News Karnataka Kannada
Monday, April 29 2024
ಬೆಂಗಳೂರು ನಗರ

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ: ಶಂಕಿತನನ್ನು ಬಳ್ಳಾರಿ ಜೈಲಿನಿಂದ ವಶಕ್ಕೆ ಪಡೆದ ಎನ್​ಐಎ

Rameswaram café bomb blast
Photo Credit : News Kannada

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿ ಪ್ರಮುಖ ಸಂಚುಕೋರನೊಬ್ಬನನ್ನು ಬಳ್ಳಾರಿ ಜೈಲಿನಿಂದ ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.

ಶಂಕಿತ ಉಗ್ರ ಮಿನಾಜ್ ಅಲಿಯಾಸ್ ಸುಲೇಮಾನ್​ನನ್ನು ಎನ್​ಐಎ ವಶಕ್ಕೆ ಪಡೆದಿದೆ. ಎರಡು ದಿನಗಳಿಂದ ಆತನನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ. ಸುಲೇಮಾನ್ ಬಾಂಬ್ ಸ್ಫೋಟಕ್ಕೆ ಸ್ಕೆಚ್ ಹಾಕಿದ್ದ ಸುಳಿವು ಆಧರಿಸಿ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈತ ಬಳ್ಳಾರಿಯ ಕೌನ್ ಬಜಾರ್ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿಯಾಗಿದ್ದಾನೆ.

ದೇಶದಲ್ಲಿ ವಿಧ್ವಂಸಕ ಕೃತ್ಯಕ್ಕೆ ಸಂಚು ಹೂಡುತ್ತಿದ್ದ ಈತನನ್ನು, 2023 ರ ಡಿಸೆಂಬರ್ 18 ರಂದು ಎನ್​ಐಎ ಅಧಿಕಾರಿಗಳು ಮಿನಾಜ್​​ನನ್ನು ಬಂಧಿಸಿದ್ದರು. ಬಳಿಕ ಆತನನ್ನು ಬಳ್ಳಾರಿ ಕೇಂದ್ರ ಕಾರಾಗೃಹದಲ್ಲಿರಿಸಲಾಗಿತ್ತು.ಮಹತ್ವದ ಸುಳಿವು ಆಧರಿಸಿ ಮಾರ್ಚ್ 6 ರಂದೇ ಶಂಕಿತ ಉಗ್ರ ಮಿನಾಜ್​ನನ್ನು ಎನ್​ಐಎ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು. ನಂತರ ನ್ಯಾಯಾಲಯಕ್ಕೆ ಬಾಡಿ ವಾರಂಟ್ ಸಲ್ಲಿಸಿ ಕಸ್ಟಡಿಗೆ ಪಡೆದು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು