News Karnataka Kannada
Saturday, May 04 2024
ಬೆಂಗಳೂರು ನಗರ

ಕರ್ನಾಟಕ ಪೊಲೀಸ್‌ ಅಧಿಕಾರಿಗಳು ಕೇರಳ ಪೊಲೀಸರ ವಶಕ್ಕೆ

Karnataka police officials taken into custody by Kerala police
Photo Credit : News Kannada

ಬೆಂಗಳೂರು: ವಂಚನೆ ಪ್ರಕರಣದ ಆರೋಪಿಗಳಿಂದ ಲಂಚ ಪಡೆದ ಆರೋಪದಲ್ಲಿ ‍ಇನ್ಸ್‌ಪೆಕ್ಟರ್‌ ಸೇರಿ 4 ಮಂದಿ ಕರ್ನಾಟಕದ ಪೊಲೀಸ್‌ ಅಧಿಕಾರಿಗಳನ್ನು ಕೇರಳ ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ವರದಿ ತಿಳಿಸಿದೆ.

ಕರ್ನಾಟಕದಲ್ಲಿ ನಡೆದ ವಂಚನೆ ಪ್ರಕರಣದ ಸಂಬಂಧ ಆರೋಪಿಯನ್ನು ಬಂಧಿಸಲು ಕರ್ನಾಟಕ ಪೊಲೀಸರು ಆಗಸ್ಟ್ 1ರಂದು ಕೊಚ್ಚಿಗೆ ತೆರಳಿದ್ದರು. ಅಲ್ಲಿ ಅವರು ಇಬ್ಬರು ಆರೋಪಿಗಳಿಂದ ₹ 3.95 ಲಕ್ಷ ಲಂಚ ಪಡೆದಿದ್ದಾರೆ ಎಂದು ಆರೋಪ ಮತ್ತು ದೂರಿನನ್ವಯ ಕೊಚ್ಚಿಯ ಕಮಲಶ್ಶೇರಿ ಪೊಲೀಸರು ಕರ್ನಾಟಕದ 4 ಪೊಲೀಸ್ ಅಧಿಕಾರಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಕೊಚ್ಚಿ ಪೊಲೀಸ್‌ ಉಪ ಆಯುಕ್ತ ಬೇಬಿ ಪಿವಿ, ‘ಪ್ರಕರಣ ಸಂಬಂಧ ನಾವು ಕರ್ನಾಟಕ ಪೊಲೀಸರೊಂದಿಗೆ ಸಂಪರ್ಕದಲ್ಲಿದ್ದೇವೆ. ಅವರ ಗುರುತು ಹಾಗೂ ಕೊಚ್ಚಿಗೆ ಬಂದಿರುವ ಉದ್ದೇಶದ ಬಗ್ಗೆ ಮಾಹಿತಿ ಪಡೆಯುತ್ತಿದ್ದೇವೆ. ಮಾಹಿತಿ ಪಡೆದು ಮುಂದಿನ ಕ್ರಮ ತೆಗೆದುಕೊಳ್ಳುತ್ತೇವೆ. ಈಗಾಗಲೇ ಪ್ರಕರಣ ದಾಖಲಾಗಿದೆ’ ಎಂದು ಹೇಳಿದ್ದಾರೆ.

ಪರಿಶೀಲನೆ ಬಳಿಕ ವಶಕ್ಕೆ ಪಡೆದವರ ಮಾಹಿತಿ ನೀಡುವುದಾಗಿ ಪೊಲೀಸರು ಹೇಳಿದ್ದಾರೆ. ಬೆಂಗಳೂರಿನ ವೈಟ್‌ಫೀಲ್ಡ್‌ನಿಂದ ಈ ಪೊಲೀಸರು ತೆರಳಿದ್ದರು ಎಂದು ಮಾಹಿತಿ ದೊರೆತಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು