ಬೆಂಗಳೂರು: ಮತ್ತೆ ಗ್ರಾಹಕರಿಗೆ ಶಾಕ್ ಕಾದಿದೆ. ಮತ್ತೆ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ. ನಂದಿನಿ ಹಾಲಿನ ದರ ಪರಿಷ್ಕರಣೆಗೆ ಕರ್ನಾಟಕ ಹಾಲು ಮಾರಾಟ ಮಹಾಮಂಡಳ ಚಿಂತನೆ ನಡೆಸಿದೆ. ಕೆಎಂಎಫ್ ಅಧಿಕಾರಿಗಳ ಮಟ್ಟದಲ್ಲಿ ದರ ಏರಿಕೆ ಕುರಿತು ಸದ್ಯ ಚಿಂತನೆ ನಡೆದಿದ್ದು, ಸರ್ಕಾರ ಪ್ರಸ್ತಾಪಕ್ಕೆ ಒಪ್ಪಿಗೆ ನೀಡಿದರೆ ಹೊಸ ವರ್ಷದ ಆರಂಭದಲ್ಲೇ ನಂದಿನಿ ಹಾಲಿನ ದರ ಏರಿಕೆಯಾಗುವ ಸಾಧ್ಯತೆಯಿದೆ.
ಆರ್ಥಿಕ ನಷ್ಟದ ಹಿನ್ನೆಲೆ ಈ ಹಿಂದೆ 5 ರೂ. ಹೆಚ್ಚಳ ಮಾಡುವಂತೆ ಸರ್ಕಾರಕ್ಕೆ ಕೆಎಂಎಫ್ ಮನವಿ ಮಾಡಿತ್ತು. ಆದರೆ ಸರ್ಕಾರ ಅಕ್ಟೋಬರ್ನಲ್ಲಿ ಕೇವಲ 3 ರೂಪಾಯಿ ಮಾತ್ರ ಏರಿಕೆ ಮಾಡಿತ್ತು. ಈಗ 14 ಹಾಲು ಒಕ್ಕೂಟ ಗಳಿಂದ ಮನವಿ ಬಂದಲ್ಲಿ ಕೂಡಲೇ ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ತಯಾರಿ ನಡೆಸುತ್ತಿದೆ. ಕಳೆದ ಬಾರಿ 3 ರೂ. ನೇರವಾಗಿ ರೈತರಿಗೆ ನೀಡಿದ ಹಿನ್ನೆಲೆ ಒಕ್ಕೂಟಗಳಿಗೆ ನಷ್ಟದ ಸರಿದೂಗಿಸಲು ದರ ಪರಿಷ್ಕರಣೆ ಅನಿವಾರ್ಯ ಎನ್ನುತ್ತಿದ್ದಾರೆ ಕೆಎಂಎಫ್ ಅಧಿಕಾರಿಗಳು. ಸದ್ಯ ಜನವರಿಯಲ್ಲಿ ಒಕ್ಕೂಟಗಳ ಸಭೆ ಕರೆದು ಸರ್ಕಾರಕ್ಕೆ ಪ್ರಸ್ತಾಪ ಸಲ್ಲಿಸಲು ಕೆಎಂಎಫ್ ಚಿಂತನೆ ನಡೆಸಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಸತತ ಸೋಲು ಕಂಡಾಗ ಸ್ಯಾಂಡಲ್ವುಡ್ ನಟ ದಿವಂಗತ ಪುನೀತ್ ರಾಜ್ಕುಮಾರ್ ಅವರ ಪತ್ನಿ ಅಶ್ವಿನಿಯವರನ್ನು…
ಸಿನಿ, ರಾಜಕೀಯ, ಕ್ರೀಡಾ ಕ್ಷೇತ್ರದ ದಿಗ್ಗಜರ ಬದುಕಿನ ಮೇಲೆ ಸಿನಿಮಾ ಮಾಡುವುದು ಅನಾದಿ ಕಾಲದಿಂದಲೂ ನಡೆದುಕೊಂಡು ಬಂದಿದೆ. ಆದರೆ ಇತ್ತೀಚೆಗೆ…
ಭಾರತೀಯ ಸಿಮ್ ಬಳಸಿ ವಿದೇಶದಲ್ಲಿ ಕೂತು ಸೈಬರ್ ವಂಚನೆ ಮಾಡುತ್ತಿದ್ದ ಜಾಲವನ್ನು ಬೆಂಗಳೂರು ಈಶಾನ್ಯ ವಿಭಾಗದ ಸೈಬರ್ ಕ್ರೈಂ ಪೊಲೀಸರ…
ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಬಂಧನವಾಗಿ ಜಾಮೀನಿನ ಮೇಲೆ ಹೊರ ಬಂದಿರುವ ಆಮ್ ಆದ್ಮಿ ಪಕ್ಷದ ನಾಯಕ, ದೆಹಲಿ ಮುಖ್ಯಮಂತ್ರಿ…
ಮೂರು ಹೊಸ ಕ್ರಿಮಿನಲ್ ಕಾನೂನುಗಳು ಸರ್ಕಾರದ ಅಧಿಸೂಚನೆಯ ಪ್ರಕಾರ ಜುಲೈ 1ರಿಂದ ಜಾರಿಗೆ ಬರಲಿವೆ. ಇದರಲ್ಲಿ ಭಾರತೀಯ ನ್ಯಾಯ ಸಂಹಿತಾ,…
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್ ಆಗಿರುವ ದಿಲ್ಲಿ ಮುಖ್ಯಮಂತ್ರಿ…