News Karnataka Kannada
Saturday, April 27 2024
ಬೆಂಗಳೂರು ನಗರ

ರವೀಂದ್ರ ಕಲಾಕ್ಷೇತ್ರದಲ್ಲಿ ನಟಿ ಲೀಲಾವತಿ ಪಾರ್ಥಿವ ಶರೀರ: ಅಂತಿಮ ದರ್ಶನಕ್ಕೆ ವ್ಯವಸ್ಥೆ

ಹಿರಿಯ ನಟಿ ಲೀಲಾವತಿ ನಿಧನರಾಗಿದ್ದು, ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್ ಮಾಹಿತಿ ನೀಡಿದ್ದಾರೆ.
Photo Credit : News Kannada

ಬೆಂಗಳೂರು: ಹಿರಿಯ ನಟಿ ಲೀಲಾವತಿ ನಿಧನರಾಗಿದ್ದು, ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ವ್ಯವಸ್ಥೆ ಕಲ್ಪಿಸಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಶಿವಶಂಕರ್ ಮಾಹಿತಿ ನೀಡಿದ್ದಾರೆ.

ಬೆಳಿಗ್ಗೆ 5:30 ಕ್ಕೆ ನೆಲಮಂಗಲದ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ಬಳಿಕ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆಯಾಗಲಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ನಟಿ ಲೀಲಾವತಿ ನೆಲಮಂಗಲದ ಖಾಸಗಿ ಆಸ್ಪತ್ರೆಯಲ್ಲಿ ಡಿ.08 ರಂದು ಸಂಜೆ ಕೊನೆಯುಸಿರೆಳೆದರು. ನೆಲಮಂಗಲದ ಜ್ಯೂನಿಯರ್ ಕಾಲೇಜು ಎದುರಿನ ಅಂಬೇಡ್ಕರ್ ಮೈದಾನದಲ್ಲಿ ಪಾರ್ಥಿವ ಶರೀರವನ್ನು ನಾಳೆ ಮಧ್ಯಾಹ್ನದವರೆಗೂ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಬಳಿಕ ರವೀಂದ್ರ ಕಲಾಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಸಹ ಅಂತಿಮ ನಮನ ಸಲ್ಲಿಸಲಿದ್ದು, ಮಧ್ಯಾಹ್ನ 3 ಗಂಟೆ ಬಳಿಕ ಸೋಲದೇವನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಸಲಾಗುತ್ತದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು