News Karnataka Kannada
Saturday, May 04 2024
ಬೆಂಗಳೂರು ನಗರ

ಅಭ್ಯರ್ಥಿಗಳಿಲ್ಲದೆ ಪರದಾಡುತ್ತಿರುವ ಕಾಂಗ್ರೆಸ್‌ನಿಂದ ಬಿಜೆಪಿ ಮುಖಂಡರ ಹೈಜಾಕ್‌, ಸಿಎಂ ಬೊಮ್ಮಾಯಿ

7000 CC cameras installed under Safe City Project- CM Bommai
Photo Credit : News Kannada

ಬೆಂಗಳೂರು: ಮಾಜಿ ಉಪಮುಖ್ಯಮಂತ್ರಿ ಹಾಗೂ ಬಿಜೆಪಿಯ ಹಿರಿಯ ಮುಖಂಡ ಲಕ್ಷ್ಮಣ ಸವದಿ ಅವರು ಕಾಂಗ್ರೆಸ್ ಪಕ್ಷ ಸೇರುತ್ತಿರುವುದು ಬೇಸರ ತಂದಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಪಕ್ಷಕ್ಕೆ 60 ಕ್ಕೂ ಹೆಚ್ಚು ಕ್ಷೇತ್ರಗಳಿಗೆ ಅಭ್ಯರ್ಥಿಗಳಿಲ್ಲದ ಕಾರಣ ಅವರು ಇತರ ಪಕ್ಷಗಳ ನಾಯಕರನ್ನು ಸೇರಿಸಿಕೊಂಡರು ಎಂದರು. ಆಡಳಿತ ಪಕ್ಷದಲ್ಲಿ ಆಕಾಂಕ್ಷಿಗಳು  ಹೆಚ್ಚಾಗಿರುವುದು ಸಾಮಾನ್ಯ. ಪಕ್ಷದ ಕಾರ್ಯಕರ್ತರು ಅವರೊಂದಿಗೆ ಇದ್ದಾರೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಬಹುಮತದೊಂದಿಗೆ ಗೆಲುವು ಸಾಧಿಸಲಿದೆ ಎಂದರು.

ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಮೂರನೇ ಪಟ್ಟಿಯನ್ನು ಶೀಘ್ರದಲ್ಲೇ ಹೊರತರಲಾಗುವುದು ಎಂದು ಸಿಎಂ ಹೇಳಿದರು.  ಸಿಎಂ ನಾಳೆ (ಶನಿವಾರ) ಶಿಗ್ಗಾಂವಿಯಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು