ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟದ ಆರೋಪಿಯನ್ನು ಆದಷ್ಟು ಬೇಗ ಬಂಧನ ಮಾಡ್ತೀವಿ ಎಂದು ಗೃಹ ಸಚಿವ ಜಿ. ಪರಮೇಶ್ವರ್ ಹೇಳಿದ್ದಾರೆ.
ಅವರು ಇಂದು ಮಾಧ್ಯಮಗಳೊಂದಿಗೆ ಮಾತನಾಡಿ, 8 ವಿಶೇಷ ತಂಡಗಳನ್ನು ರಚನೆ ಮಾಡಿ. ಎಲ್ಲಾ ಆಯಾಮಗಳಲ್ಲಿ ತನಿಖೆ ಮಾಡುತ್ತಿದ್ದೇವೆ. ಕೆಲವು ಮಾಹಿತಿಗಳು ನಮಗೆ ಲಭ್ಯವಾಗಿವೆ. ಇನ್ನೂ ಹೆಚ್ಚಿನ ಮಾಹಿತಿ ಕಲೆ ಹಾಕ್ತಿದ್ದೇವೆ. ಎಲ್ಲಾ ಆಯಾಮದಲ್ಲೂ ತನಿಖೆ ಆಗ್ತಿದೆ. ವಿಧಿ ವಿಜ್ಞಾನ ಪ್ರಯೋಗಾಲಯದವರು ಈಗಾಗಲೇ ಸ್ಯಾಂಪಲ್ ಕಲೆಕ್ಟ್ ಮಾಡಿ ತಾಂತ್ರಿಕ ಮಾಹಿತಿ ಕಲೆ ಹಾಕ್ತಿದ್ದಾರೆ. ಬಾಂಬ್ ಸ್ಫೋಟಿಸಿದ ಆರೋಪಿ ಬಹುತೇಕ ಮಾಹಿತಿ ಸಿಕ್ಕಿದೆ. ಒಂದೆರಡು ದಿನಗಳಲ್ಲೇ ಆತನನ್ನು ಬಂಧಿಸುತ್ತೇವೆ ಎಂದು ಹೇಳಿದ್ದಾರೆ.