ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಲೋಕಾಯುಕ್ತ ದಾಳಿ

ಬೆಂಗಳೂರು: ಇಂದು(ಡಿ.5) ಬೆಳ್ಳಂಬೆಳಗ್ಗೆ ಬೆಂಗಳೂರು ಸೇರಿದಂತೆ ಕರ್ನಾಟಕದ ಹಲವೆಡೆ ಲೋಕಾಯುಕ್ತ ದಾಳಿ ನಡೆಸಿದೆ. ರಾಜ್ಯದ 63 ಕಡೆ 13 ಅಧಿಕಾರಿಗಳ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಲೋಕಾಯುಕ್ತ ಅಧಿಕಾರಿಗಳು ಬೆಂಗಳೂರಿನಲ್ಲಿ ಮೂರು ಕಡೆ ದಾಳಿ ಮಾಡಿದ್ದಾರೆ. ಬೆಸ್ಕಾಂ ಜಾಗೃತ ದಳ ಅಧಿಕಾರಿ ಟಿ. ಎನ್.ಸುಧಾಕರ್ ರೆಡ್ಡಿ ಮನೆ, ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹೆಚ್​​​.ಎಸ್​​.ಕೃಷ್ಣಮೂರ್ತಿ ಮನೆ ಹಾಗೂ ಕುಂಬಳಗೂಡು-ಕಣಿಮಿಣಿಕೆ ಬಳಿಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧಿಕಾರಿ ಮನೆ ಮೇಲೂ ದಾಳಿ ಮಾಡಿದ್ದು, ದಾಖಲೆಗಳನ್ನ ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ನಂಜನಗೂಡು ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಉಪನ್ಯಾಸಕ ಮಹದೇವಸ್ವಾಮಿ ಮೇಲೆ, ಮೈಸೂರಿನ ಗುರುಕುಲ ಬಡಾವಣೆ ನಿವಾಸ ಸೇರಿ 12 ಕಡೆ ಪರಿಶೀಲನೆ ನಡೆಸಿದ್ದಾರೆ. ಕುಟುಂಬದ ಹೆಸರಿನಲ್ಲಿ ಎಂ ಎಸ್ ಗ್ರೂಪ್ ಕಂಪನಿ, ಆದಾಯಕ್ಕೂ ಮೀರಿ ಅಸ್ತಿ ಗಳಿಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಎಡಿಜಿಪಿ ಪ್ರಶಾಂತ್ ಕುಮಾರ್ ಹಾಗೂ ಐ ಜಿ ಪಿ, ಸುಬ್ರಮಣ್ಣೀಶ್ವರ ರಾವ್ ಎಸ್. ಪಿ ಸುರೇಶ್ ಬಾಬು ಮಾರ್ಗದರ್ಶ‌ನದಲ್ಲಿ ಡಿಎಸ್‌ಪಿ, ಕೃಷ್ಣಯ್ಯ ನೇತೃತ್ವದಲ್ಲಿ 12 ತಂಡಗಳಿಂದ ವಿವಿಧ ಕಡೆಗಳಲ್ಲಿ ಪರಿಶೀಲನೆ ನಡೆದಿದೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಪತ್ನಿಯ ಸಹೋದರನ ಮನೆ‌ ಮೇಲೆ‌ ಲೋಕಾಯುಕ್ತ ದಾಳಿಯಾಗಿದೆ. ಡಾ ಪ್ರಭುಲಿಂಗ್ ಮಾನಕರ್ ಯಾದಗಿರಿ ಡಿಎಚ್ ಓ ಅವರ ಕಲಬುರಗಿ ನಗರದ ಕರುಣೇಶ್ವರ ಕಾಲೋನಿಯಲ್ಲಿರುವ ನಿವಾಸದಲ್ಲಿ ಶೋಧ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಬಳ್ಳಾರಿಯ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಚಂದ್ರಶೇಖರ, ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದಾರೆ. ಚಂದ್ರಶೇಖರ ಬಳ್ಳಾರಿಯಲ್ಲಿ ಕೆಲಸ ಮಾಡ್ತಿದ್ರು.. ಮನೆ ಮಾತ್ರ ಹೊಸಪೇಟೆಯಲ್ಲಿದೆ. ಇನ್ನು ಅರಣ್ಯ ಇಲಾಖೆಯ ಡಿಆರ್ ಎಫ್ ಓ ಮಾರುತಿ ಗಂಗಾವತಿಯಲ್ಲಿ‌ ಕೆಲಸ ಮಾಡ್ತಿದ್ರು ಮನೆ ಕಂಪ್ಲಿಯಲ್ಲಿದೆ. ಹೀಗಾಗಿ ಚಂದ್ರಶೇಖರ ಅವರ ಹೊಸಪೇಟೆ ಮನೆ ಮತ್ತು ಮಾರುತಿ ಅವರ ಕಂಪ್ಲಿ ಮತ್ತು ಗಂಗಾವತಿ ನಿವಾಸದ ಮೇಲೆ ದಾಳಿ ಮಾಡಿದ್ದು, ದಾಖಲೆ ಪರಿಶೀಲಿಸುತ್ತಿದ್ದಾರೆ.

ಬೀದರ್ ನ ಪಶು ವೈಧ್ಯಕೀಯ ವಿಶ್ವವಿದ್ಯಾಲಯದ ನೌಕರರ ಸುನೀಲ್ ಕುಮಾರ್ ಮನೆ ಹಾಗೂ ಕಾಂಪ್ಲೆಕ್ಸ್ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ಮಾಡಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ ಎಂದು ಮಾಹಿತಿ ಲಭಿಸಿದೆ.

Gayathri SG

Recent Posts

ರಿಚರ್ಡ್‌ ಹ್ಯಾನ್ಸೆನ್‌ಗೆ ಸೆಲ್ಕೋದ ಪ್ರತಿಷ್ಠಿತ ʼಸೂರ್ಯಮಿತ್ರʼ ಪ್ರಶಸ್ತಿ

ಅಭಿವೃದ್ಧಿಶೀಲ ರಾಷ್ಟ್ರಗಳ ಗ್ರಾಮೀಣ ಪ್ರದೇಶಗಳಲ್ಲಿ ಸೌರವಿದ್ಯುತ್ ಸೌಲಭ್ಯವನ್ನು ಹೆಚ್ಚಿಸಲು, ಆಧುನಿಕ ಫೋಟೋ ವೋಲ್ಟಾಯಿಕ್‌ (ಪಿವಿ) ತಂತ್ರಜ್ಞಾನವನ್ನು ಮೈಕ್ರೋ ಫೈನಾನ್ಸ್ ಸಂ‍ಸ್ಥೆಗಳ…

7 hours ago

ಜಿಯೋ ಬಂಪರ್‌ ಆಫರ್‌ : 15 ಒಟಿಟಿ ಆ್ಯಪ್ಲಿಕೇಷನ್‌ ಜೊತೆ ಅನ್‌ಲಿಮಿಟೆಡ್ ಡೇಟಾ ಪ್ಲಾನ್

ಜಿಯೋ ಇದೀಗ ಮತ್ತೊಂದು ಹೊಚ್ಚ ಹೊಸ ಪ್ಲಾನ್ ಘೋಷಿಸಿದೆ. ನೆಟ್‌ಫ್ಲಿಕ್ಸ್‌ನ ಬೇಸಿಕ್ ಪ್ಲಾನ್, ಅಮೆಜಾನ್ ಪ್ರೈಮ್ ಸೇರಿದಂತೆ 15 ಒಟಿಟಿ…

8 hours ago

ಕಾರಿನಲ್ಲಿ ಆಕಸ್ಮಿಕ ಬೆಂಕಿ : ವ್ಯಕ್ತಿ ಸಜೀವ ದಹನ

ಕಾರಿಗೆ ಆಕಸ್ಮಿಕ ಬೆಂಕಿ ತಗುಲಿ, ಕಾರಿನಲ್ಲಿದ್ದ ವ್ಯಕ್ತಿ ಸಜೀವ ದಹನವಾದ ಘಟನೆ ಬಾಗಲಕೋಟೆ ತಾಲೂಕಿನ ಇಂಗಳಗಿ ಗ್ರಾಮದಲ್ಲಿ ನಡೆದಿದೆ.ಕಾರಿನಲ್ಲಿದ್ದ ಸಂಗನಗೌಡ…

8 hours ago

ವಿಧಾನಪರಿಷತ್ ಚುನಾವಣೆ : ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ ಬಿಜೆಪಿ

ವಿಧಾನಪರಿಷತ್ತಿನ ಪದವೀಧರ, ಶಿಕ್ಷಕರ ಕೇತ್ರಗಳಿಗೆ ಜೂ. 3ರಂದು ನಡೆಯಲಿರುವ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ. 6 ಕ್ಷೇತ್ರಗಳ…

8 hours ago

ಹಾಡಹಗಲೇ ಚಾಕುವಿನಿಂದ ಇರಿದು ಯುವಕನ ಭೀಕರ ಹತ್ಯೆ

ಚಾಕುವಿನಿಂದ ಇರಿದು ಹಾಡಹಗಲೇ ಯುವಕನ ಭೀಕರ ಹತ್ಯೆ ಮಾಡಿರುವ ಘಟನೆ ಜಿಲ್ಲೆಯ ಅಫಜಲಪುರ ತಾಲೂಕಿನ ‌ಮಣ್ಣೂರು ಗ್ರಾಮದಲ್ಲಿ ನಡೆದಿದೆ. ಪ್ರೀತಿ…

9 hours ago

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಬಿತ್ತು ಧರ್ಮದೇಟು

ಮೊಬೈಲ್‌ ಕಳ್ಳತನಕ್ಕೆ ಯತ್ನಿಸಿದ ಕಳ್ಳಿಗೆ ಸಾರ್ವಜನಿಕರೇ ಧರ್ಮದೇಟು ನೀಡಿದ ಘಟನೆ ಉಡುಪಿ ಸಿಟಿ ಬಸ್‌ ನಿಲ್ದಾಣದಲ್ಲಿ ಇಂದು ಸಂಭವಿಸಿದೆ

9 hours ago