ನಾಗಮಂಗಲ: ದಳಪತಿಗಳ ಅಡ್ಡಾದಲ್ಲಿ ಕಾಂಗ್ರೆಸ್ ಪ್ರಜಾ ಧ್ವನಿ ಯಾತ್ರೆ

ನಾಗಮಂಗಲ: ದಳಪತಿಗಳ ಭದ್ರಕೋಟೆಯಲ್ಲಿ ಕಾಂಗ್ರೆಸ್ ಮತ ಬೇಟೆ ಆರಂಭಿಸಿದ್ದು, ಸಕ್ಕರೆನಾಡು ಮಂಡ್ಯದಲ್ಲಿ ಕಾಂಗ್ರೆಸ್ ಪ್ರಜಾ ಧ್ವನಿ ಯಾತ್ರೆ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ.

ನಾಗಮಂಗಲದಲ್ಲಿ ನಡೆದ ಪ್ರಜಾ ಧ್ವನಿ ಯಾತ್ರೆಯಲ್ಲಿ ಮಾತನಾಡಿದ ಕೊಡಿ ಕೆಪಿಸಿಸಿ ಅಧ್ಯಕ್ಷರಾದ ಡಿಕೆ ಶಿವಕುಮಾರ್, ಜನಸಾಮಾನ್ಯರ ರೈತ ಪರವಾದ ಯೋಜನೆಗಳನ್ನು ನುಡಿದಂತೆ ನಡೆದುಕೊಳ್ಳುವ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷಕ್ಕೆ ನಿಮ್ಮ ಬೆಂಬಲ ನೀಡಬೇಕೆಂದು ಮತದಾರರಲ್ಲಿ ಮನವಿ ಮಾಡಿದರು.

ಕಾಂಗ್ರೆಸ್ ಪಕ್ಷವು ಅಧಿಕಾರದಲ್ಲಿದ್ದಾಗ ಜನಪರ ಯೋಜನೆಗಳನ್ನು ನೀಡಿದ್ದು, ನುಡಿದಂತೆ ನಡೆದುಕೊಂಡಿದೆ. ಈಗಲೂ ತಾವುಗಳು ಯಾವುದೇ ಕನಿಕರದ ಮಾತುಗಳನ್ನು ನಂಬದೇ ಕಾಂಗ್ರೆಸ್ ಪಕ್ಷವನ್ನ ಬೆಂಬಲಿಸುವ ಮುಖಾಂತರ ಅಭಿವೃದ್ಧಿ ಯೋಜನೆಗಳಿಗೆ ಹೊಸ ಭವಿಷ್ಯ ರೂಪಿಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿ ನಾಗಮಂಗಲ ತಾಲೂಕು ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಬೇಕೆಂದು ಮನವಿ ಮಾಡಿದರು. ಮುಂದಿನ ದಿನಗಳಲ್ಲಿ ಇತರೆ ಪಕ್ಷಗಳು ನಮ್ಮದೇ ಸರ್ಕಾರ ರಚನೆ ಮಾಡುತ್ತೇವೆ ಎಂದರೂ ಅವು ಅಧಿಕಾರ ಬರುವುದಿಲ್ಲ ಎಂದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ಚೆಲುವರಾಯಸ್ವಾಮಿ, ಗಂಗಾಧರ್ ಚಂದ್ರಶೇಖರ್ ಸೇರಿದಂತೆ ಹಲವರು ಇದ್ದರು.

Sneha Gowda

Recent Posts

ವಿಜೃಂಭಣೆಯಿಂದ ಜರುಗಿದ ಶ್ರೀ ಅವಿಜ್ಞ ಸಾಯಿಬಾಬಾ ಪ್ರತಿಷ್ಠಾಪನಾ ಮಹೋತ್ಸವ

ವರುಣ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲ್ಲೂಕಿನ ಬಿಳಿಗೆರೆ ಹೋಬಳಿಯ ಸರಗೂರು ಗ್ರಾಮದಲ್ಲಿ ಶ್ರೀ ಅವಿಜ್ಞ ಸಾಯಿ ಕ್ಷೇತ್ರದಲ್ಲಿ ಶ್ರೀ ಅವಿಜ್ಞ…

4 hours ago

ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿ: 40 ಜನರ ರಕ್ಷಣೆ

ಉತ್ತರ ಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ತದಡಿ ಗ್ರಾಮದ ಮೂಡಂಗಿಯ ಸಮೀಪ  ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ಬೋಟ್ ಪಲ್ಟಿಯಾದ ಘಟನೆ ನಡೆದಿದೆ. 

4 hours ago

ಮೋದಿಗೆ ಯಾರೂ ಮತ ಹಾಕಬೇಡಿ ಎಂದಿದ್ದ ಶಿಕ್ಷಕ ಅರೆಸ್ಟ್

ಬಿಹಾರದ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರು ಮೋದಿಗೆ ಯಾರೂ ಮತ ಹಾಕಬೇಡಿ ಎಂದು ಮಕ್ಕಳಿಗೆ ಹೇಳಿದ್ದಕ್ಕೆ ಶಿಕ್ಷಕನನ್ನು ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ.

4 hours ago

ಮೇ 24ರಿಂದ ಮೈಸೂರಿನಲ್ಲಿ ಮಾವು, ಹಲಸು ಮೇಳ

ಪ್ರತಿವರ್ಷದಂತೆ ಈ ಬಾರಿಯೂ ಮೈಸೂರು ನಗರದಲ್ಲಿ  ಒಂದೇ ಸೂರಿನಡಿ ವಿವಿಧ ಮಾವಿನ ತಳಿಯ ಹಣ್ಣು, ಹಲಸಿನ ಹಣ್ಣಿನ ರುಚಿ ಸವಿಯಲು…

5 hours ago

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆ ಸಾವು

ಜಿಪ್​ ಲೈನ್ ತುಂಡಾಗಿ ಬಿದ್ದು ಮಹಿಳೆಯೊಬ್ಬರು ಸಾವನ್ನಪ್ಪಿದ ಘಟನೆ  ರಾಮನಗರ ಜಿಲ್ಲೆಯ ಹಾರೋಹಳ್ಳಿಯ ಜಂಗಲ್ ಟ್ರಯಲ್ಸ್ ರೆಸಾರ್ಟ್​ನಲ್ಲಿ ನಡೆದಿದೆ. 

5 hours ago

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಕೆರೆಯಲ್ಲಿ ಮುಳುಗಿ ಮೃತ್ಯು

ಮೀನು ಹಿಡಿಯಲು ಹೋದ ಒಂದೇ ಕುಟುಂಬದ ಇಬ್ಬರು ಸದ್ಯಸರು ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಶಿರ್ಲಾಲು ಎಂಬಲ್ಲಿ…

5 hours ago