ತೆಲಂಗಾಣದಲ್ಲಿ ಅಕ್ಕಿ ಸಂಗ್ರಹ ಇಲ್ಲ: ಛತ್ತೀಸ್‌ಗಢದತ್ತ ಮುಖ ಮಾಡಿದ ರಾಜ್ಯ ಸರ್ಕಾರ

ಬೆಂಗಳೂರು: ಕರ್ನಾಟಕಕ್ಕೆ ನೀಡಲು ಅಗತ್ಯವಿರುವಷ್ಟು ಗುಣಮಟ್ಟದ ಅಕ್ಕಿಯ ದಾಸ್ತಾನು ಇಲ್ಲ ಎಂದು ತೆಲಂಗಾಣ ರಾಜ್ಯ ಸರ್ಕಾರ ಹೇಳುವುದರೊಂದಿಗೆ ಕರ್ನಾಟಕಕ್ಕೆ ಅನ್ನಭಾಗ್ಯಕ್ಕೆ ಅಕ್ಕಿ ಹೊಂದಿಸುವುದು ಸಮಸ್ಯೆಯಾಗಿ ಪರಿಣಮಿಸಿದೆ. ಇದೀಗ ಸರ್ಕಾರ ಛತ್ತೀಸ್‌ಗಢದತ್ತ ಮುಖ ಮಾಡಿದೆ.

ಅನ್ನಭಾಗ್ಯ ಯೋಜನೆ ಜಾರಿ ಮಾಡಲು 2.28 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದೆ. ಈ ಪೈಕಿ ಛತ್ತೀಸ್‌ಗಢದಲ್ಲಿ 1.5 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಲಭ್ಯವಿರುವುದಾಗಿ ತಿಳಿದುಬಂದಿದೆ. ಈ ಅಕ್ಕಿಯನ್ನು ಖರೀದಿ ಮಾಡಲು ಸರ್ಕಾರ ಮುಂದಾಗಿದೆ ಎನ್ನಲಾಗಿದೆ.

ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಬಿಪಿಎಲ್ ಕುಟುಂಬದ ಪ್ರತಿಯೊಬ್ಬ ಸದಸ್ಯನಿಗೆ 10 ಕೆಜಿ ಅಕ್ಕಿ ನೀಡುವುದಾಗಿ ಸರ್ಕಾರ ಘೋಷಣೆ ಮಾಡಿದೆ. ಒಂದು ವೇಳೆ ಅಕ್ಕಿ ನೀಡಲು ಸಾಧ್ಯವಾಗದಿದ್ದರೆ, ಅಕ್ಕಿಯ ಪ್ರಮಾಣ ಇಳಿಸಿ, ಅದರ ಬದಲಾಗಿ ಜೋಳ ಮತ್ತು ರಾಗಿ ಪರಿಹಾರವಾಗಿ ನೀಡುವ ಕುರಿತು ಚಿಂತನೆ ನಡೆಯುತ್ತಿದೆ.

ಜುಲೈ 1ರಂದು ‘ಅನ್ನ ಭಾಗ್ಯ’ ಯೋಜನೆಗೆ ಚಾಲನೆ ನೀಡಲಾಗುವುದು ಎಂದು ಸರಕಾರ ಈ ಮೊದಲು ಹೇಳಿತ್ತು. ಆದರೆ ಕೇಂದ್ರ ಅಕ್ಕಿ ಕೊಡಲೊಪ್ಪದ ಕಾರಣ ಜುಲೈ 1ಕ್ಕೆ ಯೋಜನೆ ಪ್ರಾರಂಭಿಸುವುದು ಅಸಾಧ್ಯ. ಹೊಸ ದಿನಾಂಕವನ್ನು ಶೀಘ್ರ ಪ್ರಕಟಿಸುತ್ತೇವೆ ಎಂದು ಶನಿವಾರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್.ಮುನಿಯಪ್ಪ ಹೇಳಿದ್ದಾರೆ.

ಈ ಹಿಂದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಛತ್ತೀಸ್‌ಗಢದಲ್ಲಿ 1.50 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಲಭ್ಯವಿದೆ. ಆದರೆ ಸಾಗಾಣಿಕೆ ವೆಚ್ಚ ಹೆಚ್ಚಾಗಲಿದೆ ಎಂದು ಹೇಳಿದ್ದರು. ಈ ಹಿನ್ನೆಲೆಯಲ್ಲಿ ಮೊದಲಿಗೆ ತೆಲಂಗಾಣ ರಾಜ್ಯ ಸಂಪರ್ಕಿಸಿದ ಸಿದ್ದರಾಮಯ್ಯ ಅವರು, ಅಲ್ಲಿನ ಮುಖ್ಯಮಂತ್ರಿಯೊಂದಿಗೆ ಖುದ್ದು ಮಾತುಕೆ ನಡೆಸಿದರು. ಆದರೆ, ಅಲ್ಲಿನ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಅಗತ್ಯವಿರುವಷ್ಟು ಅಕ್ಕಿ ನಮ್ಮ ಬಳಿ ಇಲ್ಲ ಎಂದು ಹೇಳಿದೆ.

Sneha Gowda

Recent Posts

ಆರ್‌ಸಿಬಿ ಆಟಗಾರರಿಗೆ ಶೇಕ್ ಹ್ಯಾಂಡ್ ಮಾಡದೇ ಮೈದಾನದಿಂದ ತೆರಳಿದ ಧೋನಿ..!

ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಚೆನ್ನೈ ಸೂಪರ್ ಕಿಂಗ್ಸ್ ವಿರುದ್ಧದ ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 27 ರನ್​ಗಳಿಂದ…

10 mins ago

ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ಬಂದಿದೆ ಹಸಿರು ಕಳೆ

ಬೇಸಿಗೆಯ ಬಿಸಿಲಿಗೆ ಸಿಲುಕಿ ಕೆಂಪಾಗಿದ್ದ ಚಾಮುಂಡಿಬೆಟ್ಟಕ್ಕೀಗ ವರುಣನ ಕೃಪೆಯಿಂದ ಹಸಿರು ಕಳೆ ಬಂದಿದೆ.  ಜನವರಿಯಿಂದ ಏಪ್ರಿಲ್ ತನಕವೂ ಮಳೆ ಸುರಿಯದ…

20 mins ago

ಆರ್​ಸಿಬಿಗೆ ಟ್ವೀಟ್​ ಮೂಲಕ ವಿಜಯ್​ ಮಲ್ಯ ಅಭಿನಂದನೆ

ಶನಿವಾರ ತಡರಾತ್ರಿ ನಡೆದ ಐಪಿಎಲ್​ನ ರೋಚಕ ಪಂದ್ಯದಲ್ಲಿ ಕನ್ನಡಿಗರ ನೆಚ್ಚಿನ ತಂಡವಾದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಹಾಲಿ ಚಾಂಪಿಯನ್​…

30 mins ago

ತಾಯಿಯ ಶವದ ಜೊತೆಗೆ ನಾಲ್ಕು ದಿನ ಕಳೆದಿದ್ದ ಬುದ್ಧಿಮಾಂದ್ಯ ಪುತ್ರಿಯೂ ಮೃತ್ಯು

ನಾಲ್ಕು ದಿನಗಳ ಹಿಂದೆ ಸಾವನ್ನಪ್ಪಿದ ತನ್ನ ತಾಯಿಯ ಮೃತದೇಹದ ಮುಂದೆ ಅನ್ನ ನೀರು ಇಲ್ಲದೆ ಇದ್ದ ವಿಶೇಷಚೇತನ ಮಗಳು ಕೂಡ…

36 mins ago

ಗರ್ಭಿಣಿಯರಲ್ಲಿ ಅಧಿಕ ರಕ್ತದೊತ್ತಡ ಜೀವಕ್ಕೆ ಗಂಡಾಂತರ

ಇಂದಿನ ದಿನಗಳಲ್ಲಿ ರಕ್ತದೊತ್ತಡದ ಸಮಸ್ಯೆ ಸರ್ವೇಸಾಮಾನ್ಯವಾಗಿದೆ. ಹೀಗೆ ರಕ್ತದೊತ್ತಡ ಸಮಸ್ಯೆ ಕಾಡುವುದಕ್ಕೆ ಕಾರಣಗಳು ಹಲವು. ಅದರಲ್ಲಿಯೂ ಮುಖ್ಯವಾಗಿ ನಮ್ಮ ಜೀವನ…

41 mins ago

ಬೆಂಗಳೂರಿನಲ್ಲಿ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚಳ ವಿದ್ಯುತ್ ಬಳಕೆ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಗೃಹ ಬಳಕೆಗೆ ತಿಂಗಳಿಗೆ ಸರಾಸರಿ 4.3 ಕೋಟಿ ಯೂನಿಟ್‌ ಹೆಚ್ಚುವರಿಯಾಗಿ ಬಳಕೆಯಾಗಿದೆ.

43 mins ago