ಬೆಂಗಳೂರು ನಗರ

ಯುವತಿ ಸ್ನಾನ ಮಾಡುವ ವಿಡಿಯೋ ಮಾಡುತ್ತಿದ್ದ ಕಿರಾತಕ ಅಂದರ್‌

ಬೆಂಗಳೂರು: ಇತ್ತೀಚೆಗೆ ಯುವತಿಯರ ನಗ್ನ ವಿಡಿಯೋ ಮಾಡಿ ಬ್ಲ್ಯಾಕ್‌ ಮೇಲ್‌ ಮಾಡುವವರ ಸಂಖ್ಯೆ ಹೆಚ್ಚುತ್ತಿದೆ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಜಿಮ್ ಮಾಡಿದ ನಂತರ ಫಿಟ್ನೆಸ್ ಸೆಂಟರ್​ನಲ್ಲಿ ಸ್ನಾನ ಮಾಡುತ್ತಿದ್ದ ಯುವತಿಯ ವಿಡಿಯೋ ಚಿತ್ರೀಕರಣ ಮಾಡಿದ ಜಿಮ್ ತರಬೇತುದಾರನನ್ನು ಬೆಂಗಳೂರು ನಗರದ ರಾಮಮೂರ್ತಿನಗರ ಪೊಲೀಸರು ಬಂಧಿಸಿದ್ದಾರೆ. ಯುವತಿ ನೀಡಿದ ದೂರಿನ ಮೇರೆಗೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ರಾಮಮೂರ್ತಿನಗರದಲ್ಲಿರುವ ಫಿಟ್​ನೆಸ್​ ಸೆಂಟರ್​ನಲ್ಲಿ ಜಿಮ್ ವರ್ಕೌಟ್ ಮುಗಿಸಿದ ನಂತರ ಯುವತಿ ಸ್ನಾನ ಮಾಡುತ್ತಿದ್ದಾಗ ಜಿಮ್ ಕೋಚ್ ಸಿಬಿಯಾಚನ್, ಕಿಟಕಿಯ ಮೂಲಕ ಮೊಬೈಲ್​ನಲ್ಲಿ ಸೆರೆ ಹಿಡಿಯುತ್ತಿದ್ದನು. ಅನುಮಾನಗೊಂಡು ಹೊರಗೆ ಬಂದಾಗ ಅಲ್ಲಿ ಯಾರೂ ಇರಲಿಲ್ಲ.

ತಕ್ಷಣವೇ ಸಿಸಿ ಕ್ಯಾಮರಾ ಪರಿಶೀಲನೆ ಮಾಡಿದಾಗ ಕೋಚ್ ಸಿಬಿಯಾಚನ್ ಮೊಬೈಲ್ ಮೂಲಕ ವಿಡಿಯೋ ಚಿತ್ರೀಕರಣ ಮಾಡಿದ ವಿಚಾರ ಬೆಳಕಿಗೆ ಬಂದಿದೆ. ಬಳಿಕ ರಾಮಮೂರ್ತಿನಗರ ಪೊಲೀಸರಿಗೆ ಯುವತಿ ದೂರು ನೀಡಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಆರೋಪಿಯನ್ನು ಸಿಬಿಯಾಚನ್​ನನ್ನು ಬಂಧಿಸಿದ್ದಾರೆ.

Umesha HS

Recent Posts

ವಾಸವಿ ಯುವಜನ ಸಂಘದಿಂದ ರಕ್ತದಾನ ಶಿಬಿರ : ದಿನೇಶ್‌ಗುಪ್ತ

ನಗರದ ವಾಸವಿ ಯುವಜನ ಸಂಘ ಮತ್ತು ವಾಸವಿ ಕ್ಲಬ್‌ ಆಶ್ರಯದಲ್ಲಿ ಇಂದು ನಗರದ ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಯಲ್ಲಿ ರಕ್ತದಾನ ಶಿಬಿರವನ್ನು…

3 mins ago

ಗ್ರಾಮಸ್ಥರ ಆರೋಗ್ಯ ಸುರಕ್ಷತೆಗೆ ಕ್ರಮಕೈಗೊಳ್ಳಲು ಬಿಜೆಪಿ ಒತ್ತಾಯ

ಡೆಂಗ್ಯೂ ಸೋಂಕಿನಿಂದ ಬಳಲುತ್ತಿರುವ ಗ್ರಾಮಕ್ಕೆ ತಜ್ಞ ವೈದ್ಯಾಧಿಕಾರಿ ಗಳ ತಂಡವನ್ನು ರಚಿಸಿ ನಿವಾಸಿಗಳ ಆರೋಗ್ಯ ಕಾಪಾಡಬೇಕು ಎಂದು ಎರೆಹಳ್ಳಿ ಗ್ರಾಮಸ್ಥರು…

11 mins ago

ಕಿಯಾ ಕಾರಿಗೆ ಅಡ್ಡ ಬಂದ ಕುದುರೆ: ಸರಣಿ ಅಪಘಾತ

ಕುದುರೆಯೊಂದು ಏಕಾಏಕಿ ಕಿಯಾ ಕಾರಿಗೆ ಅಡ್ಡ ಬಂದ ಕಾರಣ ಸರಣಿ ಅಪಘಾತ ಸಂಭಿಸಿರೋ ಘಟನೆ ಮಾಗಡಿ ತಾಲೂಕಿನ ತಿಪ್ಪಸಂದ್ರ ಹ್ಯಾಂಡ್…

12 mins ago

ಹಿರಿಯಡ್ಕ: ಕಾಲೇಜಿಗೆ ಹೋದ ಯುವತಿ ನಾಪತ್ತೆ

ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬ ಯುವತಿಯು ಏಪ್ರಿಲ್ 19 ರಂದು ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

21 mins ago

ಕೆಸರು ಗದ್ದೆಯಾದ ತಾಲೂಕು ಆಡಳಿತ ಸೌಧ: ಕೆಲಸಕ್ಕಾಗಿ ಬಂದ ಸಾರ್ವಜನಿಕರ ಪರದಾಟ

ಅಫಜಲಪುರ ತಾಲೂಕು ಆಡಳಿತ ಸೌಧ ಅಕ್ಷರಶಃ ಕೆಸರು ಗದ್ದೆಯಾಗಿದೆ. ದಿನಾಲು ಸಾವಿರಾರು ಜನರು ತಹಶೀಲ್ದಾರ ಕಚೇರಿಗೆ ತಮ್ಮ ಕೆಲಸಗಳಿಗೆ ಬಂದು…

36 mins ago

ಮರಾಠಿ ಭಾಷೆಯಲ್ಲಿ ಕರಾವಳಿಯ ಗಂಡುಕಲೆ ಯಕ್ಷಗಾನ ಅನಾವರಣ

ಯಕ್ಷಗಾನದ ಹಿರಿಮೆ ಇದೀಗ ಗಡಿದಾಟಿ ಮಹಾರಾಷ್ಟ್ರದಲ್ಲೂ ಸದ್ದು ಮಾಡಿದೆ. ಸಂಪೂರ್ಣ ಮರಾಠಿ ಭಾಷೆಯಲ್ಲಿ ನಡೆದ ಅಪರೂಪದ ಯಕ್ಷಗಾನ ಮಹಾರಾಷ್ಟ್ರ ಪ್ರೇಕ್ಷಕರ…

50 mins ago