ಬೆಂಗಳೂರು: ಹವಾಮಾನ ಇಲಾಖೆ ಜುಲೈ 3ರಿಂದ 4 ದಿನಗಳ ಕಾಲ ದಕ್ಷಿಣ ಒಳನಾಡಿನ ಮಲೆನಾಡು ಪ್ರದೇಶಗಳಾದ ಚಿಕ್ಕಮಗಳೂರು, ಕೊಡುಗು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಅಲ್ಲದೆ ಕರಾವಳಿ ಭಾಗದಲ್ಲಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚನೆ ನೀಡಲಾಗಿದೆ.
ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳಿಗೆ ಜುಲೈ 3ರಿಂದ ಮೂರು ದಿನ ಯಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.