ಪ್ರಧಾನಿ ನರೇಂದ್ರ ಮೋದಿಯವರಿಂದ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ

ಬೆಂಗಳೂರು: ಬೆಂಗಳೂರಿಗೆ ಆಗಮಿಸಿರುವ ಪ್ರಧಾನಿ ನರೇಂದ್ರ ಮೋದಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು. ಕೊಮ್ಮಘಟ್ಟದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕಾರ್ಯಕ್ರಮದಲ್ಲಿ ಬೈಯ್ಯಪ್ಪನಹಳ್ಳಿಯ ಹವಾನಿಯಂತ್ರಿತ ರೈಲು ನಿಲ್ದಾಣ ಉದ್ಘಾಟನೆ ಮಾಡಿದರು.

ಇದರ ಜೊತೆಗೆ ಬೆಂಗಳೂರು ಸಬ್ಅರ್ಬನ್ ರೈಲು ಯೋಜನೆ ಮತ್ತು 6ರಾಷ್ಟ್ರೀಯ ಹೆದ್ದಾರಿ ಯೋಜನೆ ಮತ್ತು ಲಾಜಿಸ್ಟಿಕ್ ಪಾರ್ಕ್‌ಗೆ ಪ್ರಧಾನಿ ಶಂಕುಸ್ಥಾಪನೆ ಮಾಡಿದರು.

ಬೆಂಗಳೂರಿನಲ್ಲಿ ಸಂಪರ್ಕವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು ಉಪನಗರ ರೈಲು ಯೋಜನೆ (BSRP) ಗೆ ಪ್ರಧಾನಮಂತ್ರಿಯವರು ಅಡಿಪಾಯ ಹಾಕಿದರು.

15,700 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಲಿರುವ ಈ ಯೋಜನೆಯು ಒಟ್ಟು 148 ಕಿಮೀ ಉದ್ದದ 4 ಕಾರಿಡಾರ್‌ಗಳನ್ನು ಹೊಂದಿದೆ. ಯಶವಂತಪುರ ಜಂಕ್ಷನ್ ರೈಲು ನಿಲ್ದಾಣವನ್ನು ಕ್ರಮವಾಗಿ ಸುಮಾರು 500 ಕೋಟಿ ಮತ್ತು 375 ಕೋಟಿ ರೂಪಾಯಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು.

ಯಲಹಂಕದಿಂದ ಹೈದ್ರಾಬಾದ್‌ ಗೆ ಡಬಲಿಂಗ್‌ ಲೈನ್‌, ಅರಸಿಕೆರೆ ಮತ್ತು ತುಮಕೂರು ನಡುವಿನ ಕೊಂಕಣ ರೇಲ್ವೇ ವಿದ್ಯುದೀಕರಣ, ತುಮಕೂರಿನ ಬಳಿ 5 ರಾಜ್ಯಗಳನ್ನು ಸಂಪರ್ಕಿಸುವ ಬೃಹತ್‌ ಲಾಜಿಸ್ಟಕ್‌ ಪಾರ್ಕ್‌ ಸ್ಯಾಟಲಾಟ್‌ ಟೌನ್‌ ರಿಂಗ್‌ ರೋಡ್‌ ಮೂಲಕ ನಾಲ್ಕು ಸ್ಯಾಟಲೈಟ್‌ ನಗರಗಳನ್ನು ಸಂಪರ್ಕಿಸುವ 2,000 ಕೋಟಿ ವೆಚ್ಚದಲ್ಲಿ ಮೂಲಭೂತ ಸೌಕರ್ಯ ಅಭಿವೃದ್ಧಿ ಯೋಜನೆ‌ ಸೇರಿದಂತೆ ಹಲವು ಅಭಿವೃದ್ಧಿ ಯೋಜನೆಗಳಿಗೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಪ್ರತಿ ಯೋಜನೆಯ ಕುರಿತಾದ ಮಾಹಿತಿಯನ್ನು ಕಿರುಚಿತ್ರಗಳ ಮೂಲಕ ಪ್ರಸ್ತುತಪಡಿಸಲಾಯಿತು.

Sneha Gowda

Recent Posts

ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣ: ಆರೋಪಿ ಬಿಭವ್‌ ಕುಮಾರ್‌ 5 ದಿನ ಕಸ್ಟಡಿಗೆ

ಆಮ್‌ ಆದ್ಮಿ ಪಕ್ಷದ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್‌ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅರೆಸ್ಟ್‌ ಆಗಿರುವ ದಿಲ್ಲಿ ಮುಖ್ಯಮಂತ್ರಿ…

23 mins ago

ಆರ್​ಸಿಬಿ ಮುಂದಿನ ಪಂದ್ಯವನ್ನು ಯಾವ ತಂಡದ ಜೊತೆ ಆಡಲಿದೆ..?

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಬಲಿಷ್ಠ ಚೆನ್ನೈ ಸೂಪರ್ ಕಿಂಗ್ಸ್​ ತಂಡವನ್ನು ಸೋಲಿಸಿ ರಾಯಲ್ಲಾಗಿಯೇ ಪ್ಲೇಆಫ್​ಗೆ ಪ್ರವೇಶಿಸಿದೆ. ಇನ್ನು ಆರ್​ಸಿಬಿ…

37 mins ago

ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ

ನಗರದ ಮಂಗಲಪೇಟ್‌ ಸಮೀಪದ ಮೆಥೋಡಿಸ್ಟ್‌ ಚರ್ಚ್‌ನ 101ನೇ ವಾರ್ಷಿಕ ಜಾತ್ರೆ ಉತ್ಸವ ಸಂಭ್ರಮದಿಂದ ನಡೆಯಿತು.

1 hour ago

ಆಧಾರ್‌ ದುರುಪಯೋಗ: ಕರ್ನಾಟಕದಿಂದ 2.95 ಲಕ್ಷ ದೂರು ದಾಖಲು

ಜನರು ದಾಖಲೆ ದುರುಪಯೋಗ ಪಡಿಸಿಕೊಂಡಿರುವ ಸೈಬರ್ ವಂಚಕರು, ಒಂದೇ ಸಂಖ್ಯೆ ಸಿಮ್‌ಗಳನ್ನು ಖರೀದಿಸಿರುವ ಸಂಬಂಧ ಟೆಲಿಕಾಂ ಅನಾಲಿಟಿಕಲ್‌ ಫಾರ್ ಫ್ರಾಡ್‌…

1 hour ago

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ: ಆರೆಂಜ್, ಯೆಲ್ಲೋ ಅಲರ್ಟ್‌ ಘೋಷಣೆ

ರಾಜ್ಯಾದ್ಯಂತ ಭಾರಿ ಮಳೆಯಾಗುವ ಸಾಧ್ಯತೆ ಇದ್ದು, ಪ್ರತ್ಯೇಕ ಕಡೆಗಳಲ್ಲಿ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಗುಡುಗು ಸಹಿತ ಮಿಂಚು ಮತ್ತು…

2 hours ago

ಆರೋಗ್ಯದ ವೃದ್ಧಿಗೆ ಕಾಮಕಸ್ತೂರಿ ಬೀಜದ ಪಾನಕ

ಮನುಷ್ಯ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯ ಅದೇ ರೀತಿ ಖಾಲಿ ಹೊಟ್ಟೆಯಲ್ಲಿ ಕಾಮಕಸ್ತೂರಿ ಬೀಜಗಳನ್ನು ಕುಡಿಯುವುದು ಬಹಳಷ್ಟು…

2 hours ago