News Karnataka Kannada
Friday, May 10 2024
ಬೆಂಗಳೂರು ನಗರ

ಅನಾರೋಗ್ಯದಿಂದ ಬಳಲುತ್ತಿದ್ದ ಖ್ಯಾತ ಆಹಾರ ತಜ್ಞ ಕೆ. ಸಿ ರಘು ವಿಧಿವಶ

Renowned dietician K. C Raghu passes away
Photo Credit : News Kannada

ಬೆಂಗಳೂರು: ಖ್ಯಾತ ಆಹಾರ ತಜ್ಞ ಕೆ.ಸಿ ರಘು ( 60 ) ಅವರು ವಿಧಿವಶರಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದ ರಘು ಇಂದು(ಅಕ್ಟೋಬರ್ 15) ಬೆಳಗ್ಗೆ ಬೆಂಗಳೂರಿನ ತಮ್ಮ ನಿವಾಸದಲ್ಲಿ ನಿಧನರಾಗಿದ್ದಾರೆ. ಶ್ವಾಸಕೋಶದ ಕ್ಯಾನ್ಸರ್‌ಗೆ ತುತ್ತಾಗಿದ್ದ ಅವರು, ಇಂದು ಬೆಳಗ್ಗೆ ಬೆಂಗಳೂರಿನ ದಾಸರಹಳ್ಳಿಯ ಅಮೃತ ನಗರದಲ್ಲಿರುವ ಅವರ ನಿವಾಸದಲ್ಲಿ 7.30ರ ಸುಮಾರಿಗೆ ನಿಧನರಾಗಿದ್ದಾರೆ ಎಂದು ಅವರ ಪತ್ನಿ ಆಶಾ ರಘು ಫೇಸ್‌ಬುಕ್‌ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.

ಅವರು ಸ್ಥಾಪಿಸಿದ ಪ್ರಿಸ್ಟೀನ್ ಆರ್ಗ್ಯಾನಿಕ್ಸ್ ಎಂಬ ಸಂಸ್ಥೆಯಲ್ಲಿ ನವಜಾತ ಶಿಶುಗಳಲ್ಲಿ ಕಂಡುಬರುವ ಮಾರಕ ಕಾಯಿಲೆಗಳಿಗೆ ಪೌಷ್ಟಿಕಾಂಶದ ಪರಿಹಾರ ವನ್ನು ಸಂಶೋಧನೆಯಿಂದ ಕಂಡುಹಿಡಿದು, ದೇಶಾದ್ಯಂತ ಹಾಗೂ ವಿದೇಶಕ್ಕೂ ಒದಗಿಸುತ್ತಿದ್ದರು. ನಿರರ್ಗಳವಾಗಿ ಮಾತನಾಡುತ್ತಿದ್ದ ರಘು ಅವರು ಆಹಾರ ಆರೋಗ್ಯದ ವಿಚಾರದಲ್ಲಿಅತ್ಯದ್ಭುತ ಜ್ಞಾನ ಹೊಂದಿದ್ದರು. ಆದರೆ ರಘು ಅವರು ವಯಸ್ಸಲ್ಲದ ವಯಸ್ಸಿನಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 3 / 5. Vote count: 2

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು