ ನ್ಯಾಯಾಲಯದ ಮೊರೆ ಹೋದ ಸಂತ್ರಸ್ತ ರೈತರಿಗೆ ನ್ಯಾಯಾಲಯವು ಒಂದು ಗುಂಟೆ ಭೂಮಿಗೆ ಒಂದೂವರೆ ಲಕ್ಷದಿಂದ ಎರಡೂವರೆ ಲಕ್ಷ ರೂವರೆಗೆ ಪರಿಹಾರ ನೀಡಬೇಕೆಂದು ಆದೇಶಿಸಿದ್ದಾರೆ. ಆದರೆ ಆದೇಶ ಪಾಲನೆಯಾಗುತ್ತಿಲ್ಲ.

ಈ ಅನ್ಯಾಯವನ್ನು ಸರಿಪಡಿಸುವಂತೆ ಕಳೆದ ಏಳೆಂಟು ತಿಂಗಳಿನಿಂದ ರೈತರು ಮೇಲಧಿಕಾರಿಗಳಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಆದರೂ ರೈತರ ಮೇಲೆ ದಬ್ಬಾಳಿಕೆ ನಡೆಸಿ  ಪೊಲೀಸರ ಸಹಕಾರದೊಂದಿಗೆ ರಸ್ತೆ ನಿರ್ಮಿಸಲು ಕೆಶಿಫ್ ಅಧಿಕಾರಿಗಳು ಬರುತ್ತಿದ್ದಾರೆ ಎಂದು ತಿಳಿದು ಬಂದ ಹಿನ್ನೆಲೆಯಲ್ಲಿ ನೂರಾರು ರೈತರು ಕೆ.ಆರ್.ಪೇಟೆ ಬೈಪಾಸ್ ರಸ್ತೆಯ ಬಳಿ ಜಮಾಯಿಸಿ ರಸ್ತೆ ಕಾಮಗಾರಿ ನಡೆಸಲು ಬಂದ ಯಂತ್ರೋಪಕರಣಗಳ ಮುಂದೆ ಮಲಗಿ ಭಾರೀ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕೆಶಿಫ್ ಅಧಿಕಾರಿಗಳು ರೈತರ ಮೇಲೆ ದಬ್ಬಾಳಿಕೆ ನಡೆಸಿ ಪೊಲೀಸರ ನೆರವಿನೊಂದಿಗೆ ರೈತರನ್ನು ಒಕ್ಕಲೆಬ್ಬಿಸಿ ರಸ್ತೆ ಕಾಮಗಾರಿಯನ್ನು ಮಾಡಲು ಯತ್ನಿಸಿದರೆ ರೈತರು ದಂಗೆ ಏಳಬೇಕಾಗುತ್ತದೆ. ಇದರಿಂದಾಗುವ ಎಲ್ಲಾ ರೀತಿಯ ಅನಾಹುತಕ್ಕೆ ಕೆಶಿಫ್ ಅಧಿಕಾರಿಗಳೇ ಹೊಣೆ ಯಾಗಬೇಕಾಗುತ್ತದೆ ಎಂದು ಭೂಮಿ ಕಳೆದುಕೊಂಡಿರುವ ರೈತರು ಎಚ್ಚರಿಕೆ ನೀಡಿದ್ದಾರೆ.

ರೈತರಿಗೆ ಪರಿಹಾರ ವಿತರಣೆಯಲ್ಲಿ ತಾರತಮ್ಯ ಮಾಡಿರುವ ಕೆಶಿಫ್ ಅಧಿಕಾರಿಗಳನ್ನು ಶಾಸಕ ಹೆಚ್.ಟಿ.ಮಂಜು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು. ರಸ್ತೆ ನಿರ್ಮಾಣಕ್ಕಾಗಿ ಭೂಮಿಯನ್ನು ಕಳೆದುಕೊಂಡು ಅತ್ಯಲ್ಪ ಪರಿಹಾರ ಪಡೆದುಕೊಂಡಿರುವ ಅನ್ನಧಾತರಾದ ರೈತರಿಗೆ ಮೊದಲು ಪರಿಹಾರ ನೀಡುವಲ್ಲಿ ಆಗಿರುವ ಲೋಪವನ್ನು ಸರಿಪಡಿಸಿ. ನಂತರ ರಸ್ತೆ ನಿರ್ಮಾಣ ಮಾಡಿ ಎಂದು ಶಾಸಕ ಹೆಚ್.ಟಿ.ಮಂಜು ಖಡಕ್ ನಿರ್ದೇಶನ ನೀಡಿದರು.

ರೈತರು ಅಗತ್ಯ ದಾಖಲೆ ಸಲ್ಲಿಸಲು ಹತ್ತು ದಿನಗಳ ಕಾಲಾವಕಾಶ ನೀಡಿ ನಂತರ ರಸ್ತೆ ಅಭಿವೃದ್ಧಿ ಕೆಲಸ ಮಾಡಿ ಎಂದು ರೈತರ ಪರವಾಗಿ ಧನಿ ಎತ್ತಿದ ಹಿನ್ನೆಲೆಯಲ್ಲಿ ಕೆಶಿಫ್ ಎಂಜಿನಿಯರುಗಳು ಹಾಗೂ ಪೋಲೀಸ್ ಸಿಬ್ಬಂದಿಗಳು ಬಂದ ದಾರಿಗೆ ಸುಂಕವಿಲ್ಲದೇ ಹಿಂದಿರುಗಿದರು.

 

Sneha Gowda

Recent Posts

ಗುಜರಾತ್ ವಿರುದ್ಧ ಆರ್‌ಸಿಬಿಗೆ 4 ವಿಕೆಟ್‌ಗಳ ಭರ್ಜರಿ ಜಯ

ಚಿನ್ನಸ್ವಾಮಿ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ಆರ್‌ಸಿಬಿ ಮತ್ತು ಗುಜರಾತ್ ಟೈಟನ್ಸ್ ಮಧ್ಯೆ ನಡೆದ ರೋಚಕ ಪಂದ್ಯದಲ್ಲಿ 152 ರನ್ ಗಳಿಸುವ ಮೂಲಕ ಆರ್‌ಸಿಬಿ…

3 hours ago

147 ರನ್​​ಗೆ ಆಲೌಟ್ ಆದ ಗುಜರಾತ್​ ಟೈಟನ್ಸ್​ : ಆರ್​ಸಿಬಿ ವೇಗಿಗಳ ದಾಖಲೆ ಪ್ರದರ್ಶನ

ಚಿನ್ನಸ್ವಾಮಿ​ ಕ್ರಿಕೆಟ್​ ಸ್ಟೇಡಿಯಮ್​ನಲ್ಲಿ ನಡೆಯುತ್ತಿರುವ ರೋಚಕ ಪಂದ್ಯದಲ್ಲಿ ಗುಜರಾತ್​ ಟೈಟನ್ಸ್​ ತಂಡವನ್ನು ರಾಯಲ್​ ಚಾಲೆಂಜರ್ಸ್​ ಬೆಂಗಳೂರು 19.3 ಓವರ್​ಗಳಲ್ಲಿ 147…

3 hours ago

ರಾಜೀನಾಮೆ ನೀಡಿದ ಪೇಟಿಎಂ ಸಿಒಒ ಭವೇಶ್ ಗುಪ್ತಾ

ಪೇಟಿಎಂನ ಮಾತೃ ಸಂಸ್ಥೆಯಾಗಿರುವ ಒನ್ 97 ಕಮ್ಯುನಿಕೇಷನ್ಸ್ ಅಧ್ಯಕ್ಷ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವೇಶ್ ಗುಪ್ತಾ ಅವರು ತಮ್ಮ ಹುದ್ದೆಗೆ…

3 hours ago

ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ

ಹನೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸತ್ತೇಗಾಲ ವಿವಿಧಡೆ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಎಂ.ಆರ್ ಮಂಜುನಾಥ್ ಭೇಟಿ ನೀಡಿ ಪರಿಶೀಲನೆ…

4 hours ago

ಬೆಂಗಾವಲು ಪಡೆಯ ವಾಹನದ ಮೇಲೆ ಭಯೋತ್ಪಾದಕರ ದಾಳಿ: ಐವರು ಅಧಿಕಾರಿಗಳಿಗೆ ಗಾಯ

ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಇಂದು (ಶನಿವಾರ) ಭಾರತೀಯ ವಾಯುಪಡೆ ಬೆಂಗಾವಲು ಪಡೆ ವಾಹನದ ಮೇಲೆ ಭಯೋತ್ಪಾದಕರು ದಾಳಿ…

4 hours ago

ಬಿ.ವೈ ರಾಘವೇಂದ್ರ ಪರ ಮತಯಾಚನೆ ನಡೆಸಿದ ವೇದವ್ಯಾಸ್ ಕಾಮತ್

ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಸಿದ್ದಾಪುರದಲ್ಲಿ ನಡೆದ ಬಿಜೆಪಿಯ ಬೃಹತ್ ರೋಡ್ ಶೋ ನಲ್ಲಿ ಮಂಗಳೂರು ನಗರ ದಕ್ಷಿಣದ ಶಾಸಕರಾದ ವೇದವ್ಯಾಸ್…

4 hours ago