ಮಲ್ಲಿಕಾರ್ಜುನ ಖರ್ಗೆ ತಾವೇನು ಹೆಬ್ಬಾವೇ ಎಂದು ಪ್ರಶ್ನಿಸಿದ್ದ ಯತ್ನಾಳ್‌ಗೆ ನೋಟಿಸ್‌

ಬೆಂಗಳೂರು: ಪಿ ಆರ್‌ ಕಾಯ್ದೆ ಉಲ್ಲಂಘನೆಗೆ ಸಂಬಂಧಿಸಿದಂತೆ ವಿಜಯಪುರ ಬಿಜೆಪಿ ಅಭ್ಯರ್ಥಿ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಮತ್ತೊಂದು ನೋಟಿಸ್ ಜಾರಿ ಮಾಡಲಾಗಿದೆ. ಇದೇ ಮೇ 5 ರಂದು ಮಸ್ಕಿಯಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಆರ್ ಪಿ ಆಕ್ಟ್ ಉಲ್ಲಂಘನೆ ಉಲ್ಲಂಘನೆ ಮಾಡಿದ್ದು, ಇದೀಗ ಕಾರಣ ಕೇಳಿ ಮಸ್ಕಿ ವಿಧಾನಸಭಾ ಕ್ಷೇತ್ರದ ಚುನಾವಣಾಧಿಕಾರಿ ನೋಟಿಸ್ ಜಾರಿ ಮಾಡಿದ್ದಾರೆ.

ಮೋದಿಗೆ ವಿಷದ ಹಾವು ಎಂದ ಮಲ್ಲಿಕಾರ್ಜುನ ಖರ್ಗೆ ತಾವೇನು ಹೆಬ್ಬಾವಾ ಎಂದು ಪ್ರಶ್ನಿಸಿದ್ದರು. ಅಲ್ಲದೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಒಬ್ಬ ಅರೇಹುಚ್ಚಾ ಎಂದು ವಾಗ್ದಾಳಿ ನಡೆಸಿದ್ದರು. ಈ ಮೂಲಕ ಆರ್ ಪಿ ಆಕ್ಟ್ ಉಲ್ಲಂಘನೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಮಸ್ಕಿ ಚುನಾವನಾಧಿಕಾರಿ 24 ಗಂಟೆಗಳಲ್ಲಿ ಸೂಕ್ತ ಸಮಜಾಯಿಷಿ ನೀಡಬೇಕು ಎಂದು ಬಸನಗೌಡ ಪಾಟೀಲ್ ಯತ್ನಾಳ್​ಗೆ ನೋಟಿಸ್ ನೀಡಿದ್ದಾರೆ.

ಅಲ್ಲದೇ ತಪ್ಪಿದಲ್ಲಿ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ನೋಟೀಸ್ ಎಚ್ಚರಿಕೆ ನೀಡಿದ್ದಾರೆ. ಅಲ್ಲದೇ ಈ ಹಿಂದೆ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ವಿಷಕನ್ಯೆ ಎಂದು ಹೇಳಿಕೆ ನೀಡಿದ್ದು, ಆ ಹೇಳಿಕೆಗೂ ಸಹ ಚುನಾವಣಾಧಿಕಾರಿ ಕಾರಣ ಕೇಳಿ ನೋಟಿಸ್ ನೀಡಿದ್ದನ್ನು ಇಲ್ಲಿ ಸ್ಮರಿಸಬಹುದು.

Sneha Gowda

Recent Posts

ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ಇನ್ನಿಲ್ಲ

ತಮಿಳಿನ ಖ್ಯಾತ ಗಾಯಕಿ ಉಮಾ ರಮಣನ್ ಅವರು 69ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.

11 mins ago

ರಜನಿಕಾಂತ್‌ ಸಿನಿಮಾ ತಂಡಕ್ಕೆ ಲೀಗಲ್ ನೋಟಿಸ್ ಕಳುಹಿಸಿದ ಇಳಯರಾಜ

ಸೂಪರ್‌ಸ್ಟಾರ್ ರಜನಿಕಾಂತ್ 171ನೇ ಸಿನಿಮಾ 'ಕೂಲಿ' ಟೈಟಲ್ ಟೀಸರ್ ಇತ್ತೀಚೆಗೆ ರಿಲೀಸ್ ಆಗಿತ್ತು. ಇದೀಗ ʻಕೂಲಿʼ ತಂಡಕ್ಕೆ ಸಂಗೀತ ನಿರ್ದೇಶಕ…

15 mins ago

ಚಲಿಸುತ್ತಿದ್ದ ಬಸ್‌ನಿಂದ ಕಳಚಿಕೊಂಡ ಚಕ್ರಗಳು: ಚಾಲಕನ ಸಮಯಪ್ರಜ್ಞೆಯಿಂದ ತಪ್ಪಿದ ಅನಾಹುತ

ಚಲಿಸುತ್ತಿದ್ದ ಸಾರಿಗೆ ಬಸ್‌ನ ಚಕ್ರ ಕಳಚಿಕೊಂಡು ಬಸ್‌ನಲ್ಲಿದ್ದ 20ಕ್ಕೂ ಅಧಿಕ ಪ್ರಯಾಣಿಕರು ಬೆಚ್ಚಿಬಿದ್ದಿರುವ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ…

38 mins ago

ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ಹಣ ಕಳ್ಳತನ: ಆರೋಪಿ ವಶಕ್ಕೆ

ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ಹಣ ಕಳ್ಳತನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ…

1 hour ago

ಕುಕ್ಕೆ ದೇವಳಕ್ಕೆ ಯೇಸುರಾಜ್ ನೂತನ ಎಇಒ; ಶರಣ್ ಪಂಪ್ವೆಲ್ ಅಪಸ್ವರ, ರಾಮಲಿಂಗಾ ರೆಡ್ಡಿ ಸ್ಪಷ್ಟನೆ

ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಎಸ್ .ಜೆ ಯೇಸುರಾಜ್ ಎ.30 ರಂದು ಅಧಿಕಾರ ಸ್ವೀಕರಿಸಿದರು. ರಾಮನಗರ…

1 hour ago

ಕಾಂಗ್ರೆಸ್ ನಾಯಕ ಎಂ.ಸಿ ವೇಣುಗೋಪಾಲ್ ಮನೆ ಮೇಲೆ ಐಟಿ ದಾಳಿ

ಕಾಂಗ್ರೆಸ್ ನಾಯಕರೂ ಆಗಿರುವ ವಿಧಾನಪರಿಷತ್ ಮಾಜಿ ಸದಸ್ಯ ಎಂ.ಸಿ ವೇಣುಗೋಪಾಲ್ ಅವರ ಮನೆ ಮೇಲೆ ಐಟಿ ಅಧಿಕಾರಿಗಳ ತಂಡ ದಾಳಿ…

1 hour ago