News Karnataka Kannada
Monday, May 06 2024
ಬೆಂಗಳೂರು ನಗರ

ಮೀಸಲಾತಿ ವಿಚಾರ ಬಿಜೆಪಿ ಮೋಸದಾಟ ಬಯಲು, ಸುರ್ಜೇವಾಲ

Randeep Singh Surjewala and DK Shivakumar's joint press release
Photo Credit : News Kannada

ಮೈಸೂರು: ಮೀಸಲಾತಿ ವಿಚಾರದಲ್ಲಿ ಬಿಜೆಪಿಯ ಮೋಸದಾಟ ಬಯಲಾಗಿದೆ. ಇದು ಡಬಲ್‌ ಇಂಜಿನ್ ಸರ್ಕಾರದ ದ್ರೋಹವಾಗಿದೆ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಂದೀಪ್ ಸಿಂಗ್ ಸುರ್ಜೆವಾಲ ಅವರು ಬುಧವಾರ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂದು ಮೈಸೂರಿನ ಖಾಸಗಿ ಹೋಟೆಲ್ ನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರೊಂದಿಗೆ ಜಂಟಿ ಸುದ್ದಿಗೋಷ್ಠಿ ಉದ್ದೇಶಿಸಿ   ಸುರ್ಜೆವಾಲ ಅವರು, ಮೀಸಲಾತಿ ವಿಚಾರದಲ್ಲಿ ಬಿಜೆಪಿ ಎಲ್ಲಾ ಸಮುದಾಯದವರನ್ನು ವಂಚಿಸುತ್ತಿದೆ ಎಂದು ಕಾಂಗ್ರೆಸ್ ಸದಾ ಹೇಳುತಿತ್ತು. ಒಕ್ಕಲಿಗ ಮತ್ತು ಲಿಂಗಾಯತರಿಗೆ ಲಾಲಿಪಾಪ್ ಕೊಟ್ಟಂತೆ ಆಗಿದೆ. ಚುನಾವಣೆವರೆಗೂ ಈ ರೀತಿ ಸುಳ್ಳು ಭರವಸೆ ಕೊಡುವುದಾಗಿತ್ತು. ಇದೀಗ ಸುಪ್ರೀಂಕೋರ್ಟ್‌ನಲ್ಲಿ ಅವರ ಮೋಸದಾಟ ಬಯಲಾಗಿದೆ ಎಂದು ಹೇಳಿದರು

ಬೊಮ್ಮಾಯಿ ಸರ್ಕಾರ ತನ್ನ ಮೀಸಲಾತಿ ಹೆಚ್ಚಳ ಆದೇಶ ಸಮರ್ಥಿಸಿಕೊಳ್ಳಲು ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಲು ವಿಫಲವಾಗಿದೆ. ಆಮೂಲಕ ಮೀಸಲಾತಿ ವಿಚಾರದಲ್ಲಿ ಲಿಂಗಾಯತ, ಒಕ್ಕಲಿಗ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ, ಅಲ್ಪಸಂಖ್ಯಾತ ಸಮುದಾಯಗಳಿಗೆ ದ್ರೋಹ ಬಗೆದಿದೆ, ಅಪಮಾನ ಮಾಡಿದೆ.

* ಬೊಮ್ಮಾಯಿ ಸರ್ಕಾರ 2002 ರಲ್ಲಿ ಜಾರಿಗೆ ತಂದಿದ್ದ ಮೀಸಲಾತಿಯನ್ನು ಮರು ಜಾರಿ ಮಾಡುವುದಾಗಿ ಕೋರ್ಟ್ ನಲ್ಲಿ ತಿಳಿಸಿದೆ. ಆಮೂಲಕ ಒಕ್ಕಲಿಗರು 3A ಹಾಗೂ ಲಿಂಗಾಯತರು 3B ವರ್ಗೀಕರಣದಲ್ಲಿ ಮುಂದುವರಿಯಲಿದ್ದಾರೆ.

* ಬೊಮ್ಮಾಯಿ ಸರ್ಕಾರ ಆದೇಶದಂತೆ ಹೆಚ್ಚುವರಿ 2% ಮೀಸಲಾತಿ ಸಿಗುವುದಿಲ್ಲ.

ಬೊಮ್ಮಾಯಿ ಸರ್ಕಾರ ಏ.25, 2023ರಂದು ಸುಪ್ರೀಂ ಕೋರ್ಟ್ ನಲ್ಲಿ ಸಾಲಿಸಿಟರ್ ಜನರಲ್ ಮೂಲಕ, ಮಾರ್ಚ್ 27, 2023ರಂದು ತಾನು ಹೊರಡಿಸಿದ್ದ ಮೀಸಲಾತಿ ಹೆಚ್ಚಳ ಆದೇಶಕ್ಕೆ ತಾನೇ ತಡೆ ಹಿಡಿದಿದ್ದು, ಕ್ಷಮಿಸಲಾರದ ಪಾಪ ಎಸಗಿದೆ.

ಆಮೂಲಕ ಕಾಂಗ್ರೆಸ್ ಪಕ್ಷ ಹೇಳಿದ್ದ ಮಾತು ನಿಜವಾಗಿದೆ. ಬೊಮ್ಮಾಯಿ ಹಾಗೂ ಮೋದಿ ನೇತೃತ್ವದ ಬಿಜೆಪಿ ಡಬಲ್ ಇಂಜಿನ್ ಸರ್ಕಾರಗಳು ಈ ಸಮುದಾಯಗಳಿಗೆ ಡಬಲ್ ದ್ರೋಹ ಬಗೆದಿವೆ.

ದ್ರೋಹ ಬಗೆವ ಬಿಜೆಪಿ ಸರ್ಕಾರದ ಮೂಲ ಉದ್ದೇಶ, ಚುನಾವಣೆ ಸಮಯದಲ್ಲಿ ಮೀಸಲಾತಿ ಹೆಚ್ಚಳ ಹೆಸರಿನಲ್ಲಿ ಈ ಸಮುದಾಯಗಳಿಗೆ ಲಾಲಿಪಾಪ್ ಕೊಟ್ಟು ಯಾಮಾರಿಸುವ ಪ್ರಯತ್ನ ನಡೆದಿದೆ. ಅಂತಿಮವಾಗಿ ಈ ಮೀಸಲಾತಿ ಹೆಚ್ಚಳ ವಿಚಾರ ಕಾನೂನು ಕಟಕಟೆಯಲ್ಲಿ ನಿಂತು ಯಾರಿಗೂ ಮೀಸಲಾತಿ ಸಿಗಬಾರದು, ಮೀಸಲಾತಿ ಹೆಸರಿನಲ್ಲಿ ಮತ ಬ್ಯಾಂಕ್ ರಾಜಕಾರಣ ಮಾಡುವ ಷಡ್ಯಂತ್ರ ರೂಪಿಸಿದೆ.

ಈ ಷಡ್ಯಂತ್ರ ಸುಪ್ರೀಂ ಕೋರ್ಟ್ ನಲ್ಲಿ ಬಟಾಬಯಲಾಗಿದೆ.

ಇದರ ಪರಿಣಾಮಗಳು

1. ಲಿಂಗಾಯತರ ಮೀಸಲಾತಿ ವರ್ಗೀಕರಣ 2Dಯಿಂದ 3Bಗೆ ಮರಳಿದೆ.

2. ಲಿಂಗಾಯತರಿಗೆ ನೀಡಲಾಗಿದ್ದ 2% ಹೆಚ್ಚುವರಿ ಮೀಸಲಾತಿ ಹಿಂಪಡೆದಂತಾಗಿದೆ.

3. ಒಕ್ಕಲಿಗರ ಮೀಸಲಾತಿ ವರ್ಗೀಕರಣ 2Cಯಿಂದ 3Aಗೆ ಮರಳಿದೆ.

4. ಒಕ್ಕಲಿಗರಿಗೆ ನೀಡಲಾಗಿದ್ದ 2% ಹೆಚ್ಚುವರಿ ಮೀಸಲಾತಿ ಹಿಂಪಡೆದಂತಾಗಿದೆ.

5. ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳ ಮೀಸಲಾತಿ ಹೆಚ್ಚಳವನ್ನು ಕೇಂದ್ರ ಸರ್ಕಾರ ಮಾರ್ಚ್ 14, 2023ರಂದು ಸಂಸತ್ತಿನಲ್ಲಿ ನಿರಾಕರಿಸಿದೆ.

6. ಒಟ್ಟಾರೆ ಇದೆಲ್ಲದರ ಫಲ ಯಾರಿಗೂ ಯಾವುದೇ ಮೀಸಲಾತಿ ಸಿಗದೆ ಎಲ್ಲರಿಗೂ ವಂಚನೆ ಮಾಡಲಾಗಿದೆ.

7. ಬೊಮ್ಮಾಯಿ ಸರ್ಕಾರ 2002 ಅಕ್ಟೋಬರ್ 30ರಂದು ಜಾರಿ ಮಾಡಲಾಗಿದ್ದ ಮೀಸಲಾತಿಯನ್ನು ಮರುಜಾರಿಗೆ ತಂದಿದೆ.

ಈ ಪ್ರಶ್ನೆಗಳಿಗೆ ಮೋದಿ – ಬೊಮ್ಮಾಯಿ ಸರ್ಕಾರ ಉತ್ತರಿಸಲಿ

1. ಒಕ್ಕಲಿಗರು, ಲಿಂಗಾಯತರು, ಪರಿಶಿಷ್ಟ ಜಾತಿ ಮತ್ತು ಪಂಗಡದ ಸಮುದಾಯಗಳಿಗೆ ಸುಳ್ಳಿನ ಮೀಸಲಾತಿ ಘೋಷಿಸಿ ಮೋಸ ಮಾಡಿದ್ದು ಯಾಕೆ?

2. ಸರ್ಕಾರ ತನ್ನ ಮೀಸಲಾತಿ ಹೆಚ್ಚಳ ಆದೇಶವನ್ನು ಸುಪ್ರೀಂ ಕೋರ್ಟ್ ನಲ್ಲಿ ಸಮರ್ಥಿಸಿಕೊಳ್ಳುತ್ತಿಲ್ಲ ಯಾಕೆ?

3. ಮೀಸಲಾತಿ ಪ್ರಕರಣದಲ್ಲಿ ಮೋದಿ ಹಾಗೂ ಬೊಮ್ಮಾಯಿ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಅಫಿಡವಿಟ್ ಸಲ್ಲಿಸಿಲ್ಲ ಯಾಕೆ?

4. ಮಾರ್ಚ್ 14, 2023ರಂದು ಕೇಂದ್ರ ಸರ್ಕಾರ ಸಂಸತ್ತಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೀಸಲಾತಿ ಹೆಚ್ಚಳವನ್ನು ನಿರಾಕರಿಸಿದ್ದು ಯಾಕೆ?

5. ಪರಿಶಿಷ್ಟ ಜಾತಿ ಹಾಗೂ ಪಂಗಡಗಳ ಮೀಸಲಾತಿ ಹೆಚ್ಚಳ ಕಾನೂನನ್ನು ಸಂವಿಧಾನದ 9ನೇ ಶೆಡ್ಯೂಲ್ ನಲ್ಲಿ ಸೇರಿಸಲಿಲ್ಲ ಏಕೆ?

6. ಪರಿಶಿಷ್ಟ ಜಾತಿ ಹಾಗೂ ಪಂಗಡಗಳು, ಲಿಂಗಾಯತರು, ಒಕ್ಕಲಿಗರು, ಹಿಂದುಳಿದ ವರ್ಗಗಳು ಹಾಗೂ ಇತರ ಸಮುದಾಯಗಳು ಮೀಸಲಾತಿ ಹೆಚ್ಚಳ ಬೇಡಿಕೆ ಇಟ್ಟಿದ್ದು, ಇವರ ಆಶೋತ್ತರ ಈಡೇರಿಸಲು 50% ಇರುವ ಮೀಸಲಾತಿ ಮಿತಿ ವಿಸ್ತರಣೆ ಮಾಡಲು ನಿರಾಕರಿಸುತ್ತಿರುವುದು ಏಕೆ?

7. ಚುನಾವಣೆ ಸಮಯದಲ್ಲಿ ಸಮಾಜ ಒಡೆದು ರಾಜಕೀಯ ಲಾಭಕ್ಕಾಗಿ ಅಲ್ಪಸಂಖ್ಯಾತರನ್ನು ಗುರಿ ಮಾಡುತ್ತಿರುವುದೇಕೆ?

8. ಮೀಸಲಾತಿ ಹೆಚ್ಚಳ ನಿರ್ಧಾರವನ್ನು ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ಹೇಳಿಕೆ ಮೂಲಕ ತಡೆ ನೀಡಿರುವುದೇಕೆ?

9. ಪರಿಶಿಷ್ಟ ಜಾತಿ ಹಾಗೂ ಪಂಗಡಗಳು, ಲಿಂಗಾಯತರು, ಒಕ್ಕಲಿಗರು, ಹಿಂದುಳಿದ ವರ್ಗಗಳಿಗೆ ಮೀಸಲಾತಿ ವಿಚಾರದಲ್ಲಿ ಆಗಿರುವ ಮೋಸಕ್ಕೆ ಪ್ರಧಾನಿ ಮೋದಿ ಅವರು ಸಾರ್ವಜನಿಕವಾಗಿ ಕ್ಷಮೆ ಕೇಳುವರೆ?

ಇಷ್ಟೇಲ್ಲಾ ದ್ರೋಹ ಬಗೆದಿರುವ ಬಿಜೆಪಿಗೆ ರಾಜ್ಯದ ಮತದಾರರು 40ಕ್ಕಿಂತ ಹೆಚ್ಚಿನ ಸೀಟು ನೀಡುವುದಿಲ್ಲ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು