News Karnataka Kannada
Monday, April 22 2024
Cricket
ಬೆಂಗಳೂರು ನಗರ

ರಾಜ್ಯಕ್ಕೆ ಅಕ್ಕಿ ಪೂರೈಸದಿರುವುದು ಘೋರ ಅಪರಾಧ- ಶೆಟ್ಟರ್‌ ವಾಗ್ದಾಳಿ

Will get Belagavi ticket: Shettar
Photo Credit : News Kannada

ಬೆಂಗಳೂರು: ರಾಜ್ಯಕ್ಕೆ ಫುಡ್ ಕಾರ್ಪೊರೇಷನ್ ಇಂಡಿಯಾ (ಎಫ್‌ಸಿಐ) ಮೂಲಕ ಅಕ್ಕಿ ನೀಡಲು ನಿರಾಕರಿಸಿದ ಕೇಂದ್ರ ನೀತಿ ವಿರುದ್ಧ ಮಾಜಿ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ಎಂಎಲ್‌ಸಿ ಜಗದೀಶ್ ಶೆಟ್ಟರ್ ಶನಿವಾರ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಇದು ಅಕ್ಷಮ್ಯ ಅಪರಾಧ’ ಎಂದು ಶೆಟ್ಟರ್ ಆರೋಪಿಸಿದ್ದಾರೆ.

ಬಿಪಿಎಲ್ ಕುಟುಂಬದ ಎಲ್ಲ ಸದಸ್ಯರಿಗೆ 10 ಕಿಲೋಗ್ರಾಂ ಅಕ್ಕಿ ನೀಡುವ ಉದ್ದೇಶದಿಂದ ಅನ್ನ ಭಾಗ್ಯ ಯೋಜನೆ ಜಾರಿಗೊಳಿಸಲು ರಾಜ್ಯಕ್ಕೆ ಅಕ್ಕಿ ನೀಡದಿರುವ ಕೇಂದ್ರ ಕ್ರಮವನ್ನು ಟೀಕಿಸಿದರು. ಕರ್ನಾಟಕಕ್ಕೆ ಅಕ್ಕಿ ಮಾರಾಟ ನಿರಾಕರಿಸಿರುವುದು ಕೇಂದ್ರ ಸರ್ಕಾರ ಉತ್ತಮ ನಡತೆ ಅಲ್ಲ’ ಎಂದು ವಾಗ್ದಾಳಿ ನಡೆಸಿದರು.

ಮೊದಲಿಗೆ ಅಕ್ಕಿ ನೀಡುವುದಾಗಿ ಭರವಸೆ ನೀಡಿ ಈಗ ರಾಜಕೀಯ ಕಾರಣಕ್ಕೆ ಅದನ್ನು ನಿರಾಕರಿಸುತ್ತಿದ್ದಾರೆ. ಕೇಂದ್ರ ಸರ್ಕಾರ ಹೆಚ್ಚುವರಿ ಅಕ್ಕಿಯನ್ನು ರಾಜ್ಯಕ್ಕೆ ನೀಡಬೇಕು ಎಂದು ಶೆಟ್ಟರ್ ಹೇಳಿದರು.

ಈ ನಡುವೆ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಕ್ಕಿ ನೀಡಲು ನಿರಾಕರಿಸಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಚರ್ಚೆ ನಡೆಸಲು ಸಭೆ ನಡೆಸುತ್ತಿದ್ದಾರೆ. ಸಭೆಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಮತ್ತು ಆಹಾರ ಇಲಾಖೆಯ ಉನ್ನತ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಶನಿವಾರ ಮಧ್ಯಾಹ್ನ ಸಭೆ ನಡೆಯಲಿದ್ದು, ಪರ್ಯಾಯ ವ್ಯವಸ್ಥೆ ಕುರಿತು ಚರ್ಚೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು