News Karnataka Kannada
Monday, April 29 2024
ಬೆಂಗಳೂರು ನಗರ

ನಟ ಶಿವರಾಜ್‌ ಕುಮಾರ್‌ ನೇತೃತ್ವದಲ್ಲಿ ನಾಳೆ ಪ್ರತಿಭಟನೆ

Protest led by actor Shivraj Kumar tomorrow
Photo Credit : News Kannada

ಬೆಂಗಳೂರು: ರಾಜ್ಯದಲ್ಲಿ ಕಾವೇರಿ ಹೋರಾಟದ ಕಿಚ್ಚು ದಿನೇ ದಿನೇ ಹೆಚ್ಚುತ್ತಿದೆ. ನಾಳೆ ಸೆ.29ರಂದು ರಾಜ್ಯವ್ಯಾಪಿ ಬಂದ್‌ ಗೆ ಕರೆ ನೀಡಲಾಗಿದೆ.  . ಈ ವೇಳೆ ಪ್ರತಿಭಟನೆಯಲ್ಲಿ ನಟ ಶಿವರಾಜ್​ಕುಮಾರ್ ಭಾಗಿಯಾಗುತ್ತಾರೆ ಎಂದು ಬೆಂಗಳೂರಿನಲ್ಲಿ ಫಿಲ್ಮ್ ಚೇಂಬರ್ ಅಧ್ಯಕ್ಷ ಎನ್.ಎಂ.ಸುರೇಶ್ ಹೇಳಿದ್ದಾರೆ. ಬೆಳಗ್ಗೆ 11 ಗಂಟೆಗೆ ಶಿವಾನಂದ ಸರ್ಕಲ್‌ನ ಗುರುರಾಜ ಕಲ್ಯಾಣ ಮಂಟಪದ ಬಳಿ ನಡೆಯುವ ಪ್ರತಿಭಟನೆಯಲ್ಲಿ ನಟ ಶಿವಣ್ಣ ಭಾಗಿಯಾಗುತ್ತಾರೆ. ಚಿತ್ರರಂಗದ ಹಲವು ನಟರು ಬಂದ್ ಪ್ರತಿಭಟನೆಯಲ್ಲಿ ಭಾಗಿಯಾಗುತ್ತಾರೆ. ನಟ ಶಿವರಾಜ್​ಕುಮಾರ್ ನೇತೃತ್ವದಲ್ಲಿ ನಾಳೆ ಪ್ರತಿಭಟನೆ ಮಾಡುತ್ತೇವೆ ಎಂದರು. ಚಿತ್ರೀಕರಣ, ಚಿತ್ರ ಪ್ರದರ್ಶನ ಸೇರಿದಂತೆ ಎಲ್ಲ ಚಿತ್ರೋದ್ಯಮ ಚಟುವಟಿಕೆಗಳು ಬಂದ್ ಮೂಲಕ ಕಾವೇರಿ ನೀರಿನ ವಿಚಾರದಲ್ಲಿ ಹೋರಾಟಕ್ಕೆ ಇಳಿದಿರುವ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರು ಮತ್ತು ಪದಾಧಿಕಾರಿಗಳು ನಟ ಶಿವರಾಜ್ ಕುಮಾರ್ ಅವರ ಮನೆಗೆ ಆಗಮಿಸಿ ಹೋರಾಟದ ಮುಂದಾಳತ್ವ ವಹಿಸುವಂತೆ ಮನವಿ ಮಾಡಿದ್ದರು. ಈ ನಿಟ್ಟಿನಲ್ಲಿ ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಯಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು