ಬೆಂಗಳೂರು: ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪ ಮೌದ್ಗಿಲ್ ನಡುವಿನ ಕದನ ಇದೀಗ ಕೋರ್ಟ್ ಮೆಟ್ಟಿಲೇರಿದೆ. ರೂಪಾ ಅವರು ತಮ್ಮ ವಿಚಾರ ಪ್ರಸ್ತಾಪ ಮಾಡದಂತೆ ಸಿಂಧೂರಿ ಬೆಂಗಳೂರು ಸಿವಿಲ್ ಕೋರ್ಟ್ಗೆ ನಿರ್ಭಂಧಕಾಜ್ಞೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಜಾಲತಾಣ ಮೂಲಕ ರೂಪಾ ನನ್ನ ತೇಜೋವಧೆ ಮಾಡಿದ್ದಾರೆ ಎಂದು ಸಿಂಧೂರಿ ಅರ್ಜಿಯಲ್ಲಿ ವಿವರಿಸಿದ್ದಾರೆ.
ಕರ್ನಾಟಕ ರಾಜ್ಯ ಕರಕುಶಲ ಅಭಿವೃದ್ಧಿ ನಿಗಮ ನಿಯಮಿತದಲ್ಲಿ ವ್ಯವಸ್ಥಾಪಕ ನಿರ್ದೇಶಕಿಯಾಗಿ ಸೇವೆ ಸಲ್ಲಿಸಿದ ಹಿರಿಯ ಐಪಿಎಸ್ ಅಧಿಕಾರಿ ಡಿ.ರೂಪ ಮೌದ್ಗಿಲ್ ಮತ್ತು ಹಿಂದೂ ಧಾರ್ಮಿಕ ಮತ್ತು ದತ್ತಿ ಇಲಾಖೆ ಆಯುಕ್ತರಾಗಿ ಸೇವೆ ಸಲ್ಲಿಸಿದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರನ್ನು ಮಂಗಳವಾರ ಕರ್ನಾಟಕ ಸರ್ಕಾರ ವರ್ಗಾವಣೆ ಮಾಡಿದ್ದನ್ನು ಗಮನಿಸಬಹುದು.