ಬೆಂಗಳೂರು: ಅಜಾಗ್ರತ ಸಿನಿಮಾ ಮುಹೂರ್ತ ನೆರವೇರಿದ್ದು, ಏಳು ಭಾಷೆಗಳಲ್ಲಿ ಈ ಸಿನಿಮಾ ನಿರ್ಮಾಣಗೊಳ್ಳಲಿದ್ದು, ಎಂ. ಶಶಿಧರ್ ನಿರ್ದೇಶನ ಮಾಡಿದ್ದಾರೆ. ಚಿತ್ರದ ನಾಯಕಿಯಾಗಿ ರಾಧಿಕಾ ಕುಮಾರಸ್ವಾಮಿ ಅಭಿನಯ ಮಾಡುತ್ತಿದ್ದಾರೆ.
ಬಾಲಿವುಡ್ ಖ್ಯಾತ ನಟ ಶ್ರೇಯಸ್ ತಲ್ಪಾಡೆ ಚಿತ್ರದ ನಾಯಕನಾಗಿ ತೆರೆ ಹಂಚಿಕೊಳ್ಳುವರು. ರಾಧಿಕಾ ಸಹೋದರ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಕನ್ನಡ, ತಮಿಳು, ತೆಲುಗು, ಮಲಯಾಳಂ, ಹಿಂದಿ, ಕೊಂಕಣಿ, ಮರಾಠಿ ಸೇರಿದಂತೆ ಏಳು ಭಾಷೆಗಳಲ್ಲಿ ಚಿತ್ರವನ್ನು ಚಿತ್ರೀಕರಿಸಲಾಗಿದೆ.