News Karnataka Kannada
Sunday, April 14 2024
Cricket
ಬೆಂಗಳೂರು ನಗರ

ಗೃಹ ಲಕ್ಷ್ಮೀ ಯೋಜನೆಗೆ ಜುಲೈ 19 ರಿಂದ ನೋಂದಣಿ

Video case to be handed over to CID for deeper investigation: Minister Laxmi Hebbalkar
Photo Credit : Twitter

ಬೆಂಗಳೂರು: ಗೃಹ ಲಕ್ಷ್ಮೀ ಯೋಜನೆ ಕುರಿತು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ ನೀಡಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು ಗೃಹ ಲಕ್ಷ್ಮೀ ಯೋಜನೆಗೆ ಫಲಾನುಭವಿಗಳ ನೋಂದಣಿ ಜುಲೈ 19 ರಿಂದ ಆರಂಭವಾಗಲಿದೆ. ಪಡಿತರ ಚೀಟಿಯಲ್ಲಿ ಯಜಮಾನಿ ಮಹಿಳೆ ಎಂದು ಗುರುತಿಸಿರುವ ಮಹಿಳೆ ಯೋಜನೆಯ ಫಲಾನುಭವಿಯಾಗಿರುತ್ತಾರೆ. ಫಲಾನುಭವಿ ಮಹಿಳೆ ಅಥವಾ ಆಕೆಯ ಪತಿ ಆದಾಯ ತೆರಿಗೆ ಅಥವಾ ಜಿಎಸ್​ಟಿ ಪಾವತಿದಾರರಾಗಿರತಕ್ಕದ್ದಲ್ಲ.

ರೇಷನ್ ಕಾರ್ಡ್​ನಲ್ಲಿ ಗುರುತಿಸಲಾಗಿರುವ ಪ್ರತಿಯೊಬ್ಬ ಯಜಮಾನಿ ಮಹಿಳೆಗೂ ದಿನಾಂಕ, ಸಮಯ ಮತ್ತು ನೋಂದಣಿ ಸ್ಥಳದ ವಿವರ ಎಸ್​ಎಂಎಸ್ ಮೂಲಕ ರವಾನೆ ಮಾಡಲಾಗುವುದು. ಗ್ರಾಮೀಣ ಪ್ರದೇಶದಲ್ಲಿ ಗ್ರಾಮ ವನ್ ಕೇಂದ್ರ ಅಥವಾ ಬಾಪೂಜಿ ಸೇವಾ ಕೇಂದ್ರದಲ್ಲಿ ನೋಂದಣಿಗೆ ಅವಕಾಶ ಮಾಡಲಾಗುವುದು ಎಂದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು