ಬೆಂಗಳೂರು: ಕರ್ನಾಟಕದ ಭಾರೀ ಸದ್ದು ಮಾಡಿದ್ದ 545 ಪಿಎಎಸ್ಐ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಮರು ಪರೀಕ್ಷೆ ನಡೆಸಬೇಕೋ ಅಥವಾ ಆರೋಪಿಗಳನ್ನು ಕೈಬಿಟ್ಟು ಉಳಿದವರನ್ನು ಆಯ್ಕೆ ಮಾಡಬೇಕೋ ಎಂದು ಸರ್ಕಾರದ ಮಟ್ಟದಲ್ಲಿ ಚರ್ಚೆಗಳು ನಡೆದಿವೆ. ಇದರ ಮಧ್ಯೆ ಕರ್ನಾಟಕ ಹೈಕೋರ್ಟ್ ಮಹತ್ವದ ಅಭಿಪ್ರಾಯಪಟ್ಟಿದೆ.
ಆಯ್ಕೆ ಪಟ್ಟಿ ರದ್ದುಪಡಿಸಿದ ಸರ್ಕಾರದ ಕ್ರಮ ಪ್ರಶ್ನಿಸಿ ಸಲ್ಲಿಸಲಾಗಿದ್ದ ರಿಟ್ ಅರ್ಜಿಯನ್ನು ಇಂದು (ಆಗಸ್ಟ್ 04) ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗೀಯ ಪೀಠ, ಮೇಲ್ನೋಟಕ್ಕೆ ಪಿಎಸ್ಐ ಹುದ್ದೆಗಳಿಗೆ ಮರುಪರೀಕ್ಷೆಯೇ ಸೂಕ್ತ ಎಂದು ಅಭಿಪ್ರಾಯ ವ್ಯಕ್ತಪಡಿಸಿದೆ.
2021ರಲ್ಲಿ 545 ಪಿಎಸ್ಐ ಹುದ್ದೆಗಳ ನೇಮಕಾತಿಗೆ ನಡೆದ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿತ್ತು. ಈ ಸಂಬಂಧ ತನಿಕೆ ನಡೆಸಿ 52 ಅಭ್ಯರ್ಥಿಗಳ ವಿರುದ್ಧ ಕೋರ್ಟ್ಗೆ ಚಾರ್ಜ್ಶೀಟ್ ಸಲ್ಲಿಸಲಾಗಿದೆ.