News Karnataka Kannada
Monday, April 29 2024
ಬೆಂಗಳೂರು ನಗರ

ಬೆಂಗಳೂರು: ನನಗೆ ಪಕ್ಷ ಮುಖ್ಯ, ವ್ಯಕ್ತಿ ಮುಖ್ಯವಲ್ಲ ಎಂದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌

5 ವರ್ಷಗಳ ಕಾಲ ಗ್ಯಾರಂಟಿ ಯೋಜನೆಗಳನ್ನು ಜನರಿಗೆ ಕೊಡುತ್ತೇವೆ, ರದ್ದು ಮಾಡುವುದಿಲ್ಲ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದರು.
Photo Credit :

ಬೆಂಗಳೂರು: ‌ಪಕ್ಷ ಇದ್ದರೆ ಮಾತ್ರ ನಾವು ಆದ್ದರಿಂದ ನನಗೆ ಪಕ್ಷ ಮುಖ್ಯ, ವ್ಯಕ್ತಿ ಮುಖ್ಯವಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದರು.

ಬಿಜೆಪಿ ಟ್ವೀಟ್ ‘ಸಿದ್ದರಾಮೋತ್ಸವ ಕಾರ್ಯಕ್ರಮದ ನಂತರ ಕಾಂಗ್ರೆಸ್ ಖಾಲಿ ಆಗಲಿದೆ’ ಎಂಬ  ಕುರಿತು ಕೇಳಿದ ಪ್ರಶ್ನೆಗೆ, ‘ಬೇರೆಯವರು ಏನಾದರೂ ಹೇಳಲಿ. ನಮ್ಮ ಪಕ್ಷದ ನಾಯಕರು ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಾರೆ. ನಾನು ಕೇದಾರನಾಥಕ್ಕೆ ಕುಟುಂಬ ಸಮೇತ ಹೋಗಿ ನಾನು ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳಬೇಕಿತ್ತು. ಸಿದ್ದರಾಮಯ್ಯ ಅವರ ಹುಟ್ಟುಹಬ್ಬ ಆಚರಿಸಲು ಅವರ ಅಭಿಮಾನಿಗಳು ಬಯಸುತ್ತಿದ್ದಾರೆ. ಇದರಲ್ಲಿ ಯಾವುದೇ ತಪ್ಪಿಲ್ಲ’ ಎಂದರು.

ಸಿದ್ದರಾಮೋತ್ಸವ ಕಾರ್ಯಕ್ರಮ ಆಯೋಜನೆ ಕುರಿತು ಭಾನುವಾರ ರಾಮನಗರದಲ್ಲಿ ಪ್ರತಿಕ್ರಿಯಿಸಿದ ಅವರು, ‘ಕಾಂಗ್ರೆಸ್‌ನಲ್ಲಿ ಗುಂಪುಗಾರಿಕೆ ಇಲ್ಲ. ಮೊದಲು ಪಕ್ಷ ಅಧಿಕಾರಕ್ಕೆ ಬರಬೇಕು. ಚುನಾವಣೆಯನ್ನು ಕಾಂಗ್ರೆಸ್‌ ಸಾಮೂಹಿಕ ನಾಯಕತ್ವದೊಂದಿಗೆ ಎದುರಿಸಲಿದೆ’ ಎಂದರು.

‘ಮುಂಬರುವ ಚುನಾವಣೆಯನ್ನು ಸಾಮೂಹಿಕ ನಾಯಕತ್ವದಲ್ಲಿ ಎದುರಿಸಬೇಕು ಎಂದು ರಾಹುಲ್ ಗಾಂಧಿ ಹಾಗೂ ಪಕ್ಷದ ವರಿಷ್ಠರು ತೀರ್ಮಾನಿಸಿದ್ದಾರೆ’ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು