ಬೆಂಗಳೂರು: ಬನ್ನೇರುಘಟ್ಟ ರಸ್ತೆಯ ಡಿಮಾರ್ಟ್ ಬಳಿ ಬೈಕ್ಗೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ಮೃತರನ್ನು ಅರುಣ್ (28 ವರ್ಷ) ಎಂದು ಗುರುತಿಸಲಾಗಿದೆ. ಕ್ಯಾಬ್ ಜೆಮಿನಿ ಸಾಫ್ಟ್ವೇರ್ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಅರುಣ್, ಕಳೆದ ರಾತ್ರಿ 12 ಗಂಟೆ ಸುಮಾರಿಗೆ ಕೆಲಸ ಮುಗಿಸಿ ಮನೆಗೆ ಹೋಗುವಾಗ ಅಪಘಾತ ಸಂಭವಿಸಿದೆ.
ಕುಮಾರಸ್ವಾಮಿ ಲೇಔಟ್ ಸಂಚಾರಿ ಟ್ರಾಫಿಕ್ ಪೊಲೀಸರು ಲಾರಿ ಚಾಲಕನನ್ನು ಬಂಧಿಸಿದ್ದಾರೆ