News Karnataka Kannada
Tuesday, May 07 2024
ಬೆಂಗಳೂರು ನಗರ

ಮಂಗಳೂರು: ಮೀಸಲಾತಿ ಹೆಚ್ಚಳ ವರದಿ ಜ್ಯಾರಿಯಾಗದಿದ್ದರೆ ಜು. 12ರಿಂದ ತೀವ್ರ ಚಳವಳಿ

Mangaluru: If the report on reservation hike is not cleared, then Intense agitation from 12th
Photo Credit : News Kannada

ಮಂಗಳೂರು; ರಾಜ್ಯದ ದಲಿತ ಸಮುದಾಯಗಳ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ಸಂಬಂಧಿಸಿ ನ್ಯಾ. ಎಚ್. ಎನ್. ನಾಗಮೋಹನ ದಾಸ್ ಅಯೋಗ ನೀಡಿರುವ ವರದಿಯನ್ನು ಜ್ಯಾರಿಗೆ ತರಲು ಸುಗ್ರೀವಾಜ್ಞೆ ಹೊರಡಿಸಬೇಕೆಂದು ಕರ್ನಾಟಕ ಸ್ವಾಭಿಮಾನಿ ಎಸ್‌ಸಿ ಎಸ್‌ಟಿ ಸಂಘಟನೆಗಳ ಒಕ್ಕೂಟ ಹಾಗೂ ಮೀಸಲಾತಿ ಹೆಚ್ಚಳ ಕ್ರಿಯಾ ಸಮಿತಿ ವಕ್ತಾರ ಲೋಲಾಕ್ಷ ಆಗ್ರಹಿಸಿದ್ದಾರೆ.

ಇಂದು ನಗರದ ಪತ್ರಿಕಾ ಭವನದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮತಾ ಸೈನಿಕ ದಳದ ರಾಜ್ಯ ಪ್ರಧಾನ ಕಾರ್ಯದರ್ಶಿಯೂ ಆಗಿರುವ ಅವರು, ಮೀಸಲಾತಿ ಪ್ರಮಾಣ ಹೆಚ್ಚಿಸಬೇಕೆಂದು ಒತ್ತಾಯಿಸಿ ಜಗದ್ಗುರು ಶ್ರೀ ವಾಲ್ಮೀಕಿ ಪ್ರಸನ್ನಾನಂದ ಮಹಾ ಸ್ವಾಮೀಜಿ ನೇತೃತ್ವದಲ್ಲಿ ಬೆಂಗಳೂರಿನ ಪ್ರೀಡಂ ಪಾರ್ಕ್ನಲ್ಲಿ ಅಹೋರಾತ್ರಿ ಧರಣಿ 143 ದಿನಗಳನ್ನು ಪೂರೈಸಿದೆ, ದಲಿತ ಸಮುದಾಯಗಳ ಮಠಾಧಿಪತಿಗಳು, ದಲಿತ ಸಂಘಟನೆಗಳು ಮತ್ತು ಚಿಂತಕರು ಧರಣಿಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ.

ರಾಜ್ಯದ ಶಾಸಕರು, ಸಂಸದರು ಧರಣಿ ಸ್ಥಳದಲ್ಲಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಮೀಸಲಾಗಿ ಹೆಚ್ಚಳದ ಭರವಸೆ ನೀಡಿದ್ದಾರೆ. ಆದರೆ ಅದು ಇನ್ನೂ ಜ್ಯಾರಿಗೆ ಬಂದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಮೀಸಲಾತಿ ಪ್ರಮಾಣವನ್ನು ಹೆಚ್ಚಿಸುವ ಬೇಡಿಕೆ ಈಡೇರದೆ ಇದ್ದರೆ ಜು. 12ರಂದು ರಾಜ್ಯಾದ್ಯಂತ ವ್ಯಾಪಕ ಪ್ರತಿಭಟನೆ ನಡೆಸಲು ಉದ್ದೇಶಿಸಲಾಗಿದೆ. ಸರಕಾರ ಈ ವರದಿಯ ಜ್ಯಾರಿಗೆ ಅಗತ್ಯ ಕ್ರಮ ಕೈಗೊಂಡು ಸ್ವಾಮೀಜಿಯವರ ಧರಣಿ ಸತ್ಯಾಗ್ರಹವನ್ನು ಅಂತ್ಯಗೊಳಿಸಲು ನೆರವಾಗಬೇಕು ಎಂದವರು ಆಗ್ರಹಿಸಿದರು.

ರೇಣುಕಾಚಾರ್ಯ ಅವರೇ ನಕಲಿ ಜಾತಿ ಪ್ರಮಾಣಪತ್ರ ಪಡೆದುಕೊಂಡಿರುವುದು ದಲಿತರ ಮೀಸಲಾತಿ ದುರುಪಯೋಗವಾಗುತ್ತಿರುವುದಕ್ಕೆ ಉದಾಹರಣೆಯಾಗಿದೆ. ಇಂದಿನ ಸ್ಥಿತಿಯಲ್ಲಿ ದಲಿತ ಸಮುದಾಯಕ್ಕೆ ಮೀಸಲಾತಿ ಹೆಚ್ಚಳ ಮಾಡಲೇ ಬೇಕು ಎಂಬ ಹಕ್ಕೊತ್ತಾಯ ತಮ್ಮ ಸಮುದಾಯದ್ದಾಗಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಧರಣಿ ಸತ್ಯಾಗ್ರಹದ 108ನೇ ದಿನದಂದು ಸ್ವಾಮೀಜಿಯವರನ್ನು ಭೇಟಿ ಮಾಡಿದಾಗ ಸ್ಪಷ್ಟವಾಗಿ ತಿಳಿಸಲಾಗಿದೆ. ಆದರೆ ಮುಖ್ಯಮಂತ್ರಿಗಳು ಈ ಬಗ್ಗೆ ಇದುವರೆಗೂ ಕ್ರಮ ಕೈಗೊಂಡಿಲ್ಲ. ಅವರ ಈ ವಿಳಂಬ ಧೋರಣೆಗೆ ಸರಕಾರ ಮತ್ತು ಅವರ ಪಕ್ಷ ಬಹಳ ತೆರಬೇಕಾದೀತು ಎಂದು ಎಚ್ಚರಿಸಿದರು.

ಪಾಣಾರ ಯಾನೆ ನಲಿಕೆ ಸಮಾಜ ಸೇವಾ ಸಂಘದ ಜಿಲ್ಲಾಧ್ಯಕ್ಷ ಪದ್ಮನಾಭ ಮೂಡುಬಿದಿರೆ, ಬಾಕುಡ ಸಮಾಜದ ಜಿಲ್ಲಾ ಮುಖಂಡ ಪದ್ಮನಾಭ ನರಿಂಗಾನ, ದ. ಕ. ಜಿಲ್ಲಾ ಎಸ್‌ಸಿ, ಎಸ್‌ಟಿ ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಮೋಹನಾಂಗಯ್ಯ ಸ್ವಾಮಿ, ದ. ಕ. ದಲಿತ ದಲಿತ್ ಸೇವಾ ಸಮಿತಿ ಸ್ಥಾಪಕ ಅಧ್ಯಕ್ಷ ಬಿ. ಕೆ. ಸೇಸಪ್ಪ ಬೆದ್ರಕಾಡು, ಮಿಜಾರ್ ಶ್ರೀ ಸತ್ಯಸಾರಮಾನಿ ಮೂಲಸ್ಥಾನ ಜೀಣೋದ್ಧಾರ ಸಮಿತಿ ಜಿಲ್ಲಾ ಸಂಘಟನಾ ಸಂಚಾಲಕ ಅಣ್ಣಯ್ಯ ಮಲ್ಲೂರು, ಬಂಟ್ವಾಳ ಪುರಸಭಾ ಸದಸ್ಯ ಜನಾರ್ದನ ಚಂಡ್ತಿಮಾರ್ ಉಪಸ್ಥಿತರಿದ್ದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು