ಮಂಡ್ಯ: ಮೂರನೇ ಹಂತದ ಕಾಲುಬಾಯಿ ರೋಗ ನಿರ್ಮೂಲನಾ ಲಸಿಕಾ ಅಭಿಯಾನಕ್ಕೆ ಕೆಆರ್ ಪೇಟೆಯಲ್ಲಿ ಸೋಮವಾರ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು. ಗೋಪೂಜೆ ಸಲ್ಲಿಸುವ ಮೂಲಕ ಚಾಲನೆ ನೀಡಿದರು.
ಕೆಆರ್ ಪೇಟೆಯಲ್ಲಿ ಸುಮಾರು 1.06 ಲಕ್ಷದ ಜಾನುವಾರುಗಳಿದ್ದು, ಮುಂಜಾಗ್ರತಾ ಕ್ರಮವಾಗಿ ಕಾಲುಬಾಯಿ ರೋಗ ಲಸಿಕಾ ಅಭಿಯಾನ ನಡೆಸಲಾಗುತ್ತಿದೆ. 2019ರಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿದ್ದು, 6 ತಿಂಗಳಿಗೊಮ್ಮೆ ಲಸಿಕೆಯನ್ನು ನೀಡಲಾಗುತ್ತಿದೆ. ಒಂದು ತಿಂಗಳೊಳಗೆ ಮೂರನೇ ಹಂತದ ಲಸಿಕಾ ಅಭಿಯಾನವನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಸಚಿವ ಡಾ.ನಾರಾಯಣಗೌಡ ಅವರು ತಿಳಿಸಿದರು.