News Karnataka Kannada
Saturday, May 18 2024
ಬೆಂಗಳೂರು ನಗರ

ಮುರುಘಾಶ್ರೀ ಪ್ರಕರಣಗಳ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ

Karnataka HC stays trial in Murugashree cases
Photo Credit : News Kannada

ಬೆಂಗಳೂರು: ಲೈಂಗಿಕ ದೌರ್ಜನ್ಯ ಪ್ರಕರಣ ಹಿನ್ನೆಲೆ ಜೈಲು ಸೇರಿದ್ದ ಚಿತ್ರದುರ್ಗ ಮುರುಘಾಶ್ರೀಗಳು ಜೈಲಿನಿಂದ ಬಿಡುಗಡೆಯಾಗಿದ್ದಾರೆ. ಇದರ ಬೆನ್ನಲ್ಲೇ ಇದೀಗ ಮುರುಘಾಶ್ರೀ ಪ್ರಕರಣಗಳ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಚಿತ್ರದುರ್ಗ 2ನೇ ಜಿಲ್ಲಾ ನ್ಯಾಯಾಧೀಶರ ಮುಂದಿರುವ ಕೇಸ್​​​ಗಳಿಗೆ ತಡೆ ನೀಡಿ ನ್ಯಾ.ಎಂ.ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಆದೇಶ ಹೊರಡಿಸಿದೆ. ಇದರೊಂದಿಗೆ ಮುರುಘಾ ಶರಣರಿಗೆ ಮತ್ತೊಂದು ಬಿಗ್ ರಿಲೀಫ್ ಸಿಕ್ಕಿದೆ.

2ನೇ ಅಪರ ಜಿಲ್ಲಾ ನ್ಯಾಯಾಧೀಶರಿಂದ ಪೂರ್ವಾಗ್ರಹಪೀಡಿತ ಕ್ರಮ ಆರೋಪ ಹಿನ್ನೆಲೆಯಲ್ಲಿ ಸಾಕ್ಷ್ಯ ವಿಚಾರಣೆ ಬೇರೆ ಕೋರ್ಟ್​ಗೆ ವರ್ಗಾಯಿಸಲು ಮುರುಘಾಶ್ರೀ ಪರ ಹಿರಿಯ ವಕೀಲ ಸಿ.ವಿ.ನಾಗೇಶ್ ಅವರು ಹೈಕೋರ್ಟ್​ಗೆ ಮನವಿ ಮಾಡಿದ್ದು, ಜಾಮೀನು ನೀಡಿದಾಗಲೂ ತಕ್ಷಣ ಬಿಡುಗಡೆಗೆ ಆದೇಶಿಸಲಿಲ್ಲ. ಬಿಡುಗಡೆ ಆದೇಶ ಹೊರಡಿಸಲು ತಡ ಮಾಡಿದ್ದಾರೆ. ಇದರಿಂದಾಗಿ ಮೂರು ದಿನ ಮುರುಘಾಶ್ರೀ ಜೈಲಿನಲ್ಲಿರಬೇಕಾಯ್ತು. ವಿಚಾರಣೆ ಮುಂದೂಡುವಂತೆ ಆದೇಶಿಸಿದ್ದರೂ ವಿಚಾರಣೆ ನಡೆಸಲಾಗಿದೆ. ಚಿತ್ರದುರ್ಗಕ್ಕೆ ಬರದಂತೆ ಹೈಕೋರ್ಟ್ ನಿರ್ಬಂಧಿಸಿದ್ದರೂ ವಾರಂಟ್ ಜಾರಿ ಮಾಡಿದೆ. ಚಿತ್ರದುರ್ಗ ಜಿಲ್ಲೆಗೆ ಕರೆತರುವಂತೆ 2ನೇ ಅಪರ ಜಿಲ್ಲಾ ನ್ಯಾಯಾಧೀಶರು ಆದೇಶಿಸಿದ್ದಾರೆ. ಪಾಸ್ ಪೋರ್ಟ್ ವಶಕ್ಕೆ ನೀಡಿದಾಗಲೂ ಅದರ ಪರಿಶೀಲನೆಗೆ ಕಳುಹಿಸಿದರು. ಹೈಕೋರ್ಟ್ ಆದೇಶ ವಿಫಲಗೊಳಿಸಲು ಬಂಧನಕ್ಕೆ ಆದೇಶಿಸಿದ್ದಾರೆ ಎಂದು ವಾದ ಮಂಡಿಸಿದರು.

ಮುರುಘಾಶ್ರೀ ಮೊದಲ ಪೋಕ್ಸೋ ಪ್ರಕರಣದಲ್ಲಿ ಜಾಮೀನು ಪಡೆದುಕೊಂಡು ಒಂದು ವರ್ಷದ ನಂತರ ಜೈಲಿನಿಂದ ಆಚೆ ಬಂದಿದ್ದರು. ಆದ್ರೆ, 2ನೇ ಪೋಕ್ಸೋ ಪ್ರಕರಣದಲ್ಲಿ ನಿನ್ನೆ(ನವೆಂಬರ್ 21) ಚಿತ್ರದುರ್ಗ ನ್ಯಾಯಾಲಯ ಮುರುಘಾ ಶ್ರೀ ವಿರುದ್ಧ ಅರೆಸ್ಟ್ ವಾರೆಂಟ್ ಜಾರಿ ಮಾಡಿತ್ತು. ಅದರಂತೆ ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀರು ಶ್ರೀಗಳು ಬಂಧಿಸಿದ್ದರು. ಆದ್ರೆ, ಇತ್ತ ಹೈಕೋರ್ಟ್​ ತಡೆ ನೀಡಿತ್ತು. ಬಳಿಕ ಶರಣರನ್ನು ಜೈಲಿನಿಂದ ಬಿಡುಗಡೆ ಮಾಡಲಾಗಿತ್ತು. ಇದೀಗ ಪ್ರಕರಗಳ ವಿಚಾರಣೆಗೆ ತಡೆಯಾಜ್ಞೆ ನೀಡಿದ್ದು ಬಿಗ್ ರಿಲೀಫ್ ಸಿಕ್ಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು