ಬೆಂಗಳೂರು: ಕಾಂಗ್ರೆಸ್ನಲ್ಲಿ ಸಿಎಂ ಕುರ್ಚಿಗಾಗಿ ಸಿದ್ದರಾಮಯ್ಯ ಮತ್ತು ಡಿ.ಕೆ. ಶಿವಕುಮಾರ್ ಮಧ್ಯೆ ಜಿದ್ದಾಜಿದ್ದಿನ ಫೈಟ್ ಮುಂದುವರಿಯುತ್ತಿದೆ. ಈ ನಿಟ್ಟಿನಲ್ಲಿ ಚರ್ಚೆಗಾಗಿ ದೆಹಲಿಗೆ ತೆರಳಿದ ಡಿ.ಕೆ ಶಿವಕುಮಾರ್ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ್ದಾರೆ. ಕಾಂಗ್ರೆಸ್ ಪಕ್ಷ ನನ್ನ ಪಾಲಿನ ದೇವರು. ಕಾಂಗ್ರೆಸ್ ಪಕ್ಷ ನನ್ನ ಪಾಲಿನ ದೇವಾಲಯ. ಕಾಂಗ್ರೆಸ್ ಪಕ್ಷ ನನಗೆ ತಾಯಿ ಇದ್ದಂತೆ. ದೇವರು ಮತ್ತು ತಾಯಿಗೆ ಮಕ್ಕಳಿಗೆ ಏನು ನೀಡಬೇಕು ಎಂಬುದು ಗೊತ್ತಿರುತ್ತದೆ. ನಾನು ನನ್ನ ದೇವರನ್ನು ಭೇಟಿ ಮಾಡಲು ದೇವಾಲಯಕ್ಕೆ ಹೋಗುತ್ತಿದ್ದೇನೆ. ನಾನು ಒಬ್ಬನೇ ಹೋಗುತ್ತಿದ್ದೇನೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಒಬ್ಬನೇ ಬರುವಂತೆ ಹೇಳಿದ್ದಾರೆ. ಹೀಗಾಗಿ ಒಬ್ಬನೇ ಹೋಗುತ್ತಿದ್ದೇನೆ ಎಂದು ಹೇಳಿದರು.
ಪಕ್ಷವೇ ದೇವರು ಎಂದು ಪ್ರತಿಕ್ರಿಯೆ ನೀಡಿ ದೆಹಲಿಗೆ ತೆರಳಿದ ಡಿ.ಕೆ. ಶಿವಕುಮಾರ್
Photo Credit :
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.