ಬೆಂಗಳೂರು: ಪ್ರವೀಣ್ ಹತ್ಯೆ ಪ್ರಕರಣ ರಾಷ್ಟ್ರೀಯ ತನಿಖಾ ದಳಕ್ಕೆ ಹಸ್ತಾಂತರ

ಬೆಂಗಳೂರು: ಪ್ರವೀಣ್ ನೆಟ್ಟಾರು ಅವರ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲು ತೀರ್ಮಾನಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಸಿಎಂ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ರಾಜ್ಯ ಪೊಲೀಸ್ ಮುಖ್ಯಸ್ಥ ಪ್ರವೀಣ್ ಸೂದ್ ಮತ್ತು ಇತರ ಹಿರಿಯ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.

ಮಾಧ್ಯಮದವರೊಂದಿಗೆ ಮಾತನಾಡಿದಂತ ಅವರು, ಪ್ರವೀಣ್ ಹತ್ಯೆ ವ್ಯವಸ್ಥಿತವಾಗಿ ಆಗಿದೆ ಹಾಗೂ ಇದೊಂದು ಅಂತರರಾಜ್ಯ ವಿಚಾರವಾಗಿದೆ. ಡಿಜಿ, ಐಜಿ ಅವರ ಬಳಿ ಚರ್ಚಿಸಲಾಗಿದ್ದು, ಅದರ ಸಂಪೂರ್ಣ ಮಾಹಿತಿಯನ್ನು ಪಡೆಯಲು ಸೂಚಿಸಲಾಗಿದೆ. ತನಿಖೆ ತೀವ್ರಗತಿಯಲ್ಲಿ ನಡೆಯುತ್ತಿದ್ದು, ಮಾಹಿತಿ ಪಡೆದ ನಂತರ ಗೃಹ ಇಲಾಖೆ ಪತ್ರ ಬರೆಯಲಿದೆ.

ಸೂರತ್ಕಲ್‍ನಲ್ಲಿ ನಡೆದ ಹತ್ಯೆಯ ಬಗ್ಗೆಯೂ ತೀವ್ರಗತಿಯಲ್ಲಿ ತನಿಖೆಯಾಗಿ, ತಪ್ಪಿತಸ್ಥರನ್ನು ಬಂಧಿಸಬೇಕು. ಅದಕ್ಕೂ ಕೂಡ ತಂಡಗಳನ್ನು ರಚಿಸಿ ತನಿಖೆ ಪ್ರಾರಂಭ ಮಾಡಬೇಕೆಂದು ತೀರ್ಮಾನ ಮಾಡಲಾಗಿದೆ ಎಂದರು. ಜಿಲ್ಲಾ ಮಟ್ಟದಲ್ಲಿ ಧಾರ್ಮಿಕ ಮುಖಂಡರನ್ನ ಕರೆದು ಶಾಂತಿ ಸಭೆಗಳನ್ನು ಮಾಡುವ ನಡೆಸಲಾಗುವುದು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

Gayathri SG

Recent Posts

ಕೋಲ್ಕತ್ತಾ-ಗುಜರಾತ್‌ ಪಂದ್ಯ ರದ್ದು : ಟೂರ್ನಿಯಿಂದ ಹೊರಬಿದ್ದ​ ಟೈಟಾನ್ಸ್​ ಪಡೆ

: ಕೆಕೆಆರ್​ ವಿರುದ್ಧದ ಸೋಮವಾರದ ಐಪಿಎಲ್​ ಪಂದ್ಯ ರದ್ದು ಗೊಂಡ ಕಾರಣ ಶುಭಮನ್​ ಗಿಲ್​ ಸಾರಥ್ಯದ ಗುಜರಾತ್​ ಟೈಟಾನ್ಸ್​ ತಂಡ…

10 mins ago

ಕೋವಿಡ್ ಹೊಸ ರೂಪಾಂತರಿ ಪತ್ತೆ : 91 ಪ್ರಕರಣ ದಾಖಲು

ಈಗಾಗಲೇ ಒಂದು ಬಾರಿ ಜನ ಜೀವನವನ್ನು ಅಲ್ಲೋಲಾ ಕಲ್ಲೊಲಾ ಮಾಡಿದ್ದ ಕೊರೊನಾ ಮಾರಿ ಇದೀಗ ಮತ್ತೆ ಒಂದು ಹೊಸ ರೂಪದಲ್ಲಿ…

44 mins ago

ಇಂದು ಮಧ್ಯಾಹ್ನ ರೇವಣ್ಣ ರಿಲೀಸ್ : ಜೈಲಿನ ಬಳಿ ಬೆಂಬಲಿಗರ ಸಂಭ್ರಮ

ಮಹಿಳೆ ಅಪಹರಣ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಜೆಡಿಎಸ್ ಶಾಸಕ ಎಚ್‌.ಡಿ ರೇವಣ್ಣಗೆ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ನೀಡಿದೆ. ಇಂದು…

58 mins ago

ಕೇರಳದಲ್ಲಿ ಎರಡು ಕಡೆ ಐಸ್‌ಕ್ರೀಂ ಬಾಂಬ್‌ ಸ್ಫೋಟ

ಇಲ್ಲಿನ ಪರಿಯಾರಂನ ಅಂಚರಕಂಡಿಯಲ್ಲಿ ಸೋಮವಾರ ಬೆಳಗಿನ ಜಾವ 3 ಗಂಟೆ ಸುಮಾರಿಗೆ ರಸ್ತೆಗೆ ಎಸೆಯಲಾದ 2 ಐಸ್‌ ಕ್ರೀಂ ಬಾಂಬ್‌ಗಳು…

1 hour ago

ಮುಂಬೈನಲ್ಲಿ ದಿಢೀರ್‌ ದೂಳಿನ ಬಿರುಗಾಳಿ: 8 ಸಾವು, 65 ಜನರಿಗೆ ಗಾಯ

ಮುಂಬೈನಲ್ಲಿ ಸಂಜೆ ದಿಢೀರನೆ ಬಿರುಗಾಳಿ ಕಾಣಿಸಿಕೊಂಡಿದ್ದು ಪರಿಣಾಮ 8 ಮಂದಿ ಸಾವನಪ್ಪಿದ್ದಾರೆ. ಜೊತೆಗೆ 65 ಜನರು ಗಾಯಗೊಂಡಿದ್ದಾರೆ. ಗಾಳಿಯ ಬೆನ್ನಲ್ಲೇ…

2 hours ago

ಬಿಹಾರದ ಮಾಜಿ ಉಪಮುಖ್ಯಮಂತ್ರಿ ಸುಶೀಲ್ ಮೋದಿ ನಿಧನ

ಬಿಹಾರದ ಮಾಜಿ ಡಿಸಿಎಂ ಹಾಗೂ ಬಿಜೆಪಿ ಹಿರಿಯ ನಾಯಕ ಸುಶೀಲ್ ಮೋದಿ (72) ಅವರು ನಿಧನ ಹೊಂದಿದ್ದಾರೆ. ದೆಹಲಿಯ ಅಖಿಲ…

2 hours ago