ಬೆಂಗಳೂರು: ಚೈತ್ರ ಕುಂದಾಪುರ ಕೋಟಿ ಡೀಲ್ ಕೇಸ್ ಬೆನ್ನಲ್ಲೇ ಮತ್ತೊಂದು ಕೋಟಿ ಡೀಲ್ ಕೇಸ್ ಬಯಲಾಗಿದೆ. ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ 2.3 ಕೋಟಿ ವಂಚನೆ ಮಾಡಿರುವ ಆರೋಪದಡಿ ಪುತ್ತೂರು ಮೂಲದ ಬಿಜೆಪಿಯಲ್ಲಿದ್ದ ಸ್ಥಳೀಯ ಮುಖಂಡನ ವಿರುದ್ಧ ದೂರು ದಾಖಲಾಗಿದೆ.
ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೆಸರು ಹೇಳಿಕೊಂಡು ಟಿಕೆಟ್ ಕೊಡಿಸೋದಾಗಿ ವಂಚನೆ ಮಾಡಿದ್ದಾರೆ. ವಿಜಯಪುರದ ರೇವಣ್ಣ ಸಿದ್ದಪ್ಪ, ಪುತ್ತೂರಿನ ಶೇಖರ್ ಎನ್.ಪಿ ವಿರುದ್ಧ ಕೊಟ್ಟೂರು ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.