News Karnataka Kannada
Sunday, April 21 2024
Cricket
ಬೆಂಗಳೂರು ನಗರ

ಶಕ್ತಿ ಸ್ಮಾರ್ಟ್‌ ಕಾರ್ಡ್‌ ಅರ್ಜಿ ಸಲ್ಲಿಕೆಗೆ ಹೊಸ ಪೋರ್ಟಲ್‌- ಸಚಿವ ರೆಡ್ಡಿ

ಹಿರೇಮಗಳೂರಿನ ಕೋದಂಡರಾಮ ದೇಗುಲದ ಅರ್ಚಕ ಹಿರೇಮಗಳೂರು ಕಣ್ಣನ್ ಅವರ ವೇತನ ವಾಪಸ್ ಕೇಳುವ ಮೂಲಕ ಆಕ್ರೋಶಕ್ಕೆ ಗುರಿಯಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರ ಇದೀಗ ನೋಟಿಸ್ ಹಿಂಪಡೆಯಲು ಮುಂದಾಗಿದೆ. ಈ ಬಗ್ಗೆ ಮುಜರಾಯಿ ಇಲಾಖೆ ಆಯುಕ್ತರಿಗೆ ಸೂಚನೆ ನೀಡುವುದಾಗಿ ಮುಜರಾಯಿ ಇಲಾಖೆಯ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು.
Photo Credit : Facebook

ಬೆಂಗಳೂರು: ಕರ್ನಾಟಕ ಕಾಂಗ್ರೆಸ್ ಸರ್ಕಾರದ ಉಚಿತ ಗ್ಯಾರಂಟಿಗಳಲ್ಲಿ ಒಂದಾದ, ಸರ್ಕಾರಿ ಬಸ್​​ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಕಲ್ಪಿಸುವ ‘ಶಕ್ತಿ’ ಯೋಜನೆಗೆ ಅರ್ಜಿ ಸಲ್ಲಿಸುವುದಕ್ಕೆಂದೇ ಹೊಸದೊಂದು ಪೋರ್ಟಲ್ ಕಾರ್ಯಾರಂಭ ಮಾಡಲಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಮಂಗಳವಾರ ಹೇಳಿದ್ದಾರೆ.

‘ಶಕ್ತಿ ಸ್ಮಾರ್ಟ್ ಕಾರ್ಡ್‌’ಗಳಿಗೆ ಅರ್ಜಿ ಸಲ್ಲಿಸುವ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ ಎಂದು ಅವರು ತಿಳಿಸಿದ್ದಾರೆ. ಕರ್ನಾಟಕದಲ್ಲಿ ಪ್ರೀಮಿಯಂ ಅಲ್ಲದ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣವನ್ನು ಒದಗಿಸುವ ಶಕ್ತಿ ಯೋಜನೆಯ ಲಾಭ ಪಡೆಯಲು ಸ್ಮಾರ್ಟ್ ಕಾರ್ಡ್‌ಗಳ ಅಗತ್ಯವಿದೆ.

ಸೇವಾ ಸಿಂಧು ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸುವ ಮೂಲಕ ಸ್ಮಾರ್ಟ್ ಕಾರ್ಡ್‌ಗಳನ್ನು ಪಡೆಯಬಹುದು ಎಂದು ರೆಡ್ಡಿ ತಿಳಿಸಿದ್ದಾರೆ. ಹೊಸ ಪೋರ್ಟಲ್ ಶೀಘ್ರದಲ್ಲೇ ಆರಂಭವಾಗಲಿದೆ. ಯಾವುದೇ ಗುರುತಿನ ಚೀಟಿಯನ್ನು ಅಪ್‌ಲೋಡ್ ಮಾಡುವ ಮೂಲಕ ಸ್ಮಾರ್ಟ್ ಕಾರ್ಡ್ ಪಡೆಯಬಹುದು. ಸದ್ಯಕ್ಕೆ, ಸರ್ಕಾರ ನೀಡಿದ ಯಾವುದೇ ಗುರುತಿನ ಚೀಟಿಯನ್ನು ತೋರಿಸಿ ಮಹಿಳೆಯರು ಮೂರು ತಿಂಗಳವರೆಗೆ ಉಚಿತವಾಗಿ ಪ್ರಯಾಣಿಸಬಹುದು ಎಂದು ಅವರು ಹೇಳಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು