News Karnataka Kannada
Monday, April 29 2024
ಬೆಂಗಳೂರು ನಗರ

ಸರ್ಕಾರಿ ಹುದ್ದೆ ಆಕಾಂಕ್ಷಿಗಳಿಗೆ ಸಿಹಿ ಸುದ್ದಿ ನೀಡಿದ ಕೆಇಎ

KEA gives good news to govt job aspirants
Photo Credit : News Kannada

ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು (ಕೆಇಎ), ಸಾರಿಗೆ ಇಲಾಖೆ, ಪಶು ವೈದ್ಯಕೀಯ, ರಾಜೀವಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ (ಆರ್‌ಜಿಯುಎಚ್‌ಎಸ್), ನಗರಾಭಿವೃದ್ಧಿ ಇಲಾಖೆ ಸೇರಿ ವಿವಿಧ ಇಲಾಖೆಗಳಲ್ಲಿರುವ ಸುಮಾರು 400ಕ್ಕೂ ಹೆಚ್ಚಿನ ಹುದ್ದೆಗಳ ಭರ್ತಿಗೆ ಡಿಸೆಂಬರ್ ಮೊದಲ ವಾರದಲ್ಲಿ ಅಧಿಸೂಚನೆ ಪ್ರಕಟಿಸಲಿದೆ.

ಕೆಇಎ ನಲ್ಲಿ ಡಿಪ್ಲೊಮೊ ಸಿಇಟಿ, ಪಿಜಿಇಟಿ, ವೈದ್ಯಕೀಯ ಕೋರ್ಸ್‌ಗಳಿಗೆ ಸಂಬಂಧಿಸಿದ ಪ್ರಕ್ರಿಯೆಗಳು ನಡೆಯುತ್ತಿವೆ. ಈ ಎಲ್ಲ ಪ್ರಕ್ರಿಯೆಗಳು ತಿಂಗಳಾಂತ್ಯಕ್ಕೆ ಪೂರ್ಣಗೊಳ್ಳಲಿದೆ. ಬಳಿಕ ಡಿಸೆಂಬರ್ ಮೊದಲ ವಾರದಲ್ಲಿ ನೇಮಕಾತಿಗೆ ಸಂಬಂಧಿಸಿದ ಹೊಸ ಅಧಿಸೂಚನೆಗಳನ್ನು ಹೊರಡಿಸಲಾಗುತ್ತದೆ ಎಂದು ಮಾಹಿತಿ ಲಭಿಸಿದೆ.

455 ಪಿಎಸ್‌ಐ ಹುದ್ದೆ ನೇಮಕಾತಿ ಕೂಡ ಸದ್ಯದಲ್ಲಿಯೇ ಅಧಿಸೂಚನೆ ಹೊರಬೀಳಲಿದೆ. ಅದರ ಜತೆಜತೆಗೆ ವಿವಿಧ ಇಲಾಖೆಗಳಲ್ಲಿರುವ ಪ್ರಥಮ ದರ್ಜೆ ಸಹಾಯಕ, ದ್ವಿತೀಯ ದರ್ಜೆ ಸಹಾಯಕ, ವಿವಿಧ ವಿಭಾಗಗಳ ಇಂಜಿನಿಯರ್ಸ್, ಆಪ್ತ ಸಹಾಯಕ ಸೇರಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ಕೆಪಿಎಸ್ಸಿ ಕೂಡ ವಿವಿಧ ಇಲಾಖೆಗಳಲ್ಲಿರುವ 2 ಸಾವಿರಕ್ಕೂ ಹೆಚ್ಚಿನ ಹುದ್ದೆಗಳಿಗೆ ಮುಂದಿನ ವರ್ಷ ಅಧಿಸೂಚನೆ ಪ್ರಕಟಿಸಲು ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದೆ. ಇದೇ ಸಂದರ್ಭದಲ್ಲಿ ಕೆಇಎ ಕೂಡ ಅಧಿಸೂಚನೆ ಪ್ರಕಟಿಸಿದೆ.

ಕಳೆದ ಎರಡು ವರ್ಷಗಳಲ್ಲಿ ಕೆಇಎ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿರುವ ಸಹಾಯಕ ಪ್ರಾಧ್ಯಾಪಕ, ಬಿಎಂಆರ್‌ಸಿಎಲ್, ವಿಧಾನಸಭೆ ಸಚಿವಾಲಯ, ವಿವಿಧ ನಿಗಮ ಮಂಡಳಿಗಳ ಖಾಲಿ ಹುದ್ದೆಗಳಿಗೆ ಪರೀಕ್ಷೆ ನಡೆಸಿದೆ. ಈ ಪೈಕಿ ಕೆಲವು ನೇಮಕಾತಿಗಳು ಪೂರ್ಣಗೊಂಡಿದ್ದರೆ, ಮತ್ತೆ ಕೆಲವು ಪೂರ್ಣಗೊಳ್ಳುವ ಕೊನೇ ಹಂತದಲ್ಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು