ಬೆಂಗಳೂರು: ಕೊರೋನಾ ಬಗ್ಗೆ ಯಾರೂ ಆತಂಕಪಡಬೇಕಾದ ಅಗತ್ಯ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಅವರು ಇಂದು ಕೋವಿಡ್ ಪರಿಸ್ಥಿತಿ ಕುರಿತು ಉನ್ನತ ಮಟ್ಟದ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಾಗಿದೆ. ಜನಸಂದಣಿ ಇರುವ ಪ್ರದೇಶಗಳಲ್ಲಿ ಮಾಸ್ಕ್ ಧರಿಸಬೇಕು. ಮಾರ್ಗಸೂಚಿ ಬಗ್ಗೆ ಸಚಿವ ಸಂಪುಟ ಉಪ ಸಮಿತಿಯಲ್ಲಿ ಚರ್ಚಿಸಲಾಗಿದೆ. ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ಹೊಸ ಮಾರ್ಗಸೂಚಿ ಬಿಡುಗಡೆ ಮಾಡುವುದಿಲ್ಲ ಎಂದು ಹೇಳಿದರು.
ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧಗಳಿರುವುದಿಲ್ಲ. ಗುಂಪು ಸೇರುವ ಸಂದರ್ಭದಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ .
ಕೊರೊನಾ ಸಾಂಕ್ರಾಮಿಕ ನಿಯಂತ್ರಣಕ್ಕೆ ನಾವು ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದ್ದೇವೆ. ಈ ಬಗ್ಗೆ ಯಾರೊಬ್ಬರೂ ಆತಂಕಪಡಬೇಕಾದ ಅಗತ್ಯವಿಲ್ಲ.
ಕ್ರಿಸ್ಮಸ್ ಹಾಗೂ ಹೊಸ ವರ್ಷಾಚರಣೆಗೆ ಯಾವುದೇ ನಿರ್ಬಂಧಗಳಿರುವುದಿಲ್ಲ. ಗುಂಪು ಸೇರುವ ಸಂದರ್ಭದಲ್ಲಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ.
ಸಂಭ್ರಮದ ಜೊತೆಗೆ ನಿಮ್ಮ ಆರೋಗ್ಯದ… pic.twitter.com/R2huFhRZJm
— Siddaramaiah (@siddaramaiah) December 21, 2023