ಸೋಲಿನ ಕಹಿ: ಮಸೀದಿಗಳಿಗೆ ಕೊಟ್ಟ ದೇಣಿಗೆ ವಾಪಸ್‌ ಕೇಳಿದ ಕೆಜಿಎಫ್‌ ಬಾಬು

ಬೆಂಗಳೂರು: ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಮುಖಭಂಗ ಎದುರಿಸಿರುವ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು 64 ಮಸೀದಿಗಳಿಗೆ ತಾನು ನೀಡಿದ ದೇಣಿಗೆ ಚೆಕ್‌ಗಳನ್ನು ವಾಪಸ್ ನೀಡುವಂತೆ ಉರ್ದು ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟಿಸಿದ್ದಾರೆ.

ಅತ್ಯಂತ ಶ್ರೀಮಂತ ಅಭ್ಯರ್ಥಿಯಾಗಿದ್ದ ಕೆಜಿಎಫ್ ಬಾಬು 64 ಮಸೀದಿಗಳ ಸಮಿತಿಗಳಿಗೆ 17.30 ಕೋಟಿ ರೂ. ದೇಣಿಗೆ ನೀಡಿದ್ದರು.ಸೋತ ನಂತರ ಸಮಿತಿಗಳಿಗೆ ನನ್ನ ಹಣ ಹರಾಮ್ ಆಗಿದ್ದು ಅದನ್ನು ಖರ್ಚು ಮಾಡಬೇಡಿ, ಸಾಧ್ಯವಾದಷ್ಟೂ ಬೇಗ ಅದನ್ನು ವಾಪಸ್ ಕೊಡಿ ಎಂದು ಹೇಳಿದ್ದಾರೆ.

ದಾರುಲ್ ಉಲೂಮ್ ಫತ್ವಾವನ್ನು ಉಲ್ಲೇಖಿಸಿರುವ ಬಾಬು, ಚುನಾವಣಾ ಸಮಯದಲ್ಲಿ ರಾಜಕಾರಣಿಗಳಿಂದ ಇಂತಹ ದೇಣಿಗೆಗಳನ್ನು ಪಡೆಯುವುದು ಹರಾಮ್ ಆಗಿದೆ ಎಂದು ಸಿದ್ದಾಪುರದ ಟ್ಯಾಂಕ್ ಗಾರ್ಡನ್‌ನಲ್ಲಿರುವ ಮಸೀದಿ-ಇ-ಅತಿಕ್ ಮತ್ತು ಕೃಷ್ಣಪ್ಪ ಗಾರ್ಡನ್‌ನ ಮಸೀದಿ-ಇ-ಹುಸ್ನಾ ಸೇರಿದಂತೆ ಮಸೀದಿಗಳ ಸಮಿತಿಗಳಿಗೆ ಬಾಬು ತಮ್ಮ ಚೆಕ್‌ಗಳನ್ನು ಹಿಂದಿರುಗಿಸುವಂತೆ ಹೇಳಿದ್ದಾರೆ. ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು.

ಬಾಬು ಅವರು ಎಲ್ಲಾ ಮಸೀದಿಗಳಿಗೆ ಆಹ್ವಾನಗಳನ್ನು ಕಳುಹಿಸಿ ಎಸ್‌ಆರ್‌ನಗರದ ಹಕ್ ಹೌಸ್‌ನಲ್ಲಿ ನಡೆದ ಸಮಾರಂಭದಲ್ಲಿ ಅವರು ಚೆಕ್‌ಗಳನ್ನು ವಿತರಿಸಿದ್ದರು. ಇದು ಅವರ ದೇಣಿಗೆಯಾಗಿದ್ದು, ಮಸೀದಿಗಳ ಅಭಿವೃದ್ಧಿಗೆ ಬಳಸಿಕೊಳ್ಳಬಹುದು ಎಂದು ಬಾಬು ಆ ಸಂದರ್ಭದಲ್ಲಿ ಹೇಳಿದ್ದರು.

Gayathri SG

Recent Posts

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

7 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

17 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

28 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

34 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

38 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

40 mins ago