ಲವ್‌ ಜಿಹಾದ್‌: ನಾನು ಅಪಾಯದಲ್ಲಿದ್ದೇನೆ ಎಂದು ಪೊಲೀಸರಿಗೆ ಟ್ವೀಟ್‌ ಟ್ಯಾಗ್ ಮಾಡಿದ ಯುವತಿ

ಬೆಂಗಳೂರು: ಕಳೆದ ಕೆಲ ದಿನಗಳ ಹಿಂದೆ ವಿವಾಹಿತೆಯೊಬ್ಬಳನ್ನು ಆಕೆಯ ಗಂಡನ ಸ್ನೇಹಿತನೇ ಲವ್‌ ಜಿಹಾದ್‌ ಬಲೆಗೆ ಸಿಲುಕಿಸಿದ್ದ ಆರೋಪ ವ್ಯಕ್ತವಾಗಿತ್ತು. ಇದೀಗ ಅಂತಹುದೇ ಒಂದು ಪ್ರಕರಣ ಬೆಳಕಿಗೆ ಬಂದಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಲವ್ ಜಿಹಾದ್ ಆರೋಪ ಕೇಳಿಬಂದಿದೆ. ತಾನು ಲವ್ ಜಿಹಾದ್​ಗೆ ಸಿಲುಕಿದ್ದು, ತನ್ನ ಮೇಲೆ ಅತ್ಯಾಚಾರ ಎಸಗಲಾಗಿದೆ, ತಾನು ಅಪಾಯದಲ್ಲಿದ್ದೇನೆ ಎಂದು ಆರೋಪಿಸಿ ಯುವತಿಯೊಬ್ಬಳು ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, ಬೆಂಗಳೂರು ನಗರ ಪೊಲೀಸ್ ಹಾಗೂ ಕರ್ನಾಟಕ ಪೊಲೀಸ್ ಮಹಾನಿರ್ದೇಶಕರಿಗೆ ಟ್ಯಾಗ್ ಮಾಡಿ ನೆರವಿಗೆ ದಾವಿಸುವಂತೆ ಮನವಿ ಮಾಡಿದ್ದಾಳೆ.

ನಾನು ಲವ್ ಜಿಹಾದ್​ಗೆ ಒಳಗಾಗಿದ್ದೇನೆ, ನನ್ನ ಮೇಲೆ ಅತ್ಯಾಚಾರ ನಡೆದಿದೆ. ಬಲವಂತವಾಗಿ ಅಸ್ವಾಭಾವಿಕ ಲೈಂಗಿಕ ದೌರ್ಜನ್ಯ ನಡೆದಿದೆ. ನಾನು ಅಪಾಯದಲ್ಲಿದ್ದೇನೆ. ತುರ್ತಾಗಿ ನನಗೆ ಬೆಂಗಳೂರು ಪೊಲೀಸರ ಸಹಾಯ ಬೇಕಿದೆ ಎಂದು ಯುವತಿ ಟ್ವೀಟ್ ಮಾಡಿದ್ದಾಳೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಬೆಂಗಳೂರು ಸಿಟಿ ಪೊಲೀಸರಿಗೆ ಟ್ಯಾಗ್ ಮಾಡಿದ್ದಾರೆ.

ಟ್ವೀಟ್​ನಲ್ಲಿ ಕೆಲ ವಿಚಾರಗಳನ್ನು ಸಹ ಉಲ್ಲೇಖಿಸಿರುವ ಯುವತಿ, ಫೇಸ್ ಬುಕ್ ಮೂಲಕ ಕಾಶ್ಮೀರ ಯುವಕನ ಪರಿಚಯವಾಗಿ ಇಬ್ಬರ ನಡುವೆ ಹಣಕಾಸಿನ ವ್ಯವಹಾರವೂ ನಡೆದಿತ್ತು. ಮದುವೆಯಾಗುವುದಾಗಿ ನಂಬಿಸಿ ಹಣ ಪಡೆದು ವಂಚನೆ ಎಸಗಿದ್ದಾನೆ. ಸದ್ಯ ಮದುವೆಯಾಗುವುದಿಲ್ಲ ಎಂದು ತನ್ನನ್ನು ನಿರ್ಲಕ್ಷ್ಯಿಸಿದ್ದಾನೆ ಎಂದು ಹೇಳಿದ್ದಾಳೆ. ಅಷ್ಟೇ ಅಲ್ಲದೆ, ತನಗೆ ಪ್ರಾಣ ಬೆದರಿಕೆ ಹಾಕಿರುವ ಆರೋಪವೂ ಮಾಡಿದ್ದು, ಈ ಬಗ್ಗೆ ಬೆಂಗಳೂರು ಪೊಲೀಸರು ಜೊತೆಗೆ ಕಾಶ್ಮೀರ ಪೊಲೀಸರಿಗೂ ಟ್ವೀಟ್ ಮಾಡಿದ್ದಾಳೆ.

ಯುವತಿಯ ಟ್ವೀಟ್ ಗಮನಿಸಿದ ಪೊಲೀಸರು, ಸ್ಥಳೀಯರ ಪೊಲೀಸ್ ಠಾಣೆಗೆ ದೂರು ನೀಡುವಂತೆ ಸೂಚಿಸಿದ್ದಾರೆ. ಅದರಂತೆ, ಸಂತ್ರಸ್ಥ ಯುವತಿ, ಬೆಳ್ಳಂದೂರು ಠಾಣಾ ಪೊಲೀಸರಿಗೆ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದಾರೆ.

Gayathri SG

Recent Posts

ಅಂಜಲಿ ಹತ್ಯೆ ಪ್ರಕರಣ: ನನ್ನ ಮಗನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ ಎಂದ ಆರೋಪಿ ಗಿರೀಶ್ ತಾಯಿ

ನನ್ನ ಮಗ ಗಿರೀಶ್ ತಪ್ಪು ಮಾಡಿದ್ದಾನೆ. ಅವನಿಗೆ ಕೋರ್ಟ್ ಯಾವ ಶಿಕ್ಷೆ ಬೇಕಾದರು ಕೊಡಲಿ. ಅಂಜಲಿ ಮತ್ತು ಗಿರೀಶ್ ಪರಸ್ಪರ…

15 mins ago

ಸ್ವಾತಿ ಹಲ್ಲೆ ಪ್ರಕರಣ : ಹೊಸ CCTV ಫೂಟೇಜ್ ಬಿಡುಗಡೆ ಮಾಡಿದ ಎಎಪಿ

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಪ್ತ ಕಾರ್ಯದರ್ಶಿ ಬಿಭವ್ ಕುಮಾರ್ ಅವರು ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ನಡೆಸಿದ…

16 mins ago

ಮರಕ್ಕೆ ಕಾರು ಡಿಕ್ಕಿ: ನಾಲ್ವರು ಕಾನೂನು ವಿದ್ಯಾರ್ಥಿಗಳು ಮೃತ್ಯು

ಅತಿ ವೇಗವಾಗಿ ಬಂದ ಕಾರೊಂದು ಭಯಾನಕವಾಗಿ ಇನ್ನೊಂದು ಕಾರಿಗೆ ಡಿಕ್ಕಿಯಾಗಿ ಮತ್ತೆ ಮರಕ್ಕೆ ರಭಸದಿಂದ ಗುದ್ದಿದ್ದರಿಂದ ನಾಲ್ವರು ಕಾನೂನು ವಿದ್ಯಾರ್ಥಿಗಳು…

38 mins ago

ಸಮಸ್ಯೆಗಳ ಆಗರ: ಮೂಲಸೌಕರ್ಯಗಳ ಕೊರತೆಗೆ ಬೇಸತ್ತ ಸಾರ್ವಜನಿಕರು

ಪಟ್ಟಣದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದು ಕಾಣುತ್ತಿದೆ. ಸ್ಥಳೀಯ ಆಡಳಿತದ ಕಾರ್ಯವೈಖರಿ ಬಗ್ಗೆ ಸಾರ್ವಜನಿಕರು ಬೇಸರಗೊಂಡಿದ್ದಾರೆ. ಪಟ್ಟಣದಲ್ಲಿ ಒಟ್ಟು 27 ವಾರ್ಡ್‌ಗಳು…

48 mins ago

ನಾಳೆ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನೆ

ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಮೇ.19 ರಂದು ಭಾನುವಾರ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ ಸಾಯಿಬಾಬಾ…

50 mins ago

ಚಾಮರಾಜನಗರದಲ್ಲಿ ಮುಂದುವರೆದ ಮಳೆ ಆರ್ಭಟ: ವಾಹನ ಸವಾರರ ಪರದಾಟ

ಗಡಿಜಿಲ್ಲೆ ವರುಣಾರ್ಭಟ ಮುಂದುವರೆದಿದ್ದು ಶನಿವಾರ ಮಧ್ಯಾಹ್ನದ ಜಿಲ್ಲಾಕೇಂದ್ರದಲ್ಲಿ ಒಂದೂವರೆ ತಾಸು ಜೋರು ಮಳೆಯಾಯಿತು.

1 hour ago