ಬೆಂಗಳೂರು: ನಿಗಮ ಮಂಡಳಿಗೆ ನವೆಂಬರ್ 18 ಮತ್ತು 19 ರಂದು ನಡೆಯಲಿರುವ ನೇಮಕಾತಿ ಪರೀಕ್ಷೆಗಳಿಗೆ ಬಾಯಿ, ಕಿವಿ ಹಾಗೂ ತಲೆ ಮುಚ್ಚುವ ವಸ್ತ್ರ ಧರಿಸಿಕೊಂಡು ಬರುವಂತಿಲ್ಲ ಎಂಬ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸುತ್ತೋಲೆ ಮುಸ್ಲಿಂ ಮಹಿಳಾ ಅಭ್ಯರ್ಥಿಗಳಲ್ಲಿ ಗೊಂದಲ ಮೂಡಿಸಿತ್ತು. ಇದೀಗ ಪ್ರಾಧಿಕಾರ ಈ ಕುರಿತು ಸ್ಪಷ್ಟನೆ ನೀಡಿದ್ದು, ಈ ಹಿಂದಿನಂತೆ ಪರೀಕ್ಷಾ ಕೊಠಡಿಯೊಳಗೆ ಹಿಜಾಬ್ಗೆ ಅವಕಾಶ ನಿಡಲಾಗಿದೆ ಎಂದು ಹೇಳಿದೆ.
ನವೆಂಬರ್ 18 ಮತ್ತು 19 ರಂದು ನಡೆಯಲಿರುವ ಎರಡನೇ ಹಂತದ ನೇಮಕಾತಿ ಪರೀಕ್ಷೆಗಳಿಗೆ ಹಿಜಾಬ್ಗೆ ಅನುಮತಿ ಮುಂದುವರಿಯುತ್ತದೆ. ಪರೀಕ್ಷೆಗಳಿಗೆ ಹಾಜರಾಗುವ ಎಲ್ಲಾ ಅಭ್ಯರ್ಥಿಗಳು ನಿಗದಿತ ಸಮಯಕ್ಕಿಂತ ಎರಡು ಗಂಟೆ ಮೊದಲು ಪರೀಕ್ಷಾ ಕೇಂದ್ರಕ್ಕೆ ವರದಿ ಮಾಡಿಕೊಳ್ಳಬೇಕು ಎಂದು ಹೇಳಿದೆ.