ಬೆಂಗಳೂರು: ಈ ಹಿಂದೆ ರಾಜ್ಯದಲ್ಲಿ ಪಿಎಸ್ಐ ಹಗರಣ ಭಾರಿ ಸದ್ದು ಮಾಡಿತ್ತು. ಈ ನಿಟ್ಟಿನಲ್ಲಿ 545 ಎಸ್ಐ ನೇಮಕಾತಿ ಅಕ್ರಮ ಪ್ರಕರಣದಲ್ಲಿ ಸತ್ಯಾಂಶ ತಿಳಿಯಲು ರಾಜ್ಯ ಸರ್ಕಾರ ಹೈಕೋರ್ಟ್ ನಿವೃತ್ತ ನ್ಯಾಯಮೂರ್ತಿ ನೇತೃತ್ವದ ವಿಚಾರಣಾ ಆಯೋಗ ರಚನೆ ಮಾಡಿದ್ದು, ಇದೀಗ ವೀರಪ್ಪ ನೇತೃತ್ವದ ಆಯೋಗ ಪ್ರಕರಣದ ತನಿಖೆ ಚುರುಕುಗೊಳಿಸಿದೆ.
ಈ ಸಂಬಂಧ ಹೆಚ್.ಡಿ.ಕುಮಾರಸ್ವಾಮಿ, ಬಸನಗೌಡ ಪಾಟೀಲ್ ಯತ್ನಾಳ್, ಧಡೇಸಗೂರು ಬಸವರಾಜ್, ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣಗೆ ಸಮನ್ಸ್ ಜಾರಿ ಮಾಡಲಾಗಿದ್ದು, ಪ್ರಕರಣ ಸಂಬಂಧ ಸಾಕ್ಷ್ಯಗಳಿದ್ದರೆ ಹಾಜರುಪಡಿಸುವಂತೆ ತಿಳಿಸಲಾಗಿದೆ.
ಹೆಚ್.ಡಿ.ಕುಮಾರಸ್ವಾಮಿ, ಬಸನಗೌಡ ಪಾಟೀಲ್ ಯತ್ನಾಳ್, ಧಡೇಸಗೂರು ಬಸವರಾಜ್, ಮಾಜಿ ಡಿಸಿಎಂ ಅಶ್ವತ್ಥ್ ನಾರಾಯಣ ಬಳಿ ಸಾಕ್ಷ್ಯಾಧಾರಗಳಿವೆ ಎಂದು ಹೇಳಿಕೊಂಡಿದ್ದಾರೆ. ಹೀಗಾಗಿ ಇವರನ್ನು ವಿಚಾರಣೆ ನಡೆಸಬೇಕೆಂದು ದೂರುಗಳು ಬಂದಿವೆ. ಈ ಹಿನ್ನೆಲೆಯಲ್ಲಿ ದೂರುದಾರರ ಮನವಿ ಹಿನ್ನೆಲೆ ನ್ಯಾ.ಬಿ.ವೀರಪ್ಪ ಆಯೋಗ ಮೇಲೆ ತಿಳಿಸಲಾದ ಎಲ್ಲರಿಗೂ ಸಮನ್ಸ್ ಜಾರಿ ಮಾಡಿದ್ದು, ಸಾಕ್ಷ್ಯಗಳಿದ್ದರೆ ಹಾಜರುಪಡಿಸುವಂತೆ ಸೂಚಿಸಲಾಗಿದೆ.