News Karnataka Kannada
Tuesday, April 23 2024
Cricket
ಬೆಂಗಳೂರು ನಗರ

ಡಿಕೆಶಿ ಬಿಜೆಪಿ ನಾಯಕರ ಭೇಟಿಯಲ್ಲಿ ಸಂಚು: ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪ

Attempts are being made to cover up PSI recruitment exam scam, says Basanagouda Patil Yatnal
Photo Credit : News Kannada

ಬೆಂಗಳೂರು: ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್‌ ಬಿಜೆಪ ನಾಯಕರನ್ನು ಭೇಟಿಯಾಗುತ್ತಿರುವುದರ ಹಿಂದಿನ ಉದ್ದೇಶ ಬೇರೆಯೇ ಇದೆ. ಇದು ಬಿಜೆಪಿ ಕಾರ್ಯಕರ್ತರ ನೈತಿಕ ಸ್ಥೈರ್ಯ ಕುಂದಿಸುವ ಸಂಚು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಆರೋಪಿಸಿದ್ದಾರೆ.

ಕೆಲದಿನಗಳ ಹಿಂದೆ ಡಿ.ಕೆ. ಶಿವಕುಮಾರ್ ಸ್ವತಹ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನೆಗೆ ಹೋಗಿ ಅವರನ್ನು ಸನ್ಮಾನಿಸಿದ ಹಿನ್ನೆಲೆಯಲ್ಲಿ ಯತ್ನಾಳ್‌ ಈ ಹೇಳಿಕೆ ನೀಡಿದ್ದಾರೆ.

ಬಿಜೆಪಿ ನಾಯಕರು ಮತ್ತು ಕಾಂಗ್ರೆಸ್ ನಾಯಕರ ನಡುವೆ ಹೊಂದಾಣಿಕೆ ರಾಜಕಾರಣ ನಡೆದಿದೆ ಎಂಬ ಬಿಜೆಪಿಯ ಕೆಲ ನಾಯಕರ ಆರೋಪದ ನಡುವೆಯೂ ಡಿಸಿಎಂ ಡಿಕೆ ಶಿವಕುಮಾರ್ ಅವರು ಮಾಜಿ ಸಿಎಂ ಬಸವರಾಜ ಬೊಮ್ಮಾಯಿನ್ನು ಭೇಟಿಯಾಗಿದ್ದಾರೆ. ಇದರ ಹಿಂದಿನ ಉದ್ದೇಶ ಬೇರೆ ಇದೆ ಎಂದು ಯತ್ನಾಳ್‌ ಹೇಳಿದ್ದಾರೆ.

ಕಾಂಗ್ರೆಸ್ ನಾಯಕರು ಬಿಜೆಪಿ ನಾಯಕರನ್ನು ಭೇಟಿಯಾದರೆ ಬಿಜೆಪಿ ಕಾರ್ಯಕರ್ತರ ಮನೋಬಲ ಕುಸಿಯುತ್ತದೆ ಎಂಬ ಕಾರಣಕ್ಕೆ ಭೇಟಿಯಾಗುತ್ತಿದ್ದಾರೆ. ಕೈ ನಾಯಕರು ಈ ರೀತಿ ಭೇಟಿಯಾದರೆ ನಾವು ಯಾಕೆ ಪಕ್ಷ ಕಟ್ಟಬೇಕೆಂಬ ಭಾವನೆ ಕಾರ್ಯಕರ್ತರಲ್ಲಿ ಮೂಡಿಸಲು ಡಿ.ಕೆ. ಶಿವಕುಮಾರ್ ಆಟ ಆಡುತ್ತಿದ್ದಾರೆ. ಇದೇ ಕಾರಣಕ್ಕೆ ಡಿ.ಕೆ.ಶಿವಕುಮಾರ್ ಅವ​ರನ್ನು ಮನೆಗೆ ಕರೆಸಿಕೊಳ್ಳಬೇಡಿ ಎಂದು ಬೊಮ್ಮಾಯಿ ಅವರಿಗೆ ಸಲಹೆ ನೀಡಿದ್ದೇನೆ ಎಂದು ಹೇಳಿದ್ದಾರೆ.

ನಮ್ಮ ನಾಯಕರನ್ನು ಭೇಟಿಯಾಗಲೇ ಬೇಕು ಅಂದರೆ ವಿಧಾನಸೌಧದಲ್ಲಿ ಭೇಟಿಯಾಗಿ ಚರ್ಚೆ ಮಾಡಲಿ. ಯಾವುದೇ ವಿಪಕ್ಷ ನಾಯಕರಿಗೆ ಕರೆ ಮಾಡಲ್ಲವೆಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಹೀಗಿದ್ದಾಗ ನಾವು ಯಾಕೆ ಆಡಳಿತ ಪಕ್ಷದವರನ್ನು ಭೇಟಿಯಾಗಬೇಕು? ಕಾಂಗ್ರೆಸ್ ನಾಯಕರನ್ನು ಭೇಟಿಯಾಗುವ ಬದಲು ನಮ್ಮ ಕಾರ್ಯಕರ್ತರನ್ನು ಭೇಟಿಯಾಗಿ ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು