ಬೆಂಗಳೂರು: 2024ರ ಲೋಕ ಸಭೆ ಚುನಾವಣೆಯಲ್ಲಿ ಪ್ರತಿಪಕ್ಷಗಳಲ್ಲಿ ಒಗ್ಗಟ್ಟು ಮೂಡಿಸುವ ನಿಟ್ಟಿನಲ್ಲಿ ಮಹಾಘಟಬಂಧನ್ 2ನೇ ಸಭೆಗೆ ಬೆಂಗಳೂರಿನಲ್ಲಿ ಚಾಲನೆ ದೊರೆತಿದ್ದು, ಡಿನ್ನರ್ ಸಭೆ ನಡೆದಿದೆ.
ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಸೋನಿಯಾ ಗಾಂಧಿ, ಎಂಕೆ ಸ್ಟ್ಯಾಲಿನ್, ಅರವಿಂದ್ ಕೇಜ್ರಿವಾಲ್, ನಿತೀಶ್ ಕುಮಾರ್, ಲಾಲೂ ಪ್ರಸಾದ್ ಯಾದವ್, ಮಮತಾ ಬ್ಯಾನರ್ಜಿ ಹಾಗೂ ಇತರರು ಸಭೆಯಲ್ಲಿ ಭಾಗಿಯಾಗಿದ್ದರು.
ಸಭೆ ಆರಂಭವಾಗುವುದಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ನಾಯಕರು ಸಭೆ ನಡೆಯುವ ಸ್ಥಳಕ್ಕೆ ಆಗಮಿಸಿದ್ದ ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಹಾಗೂ ಪಕ್ಷದ ನಾಯಕ ಬಿಹಾರ ಉಪಮುಖ್ಯಮಂತ್ರಿ ಸಿಎಂ ತೇಜಸ್ವಿ ಯಾದವ್ ಅವರನ್ನು ಸ್ವಾಗತಿಸಿದ್ದರು.